ಉಡುಪಿ:ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಜಾತ್ರಾ ಮಹೋತ್ಸವ : ಮದ್ಯ ಮಾರಾಟ ನಿಷೇಧ
ಉಡುಪಿ: ಬ್ರಹ್ಮಾವರ ಪೊಲೀಸ್ ಠಾಣಾ ಸರಹದ್ದಿನ ಹೆಗ್ಗುಂಜೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಂದಾರ್ತಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವಾರ್ಷಿಕ ಜಾತ್ರೆ ಪ್ರಯುಕ್ತ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ ಕರ್ನಾಟಕಅಬಕಾರಿ (ಭಾರತೀಯ ಮತ್ತು ವಿದೇಶೀಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಹೆಗ್ಗುಂಜೆ ಗ್ರಾಮ ಪಂಚಾಯತ್ […]
ಉಡುಪಿ:ಉತ್ತಮ ನಾಯಕತ್ವ ಕೌಶಲ್ಯಗಳನ್ನು ಯುವಜನರು ಅಳವಡಿಸಿಕೊಳ್ಳಿ : ಬಸ್ರೂರು ರಾಜೀವ್ ಶೆಟ್ಟಿ

ಉಡುಪಿ: ದೇಶದ ಭವಿಷ್ಯವನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಲಿರುವ ಯುವಜನರಲ್ಲಿ ಸೃಜನಶೀಲತೆ ಮತ್ತು ನಾಯಕತ್ವ ಕೌಶಲ್ಯಗಳನ್ನು ಅಭಿವೃದ್ಧಿ ಪಡಿಸುವ ಉದ್ದೇಶದಿಂದ ಸೃಜನಶೀಲತೆ ಮತ್ತು ವ್ಯಕ್ತಿ ವಿಕಸನ ಶಿಬಿರವನ್ನು ಆಯೋಜಿಸಲಾಗಿದ್ದು, ಯುವಜನತೆತರಬೇತಿಯ ಲಾಭ ಪಡೆದುಕೊಂಡು ಸಮಾಜಕ್ಕೆ ಉತ್ತಮ ಕೊಡುಗೆ ನೀಡುವಂತಾಗಬೇಕು ಎಂದು ರಾಜ್ಯ ರೆಡ್ಕ್ರಾಸ್ ಸಭಾಪತಿ ಬಸ್ರೂರು ರಾಜೀವ್ ಶೆಟ್ಟಿ ಹೇಳಿದರು. ಅವರು ಗುರುವಾರ ನಗರದ ಬ್ರಹ್ಮಗಿರಿಯ ಭಾರತೀಯ ರೆಡ್ಕ್ರಾಸ್ ಸಭಾಂಗಣದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಭಾರತೀಯ ರೆಡ್ಕ್ರಾಸ್ ಘಟಕ ಉಡುಪಿ ಜಿಲ್ಲೆ ಇವರ […]
ಉಡುಪಿ: ಪಿಕಪ್ ವಾಹನ ಹರಿದು ದ್ವಿಚಕ್ರ ವಾಹನ ಸವಾರ ಮೃತ್ಯು

ಉಡುಪಿ: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಮೃತಪಟ್ಟ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಮೃತ ಸವಾರನನ್ನು ಗೋಪಾಲ್ ಸಗ್ರಿ (65) ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಮಣಿಪಾಲ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿರುವ ಡಿವೈಡರ್ ಬಳಿ ಮತ್ತೊಂದು ಬೈಕ್ ಸವಾರನೋರ್ವ ಒಮ್ಮೇಲೆ ತಿರುವು ತೆಗೆದುಕೊಂಡು ರಸ್ತೆಗೆ ನುಗ್ಗಿದ್ದು, ಇದರಿಂದ ನಿಯಂತ್ರಣ ಕಳೆದುಕೊಂಡ ಗೋಪಾಲ್ ಅವರು […]
ಉಡುಪಿ: ಪಿಕಪ್ ವಾಹನ ಹರಿದು ದ್ವಿಚಕ್ರ ವಾಹನ ಸವಾರಗೆ ಗಂಭೀರ ಗಾಯ

ಉಡುಪಿ: ಪಿಕಪ್ ವಾಹನವೊಂದು ಮೈಮೇಲೆ ಹರಿದ ಪರಿಣಾಮ ದ್ವಿಚಕ್ರ ವಾಹನ ಸವಾರನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿ ಎಂಜಿಎಂ ಕಾಲೇಜಿನ ಮುಂಭಾಗ ರಾಷ್ಟ್ರೀಯ ಹೆದ್ದಾರಿ 169(ಎ) ರಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದೆ. ಗಂಭೀರ ಗಾಯಗೊಂಡ ಸವಾರನನ್ನು ಗೋಪಾಲ್ ಸಗ್ರಿ ಎಂದು ಗುರುತಿಸಲಾಗಿದೆ. ಇವರು ತನ್ನ ಬೈಕ್ ನಲ್ಲಿ ಮಣಿಪಾಲ ಕಡೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಎಂಜಿಎಂ ಕಾಲೇಜಿನ ಮುಂಭಾಗದಲ್ಲಿರುವ ಡಿವೈಡರ್ ಬಳಿ ಮತ್ತೊಂದು ಬೈಕ್ ಸವಾರನೋರ್ವ ಒಮ್ಮೇಲೆ ತಿರುವು ತೆಗೆದುಕೊಂಡು ರಸ್ತೆಗೆ ನುಗ್ಗಿದ್ದು, ಇದರಿಂದ ನಿಯಂತ್ರಣ ಕಳೆದುಕೊಂಡ ಗೋಪಾಲ್ […]
ಭಾರತೀಯ ಸೇನೆಯಿಂದ ನಿವೃತ್ತಿ ಹೊಂದಿ ಹುಟ್ಟೂರಿಗೆ ಆಗಮಿಸಿದ ಯೋಧನಿಗೆ ಅದ್ಧೂರಿ ಸ್ವಾಗತ

ಉಡುಪಿ: ಭಾರತೀಯ ಸೇನೆಯಲ್ಲಿ 22 ವರ್ಷ ಸೇವೆ ಸಲ್ಲಿಸಿ ನಿವೃತ್ತರಾಗಿ ಹುಟ್ಟೂರಿಗೆ ಮರಳುತ್ತಿರುವ ಸೇನಾನಿ ಪೆರ್ಡೂರು ದೂಪದಕಟ್ಟೆಯ ರಮೇಶ್ ಕುಲಾಲ್ ಇವರನ್ನು ಉಡುಪಿ ರೈಲ್ವೆ ನಿಲ್ದಾಣದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುತ್ಯಾರ್ ನವೀನ್ ಶೆಟ್ಟಿಯವರು ಹೂಬೊಕ್ಕೆಯನ್ನು ಕೊಟ್ಟು ಸ್ವಾಗತಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶ್ರೀಮತಿ ರೇಷ್ಮಾ ಉದಯ ಶೆಟ್ಟಿ, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ಆತ್ರಾಡಿ, ಜಿಲ್ಲಾ ಕಾರ್ಯದರ್ಶಿ ಗಿರೀಶ್ ಅಂಚನ್, ಪಕ್ಷದ ಮಾಜಿ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಮಹಿಳಾ […]