ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ ಪಿತ್ರೋಡಿ: “ಶ್ರೀರಾಮ್ ಟ್ರೋಫಿ- 2026” ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

ಉಡುಪಿ: ಯೂತ್ ಫ್ರೆಂಡ್ಸ್ ಸ್ಪೋರ್ಟ್ಸ್ ಆ್ಯಂಡ್ ಕಲ್ಚರಲ್ (ರಿ.) ಪಿತ್ರೋಡಿ ಇವರ ಆಶ್ರಯದಲ್ಲಿ ಉದ್ಯಾವರದ ಬೋಳಾರಗುಡ್ಡೆಯ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಶನಿವಾರ ಆಯೋಜಿಸಿದ “ಶ್ರೀರಾಮ್ ಟ್ರೋಫಿ- 2026” ಅಂತರ್ ರಾಜ್ಯಮಟ್ಟದ ಆಹ್ವಾನಿತ ಮಹಿಳಾ ತಂಡಗಳ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯಲ್ಲಿ ಶ್ರೀದುರ್ಗಾ ಫ್ರೆಂಡ್ಸ್ ಕಾರ್ಕಳ ತಂಡವು ಪ್ರಥಮ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ. ನವ್ಯ ಸ್ಪೈಕರ್ಸ್ ತಂಡ ದ್ವಿತೀಯ, ಆದ್ಯಾ ಸ್ಪೈಕರ್ಸ್ ತಂಡ ತೃತೀಯ ಹಾಗೂ ಸಿದ್ದಿ ವಿನಾಯಕ ಫ್ರೆಂಡ್ಸ್ ಕಟ್ಟೆಗುಡ್ಡೆ ತಂಡವು ಚತುರ್ಥ ಪ್ರಶಸ್ತಿಯನ್ನು ಗೆದ್ದುಕೊಂಡಿತು. […]

ಕೇಂದ್ರ ಬಜೆಟ್ ನಲ್ಲಿ‌ ಕರಾವಳಿ ಜಿಲ್ಲೆಗಳಿಗೆ ಮತ್ತೊಮ್ಮೆ ಚೊಂಬು- ರಮೇಶ್ ಕಾಂಚನ್ ಟೀಕೆ

ಉಡುಪಿ: ಕೇಂದ್ರ ವಿತ್ತ ಮಂತ್ರಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಬಜೆಟ್‌ನಲ್ಲಿ ಕರ್ನಾಟಕ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಪ್ರಕಟಿಸದೆ ಮತ್ತೊಮ್ಮೆ ಚೊಂಬು ನೀಡಿದ್ದಾರೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಪ್ರತಿಕ್ರಿಯಿಸಿದ್ದಾರೆ. ಕರಾವಳಿಯ ಮೀನುಗಾರಿಕೆ, ಪ್ರವಾಸೋದ್ಯಮ ಅಭಿವೃದ್ದಿ, ಬಂದರುಗಳ ಅಭಿವೃದ್ಧಿಯ ನಿಟ್ಟಿನಲ್ಲಿ ಈ ಬಾರಿಯ ಬಜೆಟ್‌ನಲ್ಲಿ ಭಾರೀ ನಿರೀಕ್ಷೆಯನ್ನು ಇಟ್ಟುಕೊಳ್ಳಲಾಗಿತ್ತು ಆದರೆ ಅಂತಹ ಯಾವುದೇ ರೀತಿಯ ನಿರ್ದಿಷ್ಟ ಯೋಜನೆಗಳನ್ನು ವಿತ್ತ ಸಚಿವರು ಕರಾವಳಿ ಜಿಲ್ಲೆಗಳಿಗೆ ನೀಡದೆ ಮತ್ತೊಮ್ಮೆ […]

ಕೇಂದ್ರದ ಬಜೆಟ್‌ ಕರ್ನಾಟಕ ಪಾಲಿಗೆ ನಿರಾಸೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಕೊಪ್ಪಳ : ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಪದೆ ಪದೇ ಅನ್ಯಾಯ ಆಗುತ್ತಿದೆ. ಈ ಬಾರಿಯ ಬಜೆಟ್‌ನಲ್ಲೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಟೀಕಿಸಿದ್ದಾರೆ. ಕೊಪ್ಪಳದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ಕರ್ನಾಟಕಕ್ಕೆ ಬರಬೇಕಿದ್ದ ಅನುದಾನವನ್ನು ಬಿಡುಗಡೆ ಮಾಡುತ್ತಿಲ್ಲ. ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಅತಿಹೆಚ್ಚು ಬಿಜೆಪಿ ಸದಸ್ಯರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ಮುಖ್ಯಮಂತ್ರಿಗಳಾದ […]

ಉಡುಪಿ:ಫೆಬ್ರವರಿ ತಿಂಗಳಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಸಮಾವೇಶ : ಅಶೋಕ್ ಕುಮಾರ್ ಕೊಡವೂರು

ಉಡುಪಿ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರಕ್ಕಾಗಿ ಹಾಗೂ ತಳಮಟ್ಟದಲ್ಲಿ ಯೋಜನೆಯ ಸಮರ್ಪಕ ಅನುಷ್ಠಾನಕ್ಕಾಗಿ ತಾಲೂಕು ಮಟ್ಟದ ಸಮಾವೇಶವನ್ನು ಫೆಬ್ರವರಿ ತಿಂಗಳಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಹೇಳಿದರು. ಅವರು ಗುರುವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ರಾಜ್ಯ ಸರ್ಕಾರವು […]

ದ. ಕ. ಮತ್ತು ಉಡುಪಿ ಜಿಲ್ಲಾ ಮೀನು ಮಾರಾಟ ಫೆಡರೇಶನ್ ವತಿಯಿಂದ 1455 ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ.

ಉಡುಪಿ: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಇದರ ವತಿಯಿಂದ ಮಲ್ಪೆ ಏಳೂರು ಮೊಗವೀರ ಭವನದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ 1455 ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ವಿತರಣೆ ಸಮಾರಂಭ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉಡುಪಿಯ ಖ್ಯಾತ ಮನೋ ವೈದ್ಯರಾದ ಡಾ. ಪಿ. ವಿ. ಭಂಡಾರಿ ಉದ್ಘಾಟಿಸಿದರು. . ಸಮಾರಂಭದ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದ ಅವರು ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಜೀವನದಲ್ಲಿ ಯಶಸ್ವಿಯಾಗಲು ಶೈಕ್ಷಣಿಕ ಸಾಧನೆಯ ಜೊತೆ ಜೊತೆಗೆ ಸವಾಲುಗಳನ್ನು […]