ವಿದ್ಯಾರ್ಥಿಗಳ, ಶಿಕ್ಷಕರ ಪರಿಶ್ರಮಕ್ಕೆ ಸಿಕ್ಕ ಫಲ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

ಉಡುಪಿ: ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಜ ಉತ್ತಮ ಸಾಧನೆ ಮಾಡಿದ್ದಾರೆ. ವಿದ್ಯಾರ್ಥಿಗಳ ಮತ್ತು ಶಿಕ್ಷಕರ ತಂಡದ ಎರಡು ವರ್ಷದ ಪರಿಶ್ರಮಕ್ಕೆ ಫಲ ಲಭಿಸಿದೆ. ವರ್ಷಪೂರ್ತಿ ಓದಿ, ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಹಿನ್ನೆಲೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಅಧಿಕಾರಿಗಳ ಮಟ್ಟದಲ್ಲಿ ಪ್ರಾಂಶುಪಾಲರ ಹಲವಾರು ಸಭೆಗಳನ್ನು ಮಾಡಿದ್ದೆವು. ಶೈಕ್ಷಣಿಕ ವರ್ಷದ ಆರಂಭದಿಂದ ಪ್ರಥಮ ಸ್ಥಾನದ ಗುರಿಯನ್ನು […]

ಎ.10ರಂದು ಉಡುಪಿಗೆ ‘ಜನಾಕ್ರೋಶ ಯಾತ್ರೆ’ ಆಗಮನ

ಉಡುಪಿ: ರಾಜ್ಯ ಕಾಂಗ್ರೆಸ್ ಸರಕಾರ ಬೆಲೆ ಏರಿಕೆ, ಮುಸ್ಲಿಂ ಓಲೈಕೆ, ದಲಿತರ ಹಣ ಲೂಟಿ ಮಾಡುತ್ತಿದೆ ಹಾಗೂ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಆರೋಪಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹಮ್ಮಿಕೊಂಡಿರುವ ‘ಜನಾಕ್ರೋಶ ಯಾತ್ರೆ’ಯು ಎ.10ರಂದು ಉಡುಪಿ ಜಿಲ್ಲೆಗೆ ಆಗಮಿಸಲಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10 ಗಂಟೆಗೆ ಶ್ರೀಕೃಷ್ಣ ಮಠದ ರಾಜಾಂಗಣದ ಪಾರ್ಕಿಂಗ್ ಪ್ರದೇಶದಲ್ಲಿ ಬಿ.ವೈ ವಿಜಯೇಂದ್ರ ಯಾತ್ರೆಗೆ ಚಾಲನೆ […]

ಪಿಯುಸಿ ಫಲಿತಾಂಶ: ರಾಜ್ಯಕ್ಕೆ ಟಾಪರ್ ಆದ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳಿವರು

ಉಡುಪಿ: ಈ ಬಾರಿಯ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ. ರಾಜ್ಯದಲ್ಲೇ ಉಡುಪಿ ಜಿಲ್ಲೆ ಮೊದಲ ಸ್ಥಾನದಲ್ಲಿದೆ. ಆಸ್ತಿ. ಎಸ್ ಶೆಟ್ಟಿ ರಾಜ್ಯಕ್ಕೆ ನಾಲ್ಕನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿ ಜಿಲ್ಲೆಯ ಕಾರ್ಕಳದ ಜ್ಞಾನಸುಧಾ ಕಾಲೇಜಿನ ವಿದ್ಯಾರ್ಥಿನಿ. ಆಸ್ತಿ ಎಸ್ ಶೆಟ್ಟಿ ಪಿಯುಸಿ ವಿಜ್ಞಾನ ವಿಭಾಗದಲ್ಲಿ 596 ಅಂಕ ಗಳಿಸಿದ್ದಾರೆ. ಭೂಮಿಕಾ ಆರ್ ಹೆಗ್ಡೆ ರಾಜ್ಯಕ್ಕೆ ಐದನೇ ರ್ಯಾಂಕ್ ಗಳಿಸಿದ್ದು, ಇವರು ಉಡುಪಿಯ ಎಂಜಿಎಂ ಕಾಲೇಜಿನ ವಿದ್ಯಾರ್ಥಿನಿ. ಭೂಮಿಕ ಆರ್ ಹೆಗ್ಡೆಗೆ […]

ಅಂಗಡಿಗಳಲ್ಲಿ ನೀರಿನ ಬಾಟಲ್​​​​ ಖರೀದಿಸುವ ಮೊದಲು ಇರಲಿ ಎಚ್ಚರ.!

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರ ಗೋಬಿ ಮಂಚೂರಿಗೆ, ಕಾಟನ್ ಕ್ಯಾಂಡಿಗಳಿಗೆ ಹಾಕುವ ಕೃತಕ ಬಣ್ಣಗಳು ಸೇರಿದಂತೆ ಪ್ರತಿನಿತ್ಯ ಸೇವಿಸುವ ಸಾಕಷ್ಟು ಆಹಾರಗಳಲ್ಲಿನ ಕಲಬೆರಕೆಗಳಿಗೆ ನಿಷೇಧ ಹೇರುತ್ತಲೇ ಇದೆ. ಇದೀಗ ಬಾಟಲ್ ಮೂಲಕ ಪೂರೈಕೆ ಆಗುವ ಕುಡಿಯುವ ನೀರು ಶೇಕಡ 50ರಷ್ಟು ಕಳಪೆ ಎಂದು ಆಹಾರ ಇಲಾಖೆಯ ವರದಿ ತಿಳಿಸಿದೆ. ಈ ಕುರಿತು ವಿಕಾಸಸೌಧದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಹತ್ತರ ಸುದ್ದಿಗೋಷ್ಠಿ ನಡೆಸಿದ್ದಾರೆ. ಈಗಾಗಲೇ 296 ಕುಡಿಯುವ ನೀರಿನ ಬಾಟಲ್ ಮಾದರಿಗಳ ಟೆಸ್ಟ್ ಮಾಡಿದ್ದು, ಇದರಲ್ಲಿ72 ಸುರಕ್ಷಿತ […]

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಪ್ರಥಮ‌ ಸ್ಥಾನ; ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹರ್ಷ

ಉಡುಪಿ: ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಬಂದಿರುವುದಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹರ್ಷ ವ್ಯಕ್ತಪಡಿಸಿದ್ದಾರೆ. ಉಡುಪಿ ಜಿಲ್ಲೆ ಶೈಕ್ಷಣಿಕವಾಗಿ ಸಾಕಷ್ಟು ಮುಂದಿದ್ದು, ಜಿಲ್ಲೆಯ ಮಕ್ಕಳ ಸಾಧನೆ ನಿಜಕ್ಕೂ ಮೆಚ್ಚುವಂಥದ್ದು. ಮಕ್ಕಳ ಭವಿಷ್ಯ ಉಜ್ವಲವಾಗಲಿ. ಪ್ರಥಮ ಸ್ಥಾನ ಪಡೆಯಲು ಶ್ರಮಿಸಿದ ಸಂಬಂಧಿಸಿದ ಅಧಿಕಾರಿಗಳು ಹಾಗೂ ಪೋಷಕರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದು ಸಚಿವರು ತಿಳಿಸಿದ್ದಾರೆ.