ಬಾಲ ನಟ ನಟಿಯರು ಸಿನಿಮಾದಲ್ಲಿ ನಟಿಸಲು ಅನುಮತಿ ಬೇಕೇ ಬೇಕು:ಕಾರ್ಮಿಕ ಇಲಾಖೆ

ಮೈಸೂರು: ನಟಿಸಲು ಬಯುಸುವ ಮಕ್ಕಳು ಜಿಲ್ಲಾಧಿಕಾರಿಯಿಂದ ಅನುಮತಿ ಪತ್ರ ಪಡೆಯುವುದು ಕಡ್ಡಾಯ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ. ಶ್ರವಣ ಮತ್ತು ದೃಶ್ಯ ಮಾಧ್ಯಮದ ಯಾವುದೇ ನಿರ್ಮಾಪಕರು ನಿರ್ಮಿಸಿದ ಅಥವಾ ಯಾವುದೇ ವಾಣಿಜ್ಯಪರ ಕಾರ್ಯಕ್ರಮದಲ್ಲಿ ಮಗು ಪಾಲ್ಗೊಳ್ಳುವುದಿದ್ದರೆ, ಆ ಚಟುವಟಿಕೆ ನಡೆಯುವ ಪ್ರದೇಶದ ಜಿಲ್ಲಾ ದಂಡಾಧಿಕಾರಿಯಿಂದ ಪೂರ್ವಾನುಮತಿ ಪಡೆಯಬೇಕು. ನಮೂನೆ ‘ಸಿ’ಯಲ್ಲಿ ಜಿಲ್ಲಾ ದಂಡಾಧಿಕಾರಿಗೆ ಮುಚ್ಚಳಿಕೆ ಪತ್ರ ಸಲ್ಲಿಸಬೇಕು. ಪಾಲ್ಗೊಳ್ಳುವ ಮಕ್ಕಳ ಪಟ್ಟಿ, ಪೋಷಕರು ಅಥವಾ ಪಾಲಕರ ಒಪ್ಪಿಗೆಪತ್ರ ಸಲ್ಲಿಸಬೇಕು. ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. […]
ಕಾಪು: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷನ ಮನೆಯಲ್ಲಿ ಕಳ್ಳತನ

ಉಡುಪಿ: ದಕ್ಷಿಣ ಕನ್ನಡ ಹಾಲು ಉತ್ಪಾದಕರ ಒಕ್ಕೂಟದ ಮಾಜಿ ಅಧ್ಯಕ್ಷ ಕಾಪು ದಿವಾಕರ ಶೆಟ್ಟಿ ಅವರ ಮನೆಯಲ್ಲಿ ಕಳ್ಳತನ ನಡೆದಿದೆ. ಕಾಪು ದಿವಾಕರ್ ಶೆಟ್ಟಿ ಅವರ ಕುಟುಂಬ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುವುದಕ್ಕಾಗಿ ಮುಂಬೈಗೆ ತೆರಳಿದ್ದರು. ಪುರಸಭಾ ಸದಸ್ಯ ಸುರೇಶ್ ಶೇರಿಗಾರ್ ಎಂಬರವನ್ನು ಮನೆಯ ಉಸ್ತುವಾರಿ ನೋಡಿಕೊಳ್ಳಲು ನೇಮಿಸಿದ್ದರು. ಗುರುವಾರ ರಾತ್ರಿ ಸುರೇಶ ಅವರು ಮನೆಯ ಮೇಲ್ಮಹಡಿಯಲ್ಲಿ ಮಲಗಿದ್ದ ವೇಳೆ ಮುಸುಕುಧಾರಿಗಳು ಮನೆಯ ಬಾಗಿಲು ಮುರಿದು ಒಳನುಗ್ಗಿ ಕಳ್ಳತನ ಮಾಡಿದ್ದಾರೆ. ಈ ವೇಳೆ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ನಗ ನಗದು […]
ಏ.21 ರಿಂದ ರಾಜ್ಯ ಸರ್ಕಾರಿ ನೌಕರರಿಗೆ ಖಾದಿ ವಸ್ತ್ರ ಕಡ್ಡಾಯ

