ಉಡುಪಿ: ಮಾನಸಿಕ ಅಸ್ವಸ್ಥ ನಾಪತ್ತೆ

ಉಡುಪಿ: ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಕುಂಜಿಬೆಟ್ಟು ಜನತಾಕಾಲನಿ ನಿವಾಸಿಯಾದ ಆರ್. ರಾಜು (68) ಎಂಬ ವ್ಯಕ್ತಿಯು ಮಾನಸಿಕ ಅಸ್ವಸ್ಥರಾಗಿದ್ದು, ಪತ್ನಿಯ ಮರಣ ನಂತರ ಸರಿಯಾಗಿ ಮನೆಗೆ ಬಾರದೆ ಸಂಬoಧಿಕರ ಮನೆಯಲ್ಲಿ ಉಳಿದುಕೊಂಡು 2-3 ತಿಂಗಳಿಗೊಮ್ಮೆ ಮನೆಗೆ ಬಂದು ಹೋಗುತ್ತಿದ್ದು, ಸುಮಾರು ಒಂದೂವರೆ ವರ್ಷಗಳಿಂದ ಮನೆಗೂ ಬಾರದೇ ಸಂಬಧಿಕರ ಮನೆಗೂ ಹೋಗದೇ ನಾಪತ್ತೆಯಾಗಿರುತ್ತಾರೆ. 5 ಅಡಿ 3 ಇಂಚು ಎತ್ತರ, ಸಾಧಾರಣ ಮೈಕಟ್ಟು, ಉದ್ದಮುಖ ಹೊಂದಿರುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಎಸ್.ಐ […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ: ಸುಮಾರು 19 ವರ್ಷಗಳಿಂದ ಮಾನಸಿಕ ಕಾಯಿಲೆಯಿಂದ ಬಳಲುತ್ತಿದ್ದ ನಗರದ ಅಲೆವೂರಿನ ನೆಹರು ನಗರದಲ್ಲಿ ವಾಸವಿದ್ದ ಕುಮಾರ ಕೃಷ್ಣ (47) ಎಂಬ ವ್ಯಕ್ತಿಯು ಸೆಪ್ಟಂಬರ್ 13 ರಂದು ಬೆಳಗ್ಗೆ 10.30 ರ ಸುಮಾರಿಗೆ ಅಲೆವೂರು ವಿಷ್ಣುಮೂರ್ತಿ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೂ ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ 10 ಇಂಚು ಎತ್ತರ, ಬಿಳಿ ಮಿಶ್ರಿತ ಗೋಧಿ ಬಣ್ಣ, ಕೋಲುಮುಖ, ಸಾಧಾರಣ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ […]
ಕಾರ್ಕಳ: ನಿಟ್ಟೆಯಲ್ಲಿ ಉದ್ಘಾಟನೆಗೊಂಡ ‘ನಿಸ್ತಂತು’ ಉಪಗ್ರಹ ಟ್ರ್ಯಾಕಿಂಗ್ ಕೇಂದ್ರ

ಕಾರ್ಕಳ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಾನಿಕ್ಸ್ ಮತ್ತು ಕಮ್ಯೂನಿಕೇಶನ್ ಎಂಜಿನಿಯರಿಂಗ್ ವಿಭಾಗ ಮತ್ತು ಇ & ಸಿ (ಅಡ್ವಾನ್ಸ್ಡ್ ಕಮ್ಯೂನಿಕೇಶನ್ ಟೆಕ್ನಾಲಜಿ) ವಿಭಾಗ ಜಂಟಿಯಾಗಿ ಸ್ಥಾಪಿಸಿದ ಉಪಗ್ರಹ ಟ್ರ್ಯಾಕಿಂಗ್ ಕೇಂದ್ರವಾದ ‘ನಿಟ್ಟೆ ಸ್ಯಾಟಲೈಟ್ ಟ್ರ್ಯಾಕಿಂಗ್ ಮತ್ತು ನ್ಯಾವಿಗೇಷನಲ್ ಟೆಲಿಮೆಟ್ರಿ ಯುನಿಟ್’ – ನಿಸ್ತಂತು ವನ್ನು ಅಕ್ಟೋಬರ್ 9 ರಂದು ನಿಟ್ಟೆಯ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಉದ್ಘಾಟಿಸಲಾಯಿತು. ಈ ಕೇಂದ್ರವನ್ನು ಉಡುಪಿ ಜಿಲ್ಲಾ ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ (ASP) […]
ಮಂಗಳೂರು: ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಸೈಂಟ್ ಆಗ್ನೆಸ್ ಕಾಲೇಜು: ಪರೀಕ್ಷೆ ಮುಂದೂಡಿಕೆ

ಮಂಗಳೂರು: ದಸರಾ ಹಬ್ಬದ ಸಂದರ್ಭದಲ್ಲಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ ವಿದ್ಯಾರ್ಥಿನಿಯರು ನಡೆಸಿದ ಪ್ರತಿಭಟನೆಗೆ ಕೊನೆಗೂ ಸ್ಪಂದಿಸಿರುವ ಮಂಗಳೂರಿನ ಬೆಂದೂರ್ವೆಲ್ನ ಸೈಂಟ್ ಆಗ್ನೆಸ್ ಕಾಲೇಜು, ಅಕ್ಟೋಬರ್ 19 ಮತ್ತು 22ರಂದು ನಡೆಯಬೇಕಿದ್ದ ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ. ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಲಾಗಿತ್ತು. ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ವಿದ್ಯಾರ್ಥಿನಿಯರು, ಪರೀಕ್ಷೆಗಳನ್ನು ಮುಂದೂಡುವಂತೆ ಆಗ್ರಹಿಸಿ ಕಾಲೇಜಿನ ಗೇಟ್ ಎದುರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಗೆ […]
ಉಡುಪಿಗೆ ಸಿಕ್ಕಿತು ಕರ್ನಾಟಕದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆ ಎನ್ನುವ ಹೆಗ್ಗಳಿಕೆ: ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆಯಷ್ಟೇ ಬಾಕಿ!

ಬೆಂಗಳೂರು: ಶಿಕ್ಷಣ ಮತ್ತು ಸಾಕ್ಷರತೆಯಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಗೆ ಮತ್ತೊಂದು ಐತಿಹಾಸಿಕ ಹೆಗ್ಗಳಿಕೆ ದೊರೆತಿದೆ. ಕರ್ನಾಟಕದಲ್ಲೇ ಪ್ರಥಮ ಬಾರಿಗೆ ಉಡುಪಿ ಜಿಲ್ಲೆಯನ್ನು ‘ಸಂಪೂರ್ಣ ಸಾಕ್ಷರತಾ ಜಿಲ್ಲೆ’ ಎಂದು ಅಧಿಕೃತವಾಗಿ ಘೋಷಿಸಲು ರಾಜ್ಯ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳು ಅಧಿಕೃತ ಆದೇಶ ಹೊರಡಿಸಿದ್ದು, ಉಡುಪಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ (ಸಿಇಒ) ಜಿಲ್ಲೆಯನ್ನು ಸಂಪೂರ್ಣ ಸಾಕ್ಷರತಾ ಜಿಲ್ಲೆಯೆಂದು ಘೋಷಿಸಲು ಅಧಿಕಾರ ನೀಡಿದ್ದಾರೆ. ಭಾರತ […]