ಬ್ರಹ್ಮಾವರ: ಯುವ ವಿಚಾರ ವೇದಿಕೆ ವತಿಯಿಂದ ವನಮಹೋತ್ಸವ

ಬ್ರಹ್ಮಾವರ: ಯುವ ವಿಚಾರ ವೇದಿಕೆ (ರಿ) ಕೊಳಲಗಿರಿ, ಗ್ರಾಮ ಪಂಚಾಯತ್ ಉಪ್ಪೂರು, ಜಯಂಟ್ಸ್ ಗ್ರೂಪ್ ಆಫ್ ಬ್ರಹ್ಮಾವರ, ಸುವರ್ಣ ಎಂಟರ್ಪ್ರೈಸಸ್ ಬ್ರಹ್ಮಾವರ ಇವರ ಸಂಯುಕ್ತ ಆಶ್ರಯದಲ್ಲಿ ಜುಲೈ 09 ಆದಿತ್ಯವಾರದಂದು ವೇದಿಕೆಯ ವಠಾರದಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮ ನಡೆಸಲಾಯಿತು. ಔಷಧೀಯ ಗಿಡ, ಹಣ್ಣುಗಳ ಗಿಡ ಹಾಗೂ ಇನ್ನಿತರ ಸುಮಾರು 100 ಗಿಡಗಳನ್ನು ವೇದಿಕೆಯ ವಠಾರದಲ್ಲಿ ಹಾಗೂ ಸದಸ್ಯರ ಮನೆಗಳಲ್ಲಿ ನೆಡಲಾಯಿತು. ಕೇವಲ ಗಿಡಗಳನ್ನು ನೆಡುವುದು ಮಾತ್ರವಲ್ಲದೆ ಅವುಗಳ ರಕ್ಷಣೆ ಹಾಗೂ ಪೋಷಣೆ ಕೂಡ ಪ್ರತಿಯೊಬ್ಬರ […]

ಕುಸಿಯುತ್ತಿದೆ ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ: ಸಾರ್ವಜನಿಕರಲ್ಲಿ ಹೆಚ್ಚುತ್ತಿದೆ ಆತಂಕ

ಉಡುಪಿ: ಸಂತೆಕಟ್ಟೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆಯುತ್ತಿರುವ ಅಂಡರ್ ಪಾಸ್ ಕಾಮಗಾರಿ ಪ್ರದೇಶದಲ್ಲಿ ಸೋಮವಾರ ಮಣ್ಣು ಕುಸಿಯುತ್ತಿದ್ದು, ಇದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ. ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಸಂತೆಕಟ್ಟೆ ಪ್ರದೇಶದಲ್ಲಿ ಆರಂಭಗೊಂಡಿರುವ ಅಂಡರ್ ಪಾಸ್ ಕಾಮಗಾರಿ ನಡೆಯುವ ಪ್ರದೇಶದಲ್ಲಿ ಮಣ್ಣು ಕುಸಿಯಲು ಆರಂಭವಾಗಿದ್ದು, ಈ ಕಾರಣದಿಂದ ಅಲ್ಲಿ ನಿರ್ಮಿಸಲಾಗಿರುವ ತಡೆಗೋಡೆಗಳಿಗೂ ಹಾನಿಯಾಗಿದೆ. ಅಷ್ಟು ಮಾತ್ರವಲ್ಲದೆ, ಮಣ್ಣು ಕುಸಿತ ಹೆಚ್ಚಾಗುತ್ತಿದ್ದು ಅದರಿಂದಾಗಿ ಪಕ್ಕದಲ್ಲೇ ಇರುವ ಬೃಹತ್ ಕಟ್ಟಡಗಳ ನಿವಾಸಿಗಳಲ್ಲಿ ಆತಂಕ ಮೂಡಿದೆ. ಕಾಮಗಾರಿ ನಡೆಯುತ್ತಿರುವ […]

ಉಡುಪಿ ಜಿಲ್ಲಾಡಳಿತದಿಂದ ವಿಶಿಷ್ಟ ಯೋಜನೆ: ಜಿಲ್ಲೆಯಲ್ಲಿ ಮರಣ ಹೊಂದಿದ ಹೊರ ರಾಜ್ಯದವರ ಮನೆಬಾಗಿಲಿಗೆ ಮರಣ ಪ್ರಮಾಣ ಪತ್ರ ರವಾನೆ!

