ಉಡುಪಿ:ವಿಶ್ವ ಪಾರ್ಶ್ವವಾಯು ದಿನಾಚರಣೆ
ಉಡುಪಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಜಿಲ್ಲಾಸರ್ವೇಕ್ಷಣ ಘಟಕ ಎನ್.ಸಿ.ಡಿ ವಿಭಾಗ, ಜಿಲ್ಲಾ ಆಸ್ಪತ್ರೆ ಉಡುಪಿ, ಕರ್ನಾಟಕ ಮೆದುಳು ಆರೋಗ್ಯ ಉಪಕ್ರಮ ಸಿ.ಎಸ್.ಐ ಲೋಂಬಾರ್ಡ ಮೆಮೋರಿಯಲ್ ಕಾಲೇಜ್ ಆಪ್ ನರ್ಸಿಂಗ್ ಉಡುಪಿ ಹಾಗೂ ಕಾಲೇಜು ಆಪ್ ನರ್ಸಿಂಗ್ ಮಣಿಪಾಲ್ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಅಜ್ಜರಕಾಡುವಿನ ಜಿಲ್ಲಾ ಆಸ್ಪತ್ರೆಯಲ್ಲಿ ವಿಶ್ವ ಪಾರ್ಶ್ವವಾಯು ದಿನಾಚರಣೆ ಹಾಗೂ ಜಾಗೃತಿ ಕಾರ್ಯಕ್ರಮವು ಮಂಗಳವಾರನಡೆಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ […]
ಉಡುಪಿ:ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಜಿ ಆಹ್ವಾನ
ಉಡುಪಿ: ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ವತಿಯಿಂದ ಪೋಕ್ಸೋ ಕಾಯಿದೆಯಡಿ ಸಂತ್ರಸ್ತ ಮಕ್ಕಳಿಗೆ ಬೆಂಬಲ ವ್ಯಕ್ತಿಗಳಿಗಾಗಿ ಸೇವೆ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಮಕ್ಕಳೊಂದಿಗೆ ಕೆಲಸ ಮಾಡುವ ಮೂಲಕ ಮಕ್ಕಳ ಶಿಕ್ಷಣ, ಅಭಿವೃದ್ಧಿ ಅಥವಾ ರಕ್ಷಣಾ ವಿಷಯದಲ್ಲಿ ಕನಿಷ್ಟ 3 ವರ್ಷಗಳ ಅನುಭವದೊಂದಿಗೆ ಪದವಿ ಅಥವಾ ಸಮಾಜ ಕಾರ್ಯ, ಸೋಷಿಯೋಲಾಜಿ, ಸೈಕೋಲಾಜಿ, ಚೈಲ್ಡ್ ಡೆವಲಪ್‌ಮೆಂಟ್ ವಿಷಯದಲ್ಲಿಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನವೆಂಬರ್ 8 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ […]
ಉಡುಪಿ:ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗಾಗಿ ಪತ್ರಕರ್ತರಿಂದ ಲೇಖನಗಳ ಅರ್ಜಿ ಆಹ್ವಾನ
ಉಡುಪಿ: ಬೆಂಗಳೂರಿನ “ಅಭಿಮಾನಿ ಪ್ರಕಾಶನ” ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾಮಟ್ಟದ ಕನ್ನಡಪತ್ರಿಕೆಗಳಲ್ಲಿ “ಸಾಮಾಜಿಕ ಸಮಸ್ಯೆ”ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ ಅಭಿಮಾನಿ ಪ್ರಶಸ್ತಿ”ಮೈಸೂರಿನ “ಮೈಸೂರು ದಿಗಂತ” ಪತ್ರಿಕಾ ಸಂಸ್ಥೆಯು “ಮಾನವೀಯ ಸಮಸ್ಯೆ” ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳಿಗೆ “ಮೈಸೂರು ದಿಗಂತ ಪ್ರಶಸ್ತಿ“, ಬೆಂಗಳೂರಿನ ಅಭಿಮನ್ಯು ಪತ್ರಿಕಾ ಸಂಸ್ಥೆಯು “ದಮನಿತ ಸಮುದಾಯಗಳ ಪರ ದನಿಯಾದಅತ್ಯುತ್ತಮ ಲೇಖನ/ ಅಂಕಣ/ ಸಂಪಾದಕೀಯ/ ಪರಿಣಾಮಕಾರಿ ವರದಿಗೆ ಅಭಿಮನ್ಯು ಪ್ರಶಸ್ತಿ, ಬೆಂಗಳೂರಿನ “ಪ್ರಜಾ ಸಂದೇಶ” ಪತ್ರಿಕಾಸಂಸ್ಥೆಯು ಶೋಷಣೆಯನ್ನು ಪರಿಣಾಮ ಕಾರಿಯಾಗಿ ಬಿಂಬಿಸುವ ಲೇಖನಕ್ಕೆ ” […]
ಉಡುಪಿ ಕೃಷ್ಣಮಠದಲ್ಲಿ ದೀಪಾವಳಿ ಸಂಭ್ರಮ; ಪರಸ್ಪರ ಎಣ್ಣೆ ಹಚ್ಚಿಕೊಂಡು ಭಕ್ತರೊಂದಿಗೆ ಬೆರೆತ ಪರ್ಯಾಯ ಶ್ರೀಗಳು
ಉಡುಪಿ: ಉಡುಪಿಯ ಶ್ರೀ ಕೃಷ್ಣಮಠದಲ್ಲಿ ದೀಪಾವಳಿ ಹಬ್ಬದ ಅಂಗವಾಗಿ ಜಲಪೂರಣ ಹಾಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು. ಜಲಪೂರಣ ಶಾಸ್ತ್ರದ ಅಂಗವಾಗಿ ಮಠದ ಪುರೋಹಿತರಾದ ರಾಘವೇಂದ್ರ ಕೊಂಡಂಚ ಇವರು ಕಲಶ ಪೂಜೆಯನ್ನು ಮಾಡಿದರು. ಪರ್ಯಾಯ ಶ್ರೀ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಹಾಗೂ ಕಿರಿಯ ಸುಶೀಂದ್ರತೀರ್ಥ ಶ್ರೀಪಾದರ ಉಪಸ್ಥಿತಿಯಲ್ಲಿ ಜಲಪೂರಣವನ್ನು ಮಾಡಲಾಯಿತು. ಮರುದಿನ ಬ್ರಾಹ್ಮೀ ಮುಹೂರ್ತದಲ್ಲಿ ಕೃಷ್ಣ ಮಠದ ಚಂದ್ರಶಾಲೆಯಲ್ಲಿ ಪುತ್ತಿಗೆ ಉಭಯ ಶ್ರೀಪಾದರು ಗಂದೋಪಚಾರದೊಂದಿಗೆ ಎಣ್ಣೆ ಶಾಸ್ತ್ರವನ್ನು ಮಾಡಿದರು. ನೆರೆದಿದ್ದ ಭಕ್ತರಿಗೂ ಎಣ್ಣೆಶಾಸ್ತ್ರವನ್ನು ಮಾಡಲಾಯಿತು.
ಬೈಂದೂರಿನಲ್ಲಿ ಚಡ್ಡಿ ಗ್ಯಾಂಗ್ ಪ್ರತ್ಯಕ್ಷ; ಸ್ಥಳೀಯರಲ್ಲಿ ಆತಂಕ
ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಪ್ರತ್ಯಕ್ಷಗೊಂಡು ಆತಂಕ ಸೃಷ್ಟಿಸಿದೆ. ಬೈಂದೂರು ತಾಲೂಕಿನಲ್ಲಿ ಚಡ್ಡಿ ಗ್ಯಾಂಗ್ ಮತ್ತೆ ಸಕ್ರಿಯಗೊಂಡಿದೆ. ಬೈಂದೂರು ತಾಲೂಕಿನ ನಾಗೂರಿನ ಮನೆಯೊಂದರ ಅಂಗಳದಲ್ಲಿ ಚಡ್ಡಿಗ್ಯಾಂಗ್ ಸದಸ್ಯನೋರ್ವ ಓಡಾಡುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಖತರ್ನಾಕ್ ಚಡ್ಡಿ ಗ್ಯಾಂಗ್ ನ ಸದಸ್ಯ ಬನಿಯಾನ್, ಚಡ್ಡಿ ಹಾಕಿಕೊಂಡು ಕೈಯಲ್ಲಿ ಚಪ್ಪಲಿ ಹಿಡಿದು ರಾತ್ರಿ ಸಂಚಾರ ಮಾಡುತ್ತಿರುವ ದೃಶ್ಯ ಕಂಡುಬಂದಿದ್ದು, ಮನೆಯ ಸಿಸಿ ಕ್ಯಾಮೆರಾವನ್ನು ನೋಡುತಿದ್ದಂತೆ ಆತ ಅಲ್ಲಿಂದ ಓಡಿಹೋಗಿದ್ದಾನೆ. ಈ ಘಟನೆಯಿಂದ ಸ್ಥಳೀಯರಲ್ಲಿ ಚಡ್ಡಿ ಗ್ಯಾಂಗ್ ಆತಂಕ […]