ಉಡುಪಿ:ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ : ಅರ್ಜಿ ಆಹ್ವಾನ

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಬಿ.ಎಡ್ ನಲ್ಲಿ ವ್ಯಾಸಾಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಂದ ವಿಶೇಷ ಪ್ರೋತ್ಸಾಹಧನ ಸೌಲಭ್ಯ ಪಡೆಯಲು ಸೇವಾಸಿಂಧು ವೆಬ್‌ಸೈಟ್ https://sevasindhu.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕುಂದಾಪುರ ದೂ.ಸಂಖ್ಯೆ: 08254-23070 ಹಾಗೂ ಕಾರ್ಕಳ ದೂ.ಸಂಖ್ಯೆ: 08258-231101 ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಇಲಾಖೆಯ […]

ಉಡುಪಿ:ಜ.26 ರಂದು ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ

ಉಡುಪಿ: ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ಆಚರಣಾ ಸಮಿತಿ ಉಡುಪಿ ಜಿಲ್ಲೆ ಇವರ ವತಿಯಿಂದ ಜಿಲ್ಲಾ ಮಟ್ಟದ ಗಣರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮವು ಜನವರಿ 26 ರಂದು ಬೆಳಗ್ಗೆ 8.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ, ಗಣರಾಜ್ಯೋತ್ಸವದ ಸಂದೇಶ ನೀಡಲಿದ್ದು,ಶಾಸಕ ಯಶ್‌ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. […]

ಉಡುಪಿ:ಮಕ್ಕಳ ಸುರಕ್ಷತೆಗಾಗಿ ಸರ್ಕಾರ ರೂಪಿಸುವ ನೀತಿಗಳು ತಳಮಟ್ಟದಲ್ಲಿ ಜಾರಿಯಾಗಲಿ: ತಿಪ್ಪೇಸ್ವಾಮಿ ಕೆ. ಟಿ

ಉಡುಪಿ: ಸರ್ಕಾರ ಮಕ್ಕಳ ರಕ್ಷಣೆಗಾಗಿ ಜಾರಿಗೆ ತಂದಿರುವ ನೀತಿ ನಿಯಮಾವಳಿಗಳು ತಳಮಟ್ಟದಲ್ಲಿ ಪ್ರತಿಶತಃ ನೂರರಷ್ಟು ಸಮರ್ಪಕವಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ತಿಪ್ಪೇಸ್ವಾಮಿ ಕೆ. ಟಿ ಹೇಳಿದರು. ಅವರು ಬುಧವಾರ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾಆಯೋಗ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾಘಟಕ, ಮಕ್ಕಳ ಸಹಾಯವಾಣಿ, ಶಾಲಾ ಶಿಕ್ಷಣ ಮತ್ತು […]

ಉಡುಪಿ:ವಚನಗಳ ಮೂಲಕ ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದವರು ಶಿವಶರಣರು : ಎಂ.ಎ ಗಫೂರ್

ಉಡುಪಿ: ಹನ್ನೆರಡನೆಯ ಶತಮಾನವನ್ನು ವಚನ ಕ್ರಾಂತಿಯುಗ ಎನ್ನಲಾಗುತ್ತಿದ್ದು, ಅಂದಿನ ಕಾಲಘಟ್ಟದಲ್ಲಿ ಶಿವಶರಣೆಯರು ಸಮಾಜದಲ್ಲಿ ಆಳವಾಗಿ ಬೇರೂರಿದ್ದ ಅಸ್ಪೃಷ್ಯತೆ, ಜಾತೀಯತೆ, ಅಸಮಾನತೆಯನ್ನು ತೊಲಗಿಸಲು ತಮ್ಮದೇ ಶೈಲಿಯಲ್ಲಿ ಸರಳ ರೂಪದಲ್ಲಿ ವಚನಗಳನ್ನು ರಚಿಸುವ ಮೂಲಕ ಜನಸಾಮಾನ್ಯರು ಸನ್ಮಾರ್ಗದಲ್ಲಿ ನಡೆಯಲು ದಾರಿ ತೋರಿದ್ದಾರೆ. ಅಂದು ಶಿವಶರಣರು ಪ್ರತಿಪಾದಿಸಿದ ವಚನ ಸಾರಗಳು ಸಮಾಜದಲ್ಲಿ ಇಂದಿಗೂ ಪ್ರಸ್ತುತವಾಗಿದೆ ಎಂದು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷಎಂ.ಎ ಗಫೂರ್ ಹೇಳಿದರು. ಅವರು ನಗರದ ವಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತುಸಂಸ್ಕೃತಿ […]

ಕಾರ್ಕಳ: ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್‌ನಲ್ಲಿ ಉದ್ಯೋಗಾವಕಾಶ

ಕಾರ್ಕಳ:ಕಾರ್ಕಳದ ಕ್ರಿಯೇಟಿವ್ ಎಜುಕೇಶನ್ ಫೌಂಡೇಶನ್ ಸಂಸ್ಥೆಯಲ್ಲಿ ಡಿಸಿಪ್ಲಿನ್ ಆಫೀಸರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಭೂಸೇನೆ / ರಕ್ಷಣಾ ಇಲಾಖೆ (Ex-Army / Defence) ಹಿನ್ನೆಲೆ ಹೊಂದಿರುವ ಅಭ್ಯರ್ಥಿಗಳು ಕಡ್ಡಾಯವಾಗಿ ಅರ್ಹರಾಗಿರಬೇಕು.ಶಾಲೆ ಅಥವಾ ಶಿಕ್ಷಣ ಸಂಸ್ಥೆಗಳ ಅನುಭವ ಹೊಂದಿರುವವರಿಗೆ ಆದ್ಯತೆ ನೀಡಲಾಗುತ್ತದೆ. ವಸತಿ ಅಭ್ಯರ್ಥಿಗಳಿಗೆ (Residential) ಅವಕಾಶ ನೀಡಲಾಗುತ್ತದೆ. ಆಸಕ್ತ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಈ ಸಂಖ್ಯೆಗೆ ಸಂಪರ್ಕಿಸಬಹುದು:📞+91 96069 97391ಇಮೇಲ್: [email protected]