ಹಿರಿಯಡಕ: ಸ್ಕೂಟಿಗೆ ಡಿಕ್ಕಿಯಾದ ಇನ್ನೋವಾ ಕಾರು: ಪವಾಡಸದೃಶ ರೀತಿಯಲ್ಲಿ ಬದುಕುಳಿದ ಇಬ್ಬರು ಸವಾರರು

ಉಡುಪಿ: ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಹಳೆ ಪೋಲಿಸ್ ಸ್ಟೇಷನ್ ಬಳಿ ಸಂಭವಿಸಿದೆ. ಇನ್ನೋವಾ ಕಾರು ಡಿಕ್ಕಿಯಾದ ರಭಸಕ್ಕೆ ಸ್ಕೂಟರ್ ಸವಾರ ರಸ್ತೆಗೆ ಎಸೆಯಲ್ಪಟ್ಟಿದ್ದು, ಪವಾಡಸದೃಶ ರೀತಿಯಲ್ಲಿ ಬದುಕುಳಿದಿದ್ದಾರೆ. ಸ್ಕೂಟಿ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಪಲ್ಟಿಯಾಗಿ ಬಿದ್ದಿದ್ದಾನೆ. ಅಪಘಾತದ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಉಡುಪಿ:ಡಿಜಿಟಲ್ ಆಪ್ ಆಧಾರಿತ ಆಟೋ ಸಂಚಾರ, ಸಾಧಕ-ಬಾಧಕಗಳನ್ನು ಚರ್ಚಿಸಿ ಅನುಷ್ಠಾನ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಉಡುಪಿ ನಗರ ವ್ಯಾಪ್ತಿಯಲ್ಲಿ ಡಿಜಿಟಲ್ ಆಪ್ ಆಧಾರಿತ ಆಟೋ ಸಾರ್ವಜನಿಕ ಸಾಗಾಣಿಕೆಗೆ ಸರಕಾರದ ಪರವಾನಿಗೆ ಪತ್ರ ಪಡೆಯುವುದು ಕಡ್ಡಾಯ. ಪರವಾನಿಗೆ ಹೊಂದಿದ್ದಲ್ಲಿ ಸಾಧಕ-ಬಾಧಕಗಳನ್ನು ಚರ್ಚಿಸಿ, ಚಲಾವಣೆ ಮಾಡುವುದು ಸೂಕ್ತ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ತಿಳಿಸಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಛೇರಿಯಲ್ಲಿ ಉಡುಪಿ ನಗರ ವ್ಯಾಪ್ತಿಯಲ್ಲಿ ನಮ್ಮ ಯಾತ್ರಿ ಆಪ್ ಹಾಗೂ ರ್ಯಾಪಿಡ್ ಆಪ್ ಆಟೋ ಸಂಚಾರ ಕುರಿತ ಆಟೋ ರಿಕ್ಷಾ ಚಾಲಕರ ಮತ್ತು ಮಾಲಕರ ಸಮಸ್ಯೆಗಳ ಬಗ್ಗೆ ಚರ್ಚಿಸಲು ಆಯೋಜಿಸಲಾದ […]
ಉಡುಪಿ:ಮಾರಿ ಜಾತ್ರೆ : ಮದ್ಯ ಮಾರಾಟ ನಿಷೇಧ

ಉಡುಪಿ: ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀ ಮಹಾಂಕಾಳಿ ಅಮ್ಮನವರ ದೇವಸ್ಥಾನ ಖಾರ್ವಿಕೇರಿ, ಗಂಗೊಳ್ಳಿಯ ಮಾರಿ ಜಾತ್ರೆ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಹಿತದೃಷ್ಠಿಯಿಂದ, ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ರ ನಿಯಮ 21 ರನ್ವಯ ಪ್ರದತ್ತವಾದ ಅಧಿಕಾರ ಚಲಾಯಿಸಿ, ಗುಜ್ಜಾಡಿ ಹಾಗೂ ಗಂಗೊಳ್ಳಿ ಗ್ರಾಮಗಳ […]
ಮಲ್ಪೆ: 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಆರೋಪಿಗಳ ಸೆರೆ

ಉಡುಪಿ: ಮಲ್ಪೆ ಬೀಚ್ ನಲ್ಲಿ ನಡೆದ ಕಳವು ಪ್ರಕರಣ ಸಂಬಂಧಿಸಿದಂತೆ 11 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರು ಮಹಿಳಾ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆಶಾ ಯಾನೆ ಸುಮಿತ್ರ ಕೃಷ್ಣ ಮತ್ತು ರೇಖಾ ದಾನಪ್ಪ ಬಂಧಿತ ಆರೋಪಿಗಳು. ಈ ಇಬ್ಬರು ಆರೋಪಿಗಳು ಸುಮಾರು 11 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು, ವಾರೆಂಟ್ ಜಾರಿ ಮಾಡಲಾಗಿತ್ತು. ಮಲ್ಪೆ ಠಾಣಾ ಸಿಬ್ಬಂದಿಗಳಾದ ಸುರೇಶ್ ಕುಮಾರ್, ವಿಶ್ವನಾಥ್ ಮತ್ತು ಸಿಂಚನ ಅವರು ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ ಹೊಸ ಮನೆ ಎಂಬಲ್ಲಿ ಜ. 31ರಂದು […]
₹49 ಲಕ್ಷ ವೆಚ್ಚದ ಕಲ್ಸಂಕ ಫ್ರೀ ಲೆಫ್ಟ್ ಕಾಮಗಾರಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಉಡುಪಿ: ನಗರಸಭೆಯ ಮೂಲಕ ₹49 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳಲಿರುವ ಕಲ್ಸಂಕ ಜಂಕ್ಷನ್ ನಲ್ಲಿ ಅಂಬಾಗಿಲು ತಿರುವು ಸೇತುವೆ ಅಗಲೀಕರಣ ( ಫ್ರೀ ಲೆಫ್ಟ್ ) ಕಾಮಗಾರಿಗೆ ಉಡುಪಿ ಶಾಸಕರಾದ ಯಶ್ ಪಾಲ್ ಸುವರ್ಣ ಗುದ್ದಲಿಪೂಜೆ ನೆರವೇರಿಸಿ ಚಾಲನೆ ನೀಡಿದರು. ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ ಉಡುಪಿ ನಗರದ ವಾಹನ ದಟ್ಟಣೆಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಬಹು ವರ್ಷಗಳ ಬೇಡಿಕೆಯಾಗಿದ್ದ ಫ್ರೀ ಲೆಫ್ಟ್ ಕಾಮಗಾರಿಗೆ ನಗರಸಭೆಯ ಮೂಲಕ 49 ಲಕ್ಷ ವೆಚ್ಚದಲ್ಲಿ ಅನುದಾನ […]