ಹಿರಿಯಡಕ: ಓಂತಿಬೆಟ್ಟುವಿನಲ್ಲಿ ಬೈಕ್ ಗೆ ಬಸ್ ಡಿಕ್ಕಿ: ಸವಾರ ಮೃತ್ಯು, ಸಹಸವಾರ ಗಂಭೀರ 

ಹಿರಿಯಡಕ: ಬಸ್ಸೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಹಿರಿಯಡಕ ಓಂತಿಬೆಟ್ಟು ಸಭಾಭವನದ ಎದುರು ರಾಷ್ಟ್ರೀಯ ಹೆದ್ದಾರಿ 169 ಎ ರಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಅಪಘಾತದಲ್ಲಿ ಹಿಂಬದಿ ಸವಾರ ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಉಡುಪಿಯ 60ವರ್ಷದ ಕೃಷ್ಣ ಪೂಜಾರಿ ಎಂದು ಗುರುತಿಸಲಾಗಿದೆ. ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರ, ನಿವೃತ್ತ ಬ್ಯಾಂಕ್ ಉದ್ಯೋಗಿ, ಹಿರಿಯಡ್ಕ ನಿವಾಸಿ ಭೋಜ ಶೆಟ್ಟಿ ಎಂಬವರು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ. […]

ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕ ರಚನೆ: ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ

ಉಡುಪಿ: ಜಿಲ್ಲೆಯಲ್ಲಿ ಗಣನೀಯ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು, ಯುವ ಜನತೆ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಿರುವ ಕಳವಳಕಾರಿ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್ ವತಿಯಿಂದ ಡ್ರಗ್ಸ್ ಮಾಫಿಯಾ ನಿಯಂತ್ರಣಕ್ಕೆ ಪ್ರತ್ಯೇಕ ಘಟಕವನ್ನು ಆರಂಭಿಸುವಂತೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೇ ಅಕ್ಷಯ್ ಮಚ್ಚಿಂದ್ರ ಅವರನ್ನು ಭೇಟಿ ಮಾಡಿ ಆಗ್ರಹಿಸಿದರು. ಈ ಬಗ್ಗೆ ಈಗಾಗಲೇ ಗೃಹ ಸಚಿವ ಜಿ. ಪರಮೇಶ್ವರ್, ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಮನವಿ ಸಲ್ಲಿಸಿದ್ದು […]

116 ನೇ ಸಂಸ್ಥಾಪನಾ ದಿನ ಆಚರಿಸಿದ ಬ್ಯಾಂಕ್ ಆಫ್ ಬರೋಡಾ

ಮಂಗಳೂರು: ಭಾರತದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಗುರುವಾರ ತನ್ನ 116ನೇ ಸಂಸ್ಥಾಪನಾ ದಿನವನ್ನು ಆಚರಿಸಿಕೊಂಡಿತು. ಉರ್ವಾದಲ್ಲಿರುವ ಡಾ. ಅಂಬೇಡ್ಕರ್ ಭವನದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕಾರಿ ನಿರ್ದೇಶಕ ಡಾ. ಎಲ್.ಎಚ್. ಮಂಜುನಾಥ್ ಮಾತನಾಡಿ, ಸ್ವ-ಸಹಾಯ ಸಂಘಗಳ ಮೂಲಕ ಬ್ಯಾಂಕ್ ಗ್ರಾಹಕರ ಮನೆ ಬಾಗಿಲಿಗೆ ತಲುಪಿದೆ. ಮನೆ, ಉತ್ತಮ ಆಸ್ಪತ್ರೆಗಳ ಸೇವೆ ಸೇರಿದಂತೆ ಎಲ್ಲಾ ಬೇಡಿಕೆಗಳಿಗೆ ಸೂಕ್ತ ಸ್ಪಂದನೆ ಬ್ಯಾಂಕಿನಿಂದ ದೊರೆಯುವಂತಾಗಲಿ […]

ಅಂತರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತವನ್ನು ಪ್ರತಿನಿಧಿಸಿಲಿದ್ದಾಳೆ ರೆಚೆಲ್ ಅನಿಶಾ ಕ್ರಾಸ್ತಾ

ವಾಮಂಜೂರು: ಇಲ್ಲಿನ ನಿವಾಸಿ ರೆಚೆಲ್ ಅನಿಶಾ ಕ್ರಾಸ್ತಾ, ಆಗಸ್ಟ್ 1 ರಿಂದ 12 ರ ವರೆಗೆ ಸೌತ್ ಕೊರಿಯಾದಲ್ಲಿ ನಡೆಯಲಿರುವ 25ನೇ ಅಂತರಾಷ್ಟ್ರೀಯ ಜಾಂಬೂರಿಯಲ್ಲಿ ಭಾರತ ದೇಶವನ್ನು ಪ್ರತಿನಿಧಿಸಿ ಭಾಗವಹಿಸಲಿದ್ದಾಳೆ. 2020-21 ಸಾಲಿನಲ್ಲಿ ಸ್ಕೌಟ್ಸ್ ಗೈಡ್ಸ್ ರಾಜ್ಯ ಪುರಸ್ಕಾರವನ್ನು ಪಡೆದಿರುವ ರೆಚೆಲ್ ಕ್ರಾಸ್ತಾ ಪ್ರಸ್ತುತ ಸಂತ ಅಲೋಶಿಯಸ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಈಕೆ ವಾಮಂಜೂರಿನ ರೋಶನ್ ಹಾಗೂ ಲವೀನಾ ಕ್ರಾಸ್ತಾ ದಂಪತಿಯ ಪುತ್ರಿ.

ಗೃಹಲಕ್ಷ್ಮಿ ಯೋಜನೆ: ಯಾವುದೇ ಲಿಂಕ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಇಲ್ಲ; ನಿಗದಿತ ಕೇಂದ್ರಗಳಲ್ಲೇ ಅರ್ಜಿ ಸಲ್ಲಿಕೆ

ಉಡುಪಿ: ಜು. 22ರಿಂದ ಗೃಹ ಲಕ್ಷ್ಮೀ ಯೋಜನೆಗೆ ನಿಮ್ಮ ಸಮೀಪದ ಯಾವುದೇ ಗ್ರಾಮ ಒನ್ ಸೇವಾ ಕೇಂದ್ರ, ಗ್ರಾಮ ವನ್ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬಹುದು. ನಿನ್ನೆ ಮೊಬೈಲಿಗೆ ಬಂದ ಮೆಸೇಜಿನಲ್ಲಿ ನಿಗದಿತ ದಿನದಂದು ನಿಗದಿತ ಸಮಯಕ್ಕೆ ಸೂಚಿಸಿದ ಗ್ರಾಮ ಒನ್ ಸೇವಾ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರಕ್ಕೆ ಹೋಗಿ ಅರ್ಜಿ ಸಲ್ಲಿಸಬೇಕು ಎಂದು ಇಲಾಖೆ ಆದೇಶ ಹೊರಡಿಸಿತ್ತು. ಈ ಆದೇಶ ರದ್ದಾಗಿದೆ. ಇನ್ನು ಮುಂದೆ ನಿಮ್ಮ ಜಿಲ್ಲಾ ವ್ಯಾಪ್ತಿಯ ಯಾವುದೇ ಗ್ರಾಮ ಒನ್ ಸೇವಾ […]