ಬೆಂಗಳೂರು: ಜ.29 ರಂದು ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಸರ್ಕಾರಿ ಇಲಾಖೆಯ ಎಲ್ಲ ನೌಕರರಿಗೆ ಖಾದಿ ಬಟ್ಟೆ ಕಡ್ಡಾಯ ಎಂದು ಒಮ್ಮತದಿಂದ ತೀರ್ಮಾನಿಸಲಾಯಿತು. ಏಪ್ರಿಲ್ 21, ಸರ್ಕಾರಿ ನೌಕರರ ದಿನಾಚರಣೆಯ ದಿನದಂದೇ ಈ ನಿಯಮವನ್ನು ಜಾರಿಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಖಾದಿ ಉತ್ಪನ್ನಗಳನ್ನು ಉತ್ತೇಜಿಸುವ ಉದ್ದೇಶದಿಂದ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ನಿಗಮ-ಮಂಡಳಿ, ಪ್ರಾಧಿಕಾರ, ವಿಶ್ವವಿದ್ಯಾಲಯ, ಅನುದಾನಿತ ಸಂಸ್ಥೆಗಳ ಅಧಿಕಾರಿ-ನೌಕರರು ಸ್ವಯಂ ಪ್ರೇರಣೆಯಿಂದ ಖಾದಿ ಬಟ್ಟೆಗಳನ್ನು ಧರಿಸುವ ಸಂಬಂಧ […]
ಉಡುಪಿ:ಅಂಚೆ ಇಲಾಖೆ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಅಂಚೆ ಇಲಾಖೆಯು ಯು.ಪಿ.ಯು ಇಂಟರ್ನ್ಯಾಷನಲ್ ಲೆಟರ್ ರೈಟಿಂಗ್ ಕಾಂಪಿಟೇಷನ್ ಪ್ರಯುಕ್ತ 9 ರಿಂದ 15 ವರ್ಷದ ಒಳಗಿನ ವಿದ್ಯಾರ್ಥಿಗಳಿಗೆ “Write a letter to a friend about why human connection matters in a digital world” ಎಂಬ ವಿಷಯದ ಕುರಿತು ಪತ್ರ ಲೇಖನ ಸ್ಪರ್ಧೆಯನ್ನು ಹಮ್ಮಿಕೊಂಡಿದ್ದು, ಸ್ಪರ್ಧಾಳುಗಳು ಪತ್ರಲೇಖನವನ್ನು ಹಿಂದಿ, ಇಂಗ್ಲೀಷ್ ಅಥವಾ ಪ್ರಾದೇಶಿಕ ಭಾಷೆಯಲ್ಲಿ 800 ಶಬ್ದಗಳು ಮೀರದಂತೆ ಕೈ ಬರಹದಲ್ಲಿ ನಿಗಧಿಪಡಿಸಿದ ಕೇಂದ್ರದಲ್ಲಿ ಬರೆಯಬಹುದಾಗಿದೆ. ಆಸಕ್ತ ಅಭ್ಯರ್ಥಿಗಳು ತಮ್ಮ […]
ಉಡುಪಿ:ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗೆ ಪುಸ್ತಕಗಳ ಆಹ್ವಾನ

ಉಡುಪಿ: ಕರ್ನಾಟಕ ಬಾಲವಿಕಾಸ ಅಕಾಡೆಮಿ, ಧಾರವಾಡ ಇವರ ವತಿಯಿಂದ 2024 (ಜನವರಿ 2024 ರಿಂದ ಡಿಸೆಂಬರ್ 2024) ಹಾಗೂ 2025 (ಜನವರಿ-2025 ರಿಂದ ಡಿಸೆಂಬರ್-2025) ನೇ ಸಾಲಿನಲ್ಲಿ ಮಕ್ಕಳ ಕ್ಷೇತ್ರದಲ್ಲಿ ರಚಿಸಲ್ಪಟ್ಟ ಆಯ್ದ ಉತ್ತಮ ಪುಸ್ತಕಗಳಿಗೆ “ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿ”ಗಾಗಿ ಪುಸ್ತಕಗಳನ್ನು ಪ್ರದಾನ ಮಾಡಲು ಉದ್ದೇಶಿಸಲಾಗಿದ್ದು, 2024 ಹಾಗೂ 2025ನೇ ಸಾಲಿನ ಅವಧಿಯಲ್ಲಿ ಅಂದರೆ ಜನವರಿ ಯಿಂದ ಡಿಸೆಂಬರ್ ತಿಂಗಳ ಅಂತ್ಯದ ಅವಧಿಯಲ್ಲಿ ಪ್ರಕಟಗೊಂಡ ಸ್ವರಚಿತ ಕವನ ಸಂಕಲನ, ಕಥಾ ಸಂಕಲನ, ನಾಟಕ, (ಪಠ್ಯಾಧಾರಿತ ಬಿಟ್ಟು) […]