ಉಡುಪಿ: ಸೆ.20ರಂದು ಕೆಸಿಎಸ್ಸಿ ಸಂಸ್ಥೆಯ 32ನೇ ವಾರ್ಷಿಕೋತ್ಸವ- ಓಣಂ ಹಬ್ಬ ಆಚರಣೆ

ಉಡುಪಿ: ಕೇರಳ ಕಲ್ಚರಲ್ ಆ್ಯಂಡ್ ಸೋಶಿಯಲ್ ಸೆಂಟರ್ (ಕೆಸಿಎಸ್ಸಿ) ಉಡುಪಿ ಸಂಸ್ಥೆಯ 32ನೇ ವಾರ್ಷಿಕೋತ್ಸವ ಹಾಗೂ ಓಣಂ ಹಬ್ಬ ಆಚರಣೆ ಕಾರ್ಯಕ್ರಮ ಇದೇ ಸೆ.20ರಂದು ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಮೆಮೋರಿಯಲ್ ಹಾಲ್ನಲ್ಲಿ ನಡೆಯಲಿದೆ ಎಂದು ಹಿರಿಯ ಸಾಹಿತಿ ಡಾ. ಪಾರ್ವತಿ ಜಿ. ಐತಾಳ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಬೆಳಿಗ್ಗೆ 8ರಿಂದ ಪೂಕಳಂ ಸ್ಪರ್ಧೆ, ಹಗ್ಗಾಜಗ್ಗಾಟ ಸ್ಪರ್ಧೆ ಹಾಗೂ ಮಡಿಕೆ ಒಡೆಯುವ ಸ್ಪರ್ಧೆ ನಡೆಯಲಿದೆ. ಬೆಳಿಗ್ಗೆ 9ಗಂಟೆಗೆ ಸಾಂಸ್ಕೃತಿಕ ಸ್ಪರ್ಧೆಗಳು […]
ಕುಂದಾಪುರ ತಾಲೂಕಿನ ಬೇಳೂರು ಗ್ರಾ.ಪಂ.ಗೆ ಲೋಕಾಯುಕ್ತ ದಾಳಿ – ಕಡತಗಳ ಪರಿಶೀಲನೆ

ಉಡುಪಿ: ಕಟ್ಟಡ ಪರವಾನಗಿ ನೀಡುವಲ್ಲಿ ವಿಳಂಬ ಸೇರಿದಂತೆ ವಿವಿಧ ದೂರುಗಳ ಹಿನ್ನೆಲೆಯಲ್ಲಿ ಕುಂದಾಪುರ ತಾಲೂಕಿನ ಬೇಳೂರು ಗ್ರಾಮ ಪಂಚಾಯಿತಿ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳ ತಂಡ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿತು. ಲೋಕಾಯುಕ್ತ ಡಿವೈಎಸ್ಪಿ ಹಾಲಮೂರ್ತಿ ರಾವ್ ಹಾಗೂ ಇನ್ಸ್ಪೆಕ್ಟರ್ ಮಂಜುನಾಥ್ ನೇತೃತ್ವದ ತಂಡ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಸಿಬ್ಬಂದಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿ ಮಾಹಿತಿ ಕಲೆಹಾಕಿತು. ಸರ್ಕಾರಿ ಸೌಲಭ್ಯ ಒದಗಿಸುವುದಾಗಿ ಪಿಡಿಒ ಅವರು ಸುಮಾರು 400 ಅರ್ಜಿಗಳನ್ನು ಪಡೆದಿದ್ದಾರೆ ಎಂಬ ಆರೋಪವೂ ಕೇಳಿಬಂದಿದ್ದು, ಈ […]
ಸೆ.19ರಂದು ಗುರು ರಾಧಾಕೃಷ್ಣ ತಂತ್ರಿಯವರ 91ನೇ ಜನ್ಮದಿನ ಸ್ಮರಣೆ: ‘ನೃತ್ಯಾಭಿಷೇಕಂ’ ಮೂಲಕ ಗುರುನಮನ