ದೈನಂದಿನ ಜೀವನದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜನನ ಮತ್ತು ಮರಣವನ್ನು ದೃಢೀಕರಿಸುವ ದಾಖಲೆ ಅತ್ಯಂತ ಅಗತ್ಯವಾಗಿದ್ದು ವ್ಯಕ್ತಿಯು ತನ್ನ ವಿದ್ಯಾಭ್ಯಾಸ, ಉದ್ಯೋಗ ಸೇರಿದಂತೆ ಸರ್ಕಾರಿ ಮತ್ತು ಖಾಸಗಿ ವಲಯದಲ್ಲಿಯೂ ಯಾವುದೇ ಶೈಕ್ಷಣಿಕ ಸಾಮಾಜಿಕ ಮತ್ತು ಆರ್ಥಿಕ ವಹಿವಾಟುಗಳನ್ನು ನಡೆಸಲು ಜೀವಂತವಿರುವಾಗಲೂ ಮತ್ತು ಮರಣದ ನಂತರ ಆತನ ಕುಟುಂಬಕ್ಕೂ ಇದು ಅವಶ್ಯಕವಾಗಿದೆ. ಉಡುಪಿ ಜಿಲ್ಲೆಯು ಆರೋಗ್ಯ ಕ್ಷೇತ್ರದಲ್ಲಿ ಪ್ರಮುಖ ಹಬ್ ಆಗಿ ಗುರುತಿಸಿಕೊಂಡಿದ್ದು, ಇಲ್ಲಿನ ಮಣಿಪಾಲ ಆಸ್ಪತ್ರೆಗೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ಹೊರ ರಾಜ್ಯದ ರೋಗಿಗಲೂ ಸಹ ಚಿಕಿತ್ಸೆಗೆ […]

ಮೂಲಭೂತ ಸೌಕರ್ಯದ ಕೊರತೆ: ಉಭಯ ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಶೂನ್ಯ ದಾಖಲಾತಿ

ಉಡುಪಿ/ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಸರ್ಕಾರಿ ಪ್ರಾಥಮಿಕ ಶಾಲೆಗಳು 2023-24ನೇ ಶೈಕ್ಷಣಿಕ ವರ್ಷಕ್ಕೆ 1ನೇ ತರಗತಿಗೆ ‘ಶೂನ್ಯ ಪ್ರವೇಶಾತಿ’ ದಾಖಲಿಸಿವೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಪ್ರಕಾರ ಉಭಯ ಜಿಲ್ಲೆಗಳ 55 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 1ನೇ ತರಗತಿಗೆ ಯಾವುದೇ ವಿದ್ಯಾರ್ಥಿ ದಾಖಲಾಗಿಲ್ಲ. ಪುತ್ತೂರು ತಾಲೂಕಿನ ಎರಡು, ಬಂಟ್ವಾಳದ ನಾಲ್ಕು, ಬೆಳ್ತಂಗಡಿಯಲ್ಲಿ ಮೂರು, ಮಂಗಳೂರು ಉತ್ತರದಲ್ಲಿ ಎರಡು, ಮಂಗಳೂರು ದಕ್ಷಿಣದಲ್ಲಿ ಎರಡು, ಮೂಡುಬಿದಿರೆಯಲ್ಲಿ ಮೂರು ಮತ್ತು ಸುಳ್ಯ ತಾಲೂಕಿನ ಎಂಟು ಶಾಲೆ ಸೇರಿ ದಕ್ಷಿಣ […]

ಅರ್ಜಿದಾರರ ಮನೆ ಬಾಗಿಲಿಗೆ ಜನನ ಮರಣ ಪ್ರಮಾಣ ಪತ್ರ ಯೋಜನೆಗೆ ಚಾಲನೆ

ಉಡುಪಿ: ನಗರಸಭೆವತಿಯಿಂದ ಜನನ ಮರಣ ಪ್ರಮಾಣಪತ್ರಗಳನ್ನು ಅರ್ಜಿದಾರರ ಮನೆ ಬಾಗಿಲಿಗೆ ತಲುಪಿಸುವ ವಿಶಿಷ್ಠ ಯೋಜನೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಜೂನ್ 8 ರಂದು ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನೂತನವಾಗಿ ಆರಂಭಿಸಿರುವ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಚೇರಿಯನ್ನು ಉದ್ಘಾಟಿಸಿದರು ಮತ್ತು ಜಿಲ್ಲಾ ಪಂಚಾಯತ್ ನ ಸಂಪನ್ಮೂಲ ಕೇಂದ್ರದಲ್ಲಿ ಮಹಿಳೆಯರಿಗಾಗಿ ನಡೆಯುತ್ತಿರುವ ಕೈ […]