ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಇಲಾಖೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದ ಹೆಲಿಪ್ಯಾಡ್‌ಗೆ ಆಗಮಿಸಿ, ನಂತರ ಹೆಬ್ರಿಯ ಸರ್ಕಾರಿ ಪಿ.ಯು ಕಾಲೇಜಿನ ಆವರಣದಲ್ಲಿ ನಡೆಯಲಿರುವ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಏರ್ಪಡಿಸಲಾಗಿರುವ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ, ನಂತರ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರ್ಯಕ್ರಮ

ಉಡುಪಿ: ರಾಜ್ಯದ ಆಹಾರ, ನಾಗರೀಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಸೆಪ್ಟಂಬರ್ 18 ಮತ್ತು 19 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಸೆ. 18 ರಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್‌ಗೆ ಆಗಮಿಸುವ ಅವರು ನಂತರ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಏರ್ಪಡಿಸಲಾಗಿರುವ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಭಾಗವಹಿಸಿ, ನಂತರ ಮಂಗಳೂರಿಗೆ ಹೆಲಿಕಾಪ್ಟರ್ ಮೂಲಕ ತೆರಳಲಿದ್ದಾರೆ. ಸೆ. 19 ರಂದು ಬೆಳಗ್ಗೆ 9.30 […]

ಮಾನ್ಯ ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮ

ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ಅವರು ಸೆಪ್ಟಂಬರ್ 18 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದು, ಅಂದು ಮಧ್ಯಾಹ್ನ 3 ಗಂಟೆಗೆ ಹೆಬ್ರಿ ಹೆಲಿಪ್ಯಾಡ್‌ಗೆ ಆಗಮಿಸುವ ಅವರು ನಂತರ ಹೆಬ್ರಿಯಲ್ಲಿ ಕಸ್ತೂರಿರಂಗನ್ ವರದಿಗೆ ಸಂಬಂಧಪಟ್ಟಂತೆ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ ಹೆಲಿಕಾಪ್ಟರ್ ಮೂಲಕ ಮಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

ಇಡೀ ವಿಶ್ವವನ್ನೇ ತನ್ನ ಕೈಚಳಕದ ಮೂಲಕ ನಿರ್ಮಾಣ ಮಾಡಿದ ವಾಸ್ತುಶಿಲ್ಪಿ ವಿಶ್ವಕರ್ಮರು: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ: ಭಾರತೀಯ ಸಂಸ್ಕೃತಿ, ಪುರಾಣ, ಧಾರ್ಮಿಕ ಪರಂಪರೆ ಹಾಗೂ ಶಿಲ್ಪಕಲೆಯ ಇತಿಹಾಸದ ಬಗ್ಗೆ ಅವಲೋಕಿಸಿದಾಗ ‘ವಿಶ್ವಕರ್ಮ’ ಎಂಬ ಹೆಸರು ಅತ್ಯಂತ ಮಹತ್ವಪೂರ್ಣವಾಗಿ ಕಾಣಿಸುತ್ತದೆ. ತಂತ್ರಜ್ಞಾನದ ಪರಿವೇ ಇಲ್ಲದ ಸಾವಿರಾರು ವರ್ಷಗಳ ಹಿಂದೆ ತನ್ನ ಕೈಚಳಕದಿಂದ ಇಡೀ ವಿಶ್ವವನ್ನೇ ನಿರ್ಮಾಣ ಮಾಡುವ ಮೂಲಕ ದೇವಶಿಲ್ಪಿ ಹಾಗೂ ವಿಶ್ವದ ಸೃಷ್ಟಿಕರ್ತನೆಂದು ವಿಶ್ವಕರ್ಮರು ಗುರುತಿಸಿಕೊಂಡಿದ್ದಾರೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಅವರು ಇಂದು ನಗರದ ಕುಂಜಿಬೆಟ್ಟು ಗಾಯತ್ರಿ ಕಲ್ಯಾಣ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು […]

ಕಾಂಗ್ರೆಸ್ ಬಲವರ್ಧನೆಗೆ ತಳಮಟ್ಟದಿಂದಲೇ ಕಾರ್ಯ: ಕಿಶನ್ ಹೆಗ್ಡೆ

ಉಡುಪಿ: ಉಡುಪಿ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಗುರುವಾರ ಅಧಿಕಾರ ಸ್ವೀಕರಿಸಿದರು. ಬ್ರಹ್ಮಗಿರಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ನಿರ್ಗಮನ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು ಕಿಶನ್ ಹೆಗ್ಡೆ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅಧಿಕಾರ ಸ್ವೀಕರಿಸಿ ಮಾತನಾಡಿದ ಕಿಶನ್ ಹೆಗ್ಡೆ, ‘ತಾನು ತೆಗೆದುಕೊಳ್ಳುವ ಪ್ರತಿಯೊಂದು ನಿರ್ಣಯವೂ ಕಾಂಗ್ರೆಸ್ ಅಧ್ಯಕ್ಷನ ನಿರ್ಣಯವಲ್ಲ; ಸಾಮಾನ್ಯ ಕಾರ್ಯಕರ್ತನ ನಿರ್ಣಯವಾಗಿರುತ್ತದೆ. ಪಕ್ಷ ನೀಡಿದ ಅವಕಾಶ ಹಾಗೂ ಗೌರವವನ್ನು ಎಂದಿಗೂ ಮರೆಯುವುದಿಲ್ಲ’ ಎಂದರು. ‘ತಮ್ಮ ವಿಚಾರಗಳನ್ನು ವೇದಿಕೆಯಲ್ಲಿ […]