ಉಡುಪಿ:ಪಿ.ಎಂ ಶ್ರಮಯೋಗಿ ಮಾನ್ ಧನ್ ಯೋಜನೆ : ಪರಿಣಾಮಕಾರಿ ಅನುಷ್ಠಾನಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ: ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವಪ್ರಧಾನ ಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಸಂಘಟಿತ ಕಾರ್ಮಿಕರುಗಳನ್ನು ನೋಂದಣಿ ಮಾಡಿಸುವುದರೊಂದಿಗೆ ಯೋಜನೆಯನ್ನು ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಬೇಕು ಎಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೇಂದ್ರ ಸರ್ಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ಧನ್ ಯೋಜನೆಯ ಪ್ರಗತಿ ಪರಿಶೀಲನೆಯ ಕುರಿತು ಇಲಾಖಾ […]
ಉಡುಪಿ:ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಪಾವಿತ್ರ್ಯತೆ ಕಾಪಾಡಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ದ್ವಿತೀಯ ಪಿ.ಯು.ಸಿ ಪರೀಕ್ಷೆಯು ಫೆಬ್ರವರಿ 28 ರಿಂದ ಮಾರ್ಚ್ 17 ರವರೆಗೆ ನಡೆಯಲಿದ್ದು, ಪರೀಕ್ಷಾ ಕೇಂದ್ರದಲ್ಲಿಪರೀಕ್ಷಾ ಪಾವಿತ್ರ್ಯತೆಯನ್ನು ಕಾಪಾಡುವುದರೊಂದಿಗೆ ಗೊಂದಲಗಳಿಗೆ ಆಸ್ಪದ ನೀಡದೇ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಅನುವುಮಾಡಿಕೊಡಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕೆಸ್ವಾನ್ ವಿಡಿಯೋ ಕಾನ್ಫ್ರೆನ್ಸ್ ಸಭಾಂಗಣದಲ್ಲಿ ಪ್ರಸಕ್ತ ಸಾಲಿನದ್ವಿತೀಯ ಪಿ.ಯು.ಸಿ ಪರೀಕ್ಷೆ-01 ನ್ನು ಸುವ್ಯವಸ್ಥಿತವಾಗಿ ನಡೆಸುವ ಕುರಿತು ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ದ್ವಿತೀಯ […]
ಉಡುಪಿ:ರಾ.ಹೆ. 169 ಎ ರ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ : ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಕಾರ್ಕಳದಲ್ಲಿ ಹಾದುಹೋಗುವ 169 ಎ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಅಗತ್ಯವಿರುವ ಭೂ ಸ್ವಾಧೀನ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸುವುದರ ಜೊತೆಗೆ ಭೂ ಮಾಲೀಕರಿಗೆ ಪರಿಹಾರದ ಹಣವನ್ನು ವೈಜ್ಞಾನಿಕವಾಗಿ ಮೌಲ್ಯವನ್ನು ನಿಗಧಿಪಡಿಸಿ ನೀಡಬೇಕೆಂದು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ ನೀಡಿದರು. ಅವರು ಮಂಗಳವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕಾರ್ಕಳ, ಬಜಗೋಳಿ, ಮಾಳ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳ ಪ್ರಗತಿ ಮತ್ತು ಭೂ ಸ್ವಾಧೀನ ಪರಿಹಾರ ಪಾವತಿಗೆ ಸಂಬಂಧಿಸಿದಂತೆ […]
ಮಂಗಳೂರು: ಶಿಕ್ಷಣ ಕ್ಷೇತ್ರದ ದಿಗ್ಗಜ ಡಾ. ಸಿಎ ಎ. ರಾಘವೇಂದ್ರ ರಾವ್ ನಿಧನ

ಮಂಗಳೂರು : ಶಿಕ್ಷಣ ಮತ್ತು ವಾಣಿಜ್ಯ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿದ್ದ ಖ್ಯಾತ ಶಿಕ್ಷಣ ತಜ್ಞ ಹಾಗೂ ಉದ್ಯಮಿ ಡಾ. ಸಿಎ ಎ. ರಾಘವೇಂದ್ರ ರಾವ್(88) ಅವರು ಫೆ. 17ರಂದು ನಿಧನರಾದರು.ಎಲ್ಲರಿಗೂ ಗುಣಮಟ್ಟದ, ಸುಸ್ಥಿರ ಮತ್ತು ಮೌಲ್ಯಾಧಾರಿತ ಶಿಕ್ಷಣ ಒದಗಿಸುವ ಉದ್ದೇಶದಿಂದ ಅವರು 1988ರಲ್ಲಿ A. Shama Rao Foundation ಅನ್ನು ಸ್ಥಾಪಿಸಿದರು. ಈ ಪ್ರತಿಷ್ಠಾನದ ಅಡಿಯಲ್ಲಿ ಬೆಳೆದ Srinivas Group of Colleges ಇಂದು ರಾಜ್ಯದ ಪ್ರಮುಖ ಶೈಕ್ಷಣಿಕ ಸಮೂಹವಾಗಿ ಗುರುತಿಸಿಕೊಂಡಿದೆ. ಆರಂಭದಲ್ಲಿ ಕೇವಲ ಏಳು […]
ಉಡುಪಿ: ಅಸ್ಸಾಂ ಪ್ರವಾಸಕ್ಕೆ ತೆರಳಿದ್ದ ಯುವಕ ಮೃತ್ಯು

ಉಡುಪಿ: ಅಸ್ಸಾಂ ರಾಜ್ಯದ ಗುವಾಹಟಿಗೆ ಪ್ರವಾಸಕ್ಕೆ ತೆರಳಿದ್ದ ಉಡುಪಿಯ ತಂಡದಲ್ಲಿದ್ದ ಓರ್ವ ಯುವಕ ಅನಾರೋಗ್ಯದಿಂದ ಮೃತಪಟ್ಟ ಘಟನೆ ವರದಿಯಾಗಿದೆ. ಮೃತರನ್ನು ಅಶೋಕ್ ಆಚಾರ್ಯ (33) ಎಂದು ಗುರುತಿಸಲಾಗಿದೆ. ಅವರು ಉಡುಪಿ ಜಿಲ್ಲೆಯ ಕಾಪು ತಾಲೂಕು ಕಟಪಾಡಿ ಸಮೀಪದ ಸರಕಾರಿಗುಡ್ಡೆ ನಿವಾಸಿಯಾಗಿದ್ದರು. ಪ್ರವಾಸದ ವೇಳೆ ಅಶೋಕ್ ಆಚಾರ್ಯ ಅವರಿಗೆ ತಲೆಯಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣ ಅಸ್ವಸ್ಥತೆ ಉಂಟಾಗಿ ತಕ್ಷಣ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಯುವಕನ ಅಕಾಲಿಕ ಸಾವಿನಿಂದ ಕುಟುಂಬಸ್ಥರು […]