ಉಡುಪಿ: ರಾಧಾಕೃಷ್ಣ ನೃತ್ಯ ನಿಕೇತನದ ಸಂಸ್ಥಾಪಕ, ನೃತ್ಯ ಕಲಾಸಿಂಧು ಕೀರ್ತಿಶೇಷ ರಾಧಾಕೃಷ್ಣ ತಂತ್ರಿ ಅವರ 91ನೇ ಜನ್ಮದಿನದ ಸ್ಮರಣಾರ್ಥವಾಗಿ ಸೆ.19ರಂದು ‘ನೃತ್ಯಾಭಿಷೇಕಂ’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಸ್ಥೆಯ ನೃತ್ಯ ನಿರ್ದೇಶಕಿ, ನೃತ್ಯ ವಿದುಷಿ ವೀಣಾ ಮುರಳೀಧರ ಸಾಮಗ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಸಂಜೆ 5.30ಕ್ಕೆ ಉಡುಪಿಯ ಐವೈಸಿ ಯಕ್ಷಗಾನ ಕಲಾರಂಗದಲ್ಲಿ ಕಾರ್ಯಕ್ರಮ ನಡೆಯಲಿದ್ದು, ರಾಧಾಕೃಷ್ಣ ತಂತ್ರಿಗಳ ಶಿಷ್ಯವರ್ಗದವರು ನೃತ್ಯದ ಮೂಲಕ ಗುರುನಮನ ಸಲ್ಲಿಸಲಿದ್ದಾರೆ ಎಂದರು. ಸುರತ್ಕಲ್ ನಾಟ್ಯಾಂಜಲಿ ಕಲಾ ಅಕಾಡೆಮಿ […]
ಮಂಗಳೂರು: ಗೇಟ್ ತೆರೆಯದಿದ್ದರೆ ಸಿಲಿಂಡರ್ ಸ್ಫೋಟಿಸುವುದಾಗಿ ಬೆದರಿಕೆಯೊಡ್ಡಿದ ಖೈದಿ

ಮಂಗಳೂರು: ಜೈಲು ಅಡುಗೆಮನೆಯ ಗೇಟಿಗೆ ಬೀಗ ಹಾಕಿದ ಬಳಿಕ ಕೈದಿಯೊಬ್ಬ ಗ್ಯಾಸ್ ಸಿಲಿಂಡರ್ ಹಿಡಿದು ಗೇಟ್ ಹಾಗೂ ಬೀಗಕ್ಕೆ ಹೊಡೆದು, ಗೇಟ್ ತೆರೆಯುವಂತೆ ಬೆದರಿಕೆ ಹಾಕಿದ ಘಟನೆ ಮಂಗಳೂರು ಜೈಲಿನಲ್ಲಿ ನಡೆದಿದೆ. ಫೈಜಲ್ ಎಂಬಾತ ಗ್ಯಾಸ್ ಸಿಲಿಂಡರ್ನಿಂದ ಗೇಟ್ ಹಾಗೂ ಬೀಗಕ್ಕೆ ಹೊಡೆದು, ಗೇಟ್ ತೆರೆಯದಿದ್ದರೆ ಸಿಲಿಂಡರ್ ಸ್ಫೋಟಿಸುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಬಳಿಕ ಇತರ ಕೈದಿಗಳನ್ನು ಪ್ರಚೋದಿಸಿ, ಬೀಡಿಗಳನ್ನು ನೀಡುವವರೆಗೆ ಸೆಲ್ಗಳಿಗೆ ಹಿಂತಿರುಗದಂತೆ ಒತ್ತಾಯಿಸಿದ್ದಾನೆ ಎನ್ನಲಾಗಿದೆ. ಘಟನೆಯಿಂದ ಜೈಲಿನಲ್ಲಿ ಗದ್ದಲದ ವಾತಾವರಣ ನಿರ್ಮಾಣವಾಗಿದ್ದು, […]
ಪಟ್ಲ ರೂರಲ್ ಎಜುಕೇಶನ್ ಸೊಸೈಟಿ: ಪ್ರಶಸ್ತಿ ಪುರಸ್ಕೃತ ಶಿಕ್ಷಕರಿಗೆ ಅಭಿನಂದನೆ

ಪಟ್ಲ: ರೂರಲ್ ಎಜುಕೇಶನ್ ಸೊಸೈಟಿ (ರಿ.), ವಿದ್ಯಾನಗರ ಪಟ್ಲ ಇದರ ಆಡಳಿತ ಮಂಡಳಿ, ಪೋಷಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ಜಿಲ್ಲಾ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಯು.ಎಸ್. ನಾಯಕ್ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಶಾಂತಪ್ಪ ಮೂಲಂಗಿ ಹಾಗೂ ಆದರ್ಶ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಲೋಕಮಾನ್ಯ ಹಿ.ಪ್ರಾ. ಶಾಲೆಯ ಮುಖ್ಯ ಶಿಕ್ಷಕ ಸೀತಾರಾಮ್ ಅವರನ್ನು ಅಭಿನಂದಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಕಾಪು ಕ್ಷೇತ್ರದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಆಗಮಿಸಿ, ಪ್ರಶಸ್ತಿ ಪುರಸ್ಕೃತ ಶಿಕ್ಷಕರನ್ನು ಅಭಿನಂದಿಸಿ ಶುಭ ಹಾರೈಸಿದರು. […]