ಉಡುಪಿ ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಕಾರ್ಯಾಗಾರ

ಉಡುಪಿ: ಜಿಲ್ಲಾ ಜೀವಶಾಸ್ತ್ರ ಉಪನ್ಯಾಸಕರ ಸಂಘ ಹಾಗೂ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜು ಇವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ.ಪೂ. ಕಾಲೇಜುಗಳ ಜೀವಶಾಸ್ತ್ರ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ಜು 21 ರಂದು ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ನಾಗಬನ ಕ್ಯಾಂಪಸ್ ನಲ್ಲಿ ನಡೆಯಿತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಮಾರುತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮುಂಬರುವ ವಿವಿಧ ರೀತಿಯ ಪರೀಕ್ಷೆಗಳನ್ನು ಧೈರ್ಯದಿಂದ ಎದುರಿಸುವಲ್ಲಿ ಉಪನ್ಯಾಸಕರ ಪಾತ್ರದ ಮಹತ್ವವನ್ನು ತಿಳಿಸಿದರು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ […]

ಅನ್ನಭಾಗ್ಯ ಯೋಜನೆ: 24 ಜಿಲ್ಲೆಗಳಲ್ಲಿ 78 ಲಕ್ಷ ಫಲಾನುಭವಿಗಳು; ಒಟ್ಟು 456 ಕೋಟಿ ರೂ. ಜಮಾ

ಬೆಂಗಳೂರು: ಕಾಂಗ್ರೆಸ್​ ಸರ್ಕಾರದ ಮಹತ್ವಾಕಾಂಕ್ಷಿ ಎರಡನೇ ಗ್ಯಾರೆಂಟಿಯಾದ ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಫಲಾನುಭವಿಗಳಿಗೆ ಐದು ಕೆಜಿ ಅಕ್ಕಿ ಬದಲಿಗೆ ನಗದು ವರ್ಗಾವಣೆ ಮಾಡುವ ಕಾರ್ಯಕ್ರಮಕ್ಕೆ ಈಗಾಗಲೆ ಚಾಲನೆ ದೊರೆತಿದೆ. ಜು.10 ರಂದು ಕಾರ್ಯಕ್ರಮಕ್ಕೆ ಚಾಲನೆ ದೊರೆತ ನಂತರ ಇದುವರೆಗೆ ರಾಜ್ಯ ಸರ್ಕಾರ 24 ಜಿಲ್ಲೆಯ 78.4 ಲಕ್ಷ ಫಲಾನುಭವಿಗಳಿಗೆ 456.73 ಕೋಟಿ ರೂ. ಜಮಾ ಮಾಡಿದೆ. ಇನ್ನುಳಿದ ಏಳು ಜಿಲ್ಲೆಗಳಲ್ಲಿ ಫಲಾನುಭವಿಗಳಿಗೆ ನೇರ ಲಾಭ ವರ್ಗಾವಣೆ (DBT) ಪ್ರಕ್ರಿಯೆಯಲ್ಲಿದೆ. ಆಹಾರ ಮತ್ತು ನಾಗರಿಕ […]

ಕಡಬ: ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಕಡಬ: ಜಿಲ್ಲೆಯಾದ್ಯಂತ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಿಭಜಿತ ದ.ಕ ಜಿಲ್ಲೆಯ ಎಲ್ಲಾ ಶೈಕ್ಷಣಿಕ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಶಾಲೆ ಹಾಗೂ ಪ್ರೌಢ ಶಾಲೆಗಳಿಗೂ ಸೋಮವಾರದಂದು ರಜೆ ಘೋಷಣೆ ಮಾಡಲಾಗಿದೆ. ಮಳೆಯ ಪರಿಸ್ಥಿತಿಯನ್ನು ಅವಲೋಕಿಸಿ ಆಯ್ದ ಶಾಲೆಗಳಿಗೆ ಸ್ಥಳೀಯವಾಗಿ ರಜೆ ಘೋಷಿಸಲು ಆಯಾ ತಾಲೂಕಿನ ತಹಸೀಲ್ದಾರ್ ಗಳಿಗೆ ಜಿಲ್ಲಾಧಿಕಾರಿಯವರು ನಿರ್ದೇಶನ ನೀಡಿರುವ ಹಿನ್ನಲೆಯಲ್ಲಿ ಕಡಬ ತಹಸೀಲ್ದಾರ್ ಅವರು ರಜೆ ಘೋಷಣೆ ಮಾಡಿದ್ದಾರೆ.  

ಉಡುಪಿ: ನಾಳೆ (ಜುಲೈ 24)ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ: ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ನೀರಿನ ಹರಿವು ಹೆಚ್ಚಳ ಹಾಗೂ ಭಾರೀ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ

ಉಡುಪಿ: ನಾಳೆ (ಜುಲೈ 24)ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯಿಂದಾಗಿ ನದಿ ,ಹಳ್ಳ ಕೊಳ್ಳಗಳಲ್ಲಿ ಹೆಚ್ಚಿನ ನೀರು ಅರಿವು ಹಾಗೂ ಹೆಚ್ಚು ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆಯ ವರದಿ ಇರುವ ಹಿನ್ನೆಲೆ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