ಉಡುಪಿ ಕಾಂಗ್ರೆಸ್ ನಾಯಕರಿಂದ ದಲಿತರ ನಿರ್ಲಕ್ಷ್ಯ ಆರೋಪ; ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ “ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ” ಪ್ರತಿಭಟನೆ
ಉಡುಪಿ: ದಲಿತರ ಮೇಲೆ ಆಗುತ್ತಿರುವ ದೌರ್ಜನ್ಯ ಹಾಗೂ ವಿವಿಧ ಬೇಡಿಕೆಗಳನ್ನು ರಾಜ್ಯ ಸರಕಾರದ ಗಮನ ಸೆಳೆಯುವಲ್ಲಿ ಉಡುಪಿ ಕಾಂಗ್ರೆಸ್ ನಾಯಕರು ವಿಫಲವಾಗಿದ್ದಾರೆ ಆರೋಪಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆಯ ನೇತೃತ್ವದಲ್ಲಿ ‘ಉಡುಪಿ ಕಾಂಗ್ರೆಸ್ ಹಠಾವೋ-ದಲಿತ್ ಬಚಾವೋ’ ಹೆಸರಿನಡಿ ವಿಶಿಷ್ಟ ಪ್ರತಿಭಟನೆಯನ್ನು ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ನಡೆಸಲಾಯಿತು. ಸಂವಿಧಾನದ ಪರ, ದಲಿತರ ರಕ್ಷಕರು ಎಂದು ಹೇಳಿಕೊಂಡು ಓಟು ಪಡೆಯುವ “ಉಡುಪಿ ಕಾಂಗ್ರೆಸ್ ಪಕ್ಷವು ಕಳೆದ ಹಲವು ದಶಕಗಳಿಂದ ಉಡುಪಿ ಜಿಲ್ಲೆಯಲ್ಲಿ ದಲಿತರ ಮೇಲೆ ನಡೆಯುವ ಅನ್ಯಾಯ, […]
ನ. 3ರಂದು ಉಡುಪಿ ರಂಗಭೂಮಿ ಸಂಸ್ಥೆಯ 60ರ ಸಂಭ್ರಮ ಉದ್ಘಾಟನೆ
ಉಡುಪಿ: ರಂಗಭೂಮಿ ಉಡುಪಿ ಇದರ 60ರ ಸಂಭ್ರಮದ ಉದ್ಘಾಟನಾ ಸಮಾರಂಭವು ನ. 3ರಂದು ಸಂಜೆ 4.30ಕ್ಕೆ ಉಡುಪಿ ಕುಂಜಿಬೆಟ್ಟಿನ ಶಾರದಾ ರೆಸಿಡೆನ್ಸಿಯಲ್ ಶಾಲೆಯ ಗೀತಾಂಜಲಿ ಸಭಾಂಗಣದಲ್ಲಿ ನಡೆಯಲಿದೆ ಎಂದು ರಂಗಭೂಮಿ ಸಂಸ್ಥೆಯ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು. ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದೇ ಸಂದರ್ಭದಲ್ಲಿ ಉಡುಪಿ ನಗರ ಪ್ರೌಢಶಾಲೆಗಳಲ್ಲಿ ರಂಗತರಬೇತಿ ಹಾಗೂ ನಾಟಕ ತಯಾರಿ ಪ್ರಕ್ರಿಯೆಯ ” ರಂಗಭೂಮಿ ರಂಗ ಶಿಕ್ಷಣ” ಅಭಿಯಾನ ಮತ್ತು ಉಡುಪಿ ಕಾಲೇಜಿನ ವಿದ್ಯಾರ್ಥಿ ವಿದ್ಯಾರ್ಥಿನಿಯರಿಗಾಗಿ ನಾಟಕ […]
ಶಕ್ತಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ
ಉಡುಪಿ: ಇಡೀ ದೇಶಕ್ಕೆ ಮಾದರಿಯಾಗಿರುವ ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಗುರುವಾರ ತಮ್ಮ ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಶಕ್ತಿ ಯೋಜನೆಯಿಂದ ಲಕ್ಷಾಂತರ ಮಹಿಳೆಯರಿಗೆ ಅನುಕೂಲ ಆಗಿದೆ. ಯಾರೋ ಒಂದಿಬ್ಬರು ಯೋಜನೆ ನಿಲ್ಲಿಸಿ ಎಂದು ಸರ್ಕಾರಕ್ಕೆ ಹೇಳಿದಾಕ್ಷಣ ಯೋಜನೆಯನ್ನು ನಿಲ್ಲಿಸಲು ಸಾಧ್ಯವೇ ಎಂದರು. ಶಕ್ತಿ ಯೋಜನೆ […]
ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ
ಉಡುಪಿ: ಯಾವುದೇ ಕಾರಣಕ್ಕೂ ಪಂಚ ಗ್ಯಾರಂಟಿಗಳು ನಿಲ್ಲುವುದಿಲ್ಲ. ಸಾಕಷ್ಟು ಮುಂದಾಲೋಚನೆ ಇಟ್ಟುಕೊಂಡೆ ಪಂಚ ಯೋಜನೆ ಜಾರಿಗೆ ತಂದಿದ್ದೇವೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡಲು ಗ್ಯಾರಂಟಿ ತಂದಿದ್ದೇವೆ. ಶಕ್ತಿ ಯೋಜನೆ ಬಗ್ಗೆ ಯಾವುದೇ ಗೊಂದಲ ಬೇಡ ಎಂದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಉಡುಪಿಯಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ದೇಶದಲ್ಲೇ ಪ್ರಥಮ ಬಾರಿಗೆ ಪಂಚ ಗ್ಯಾರಂಟಿ ಜಾರಿ ಮಾಡಿದ್ದೇವೆ. ಆ ಮೂಲಕ ಚುನಾವಣಾಪೂರ್ವ ಕೊಟ್ಟ ಮಾತು ಉಳಿಸಿಕೊಂಡಿದ್ದೇವೆ. ಈಗ ಪಂಚ ಗ್ಯಾರಂಟಿಗಳು ಕರ್ನಾಟಕ […]
2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ
ಉಡುಪಿ: 2024ನೇ ಸಾಲಿನ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪ್ರಕಟಗೊಂಡಿದೆ. ಪ್ರಶಸ್ತಿ ಪುರಸ್ಕೃತರ ವಿವರ ಈ ಕೆಳಕಂಡಂತಿದೆ.