ಮಣಿಪಾಲ:ಶೀಘ್ರದಲ್ಲೇ ವಾರಾಂತ್ಯ ಯೋಗ ತರಗತಿಗಳು ಆರಂಭ

ಉಡುಪಿ:ಮಣಿಪಾಲದ ಪ್ರಿಸಂ ಸ್ಟುಡಿಯೋ (ಕ್ರಿಸ್ಟಲ್ ಬಿಸಿನೆಸ್ ಹಬ್, ಡಿಸಿ ಆಫೀಸ್ ಸಮೀಪ) ನಲ್ಲಿ ವಾರಾಂತ್ಯ ಯೋಗ ಕ್ಲಾಸ್ಗಳು ಶೀಘ್ರದಲ್ಲೇ ಆರಂಭಗೊಳ್ಳಲಿವೆ. ದೇಹ–ಉಸಿರಾಟ–ಜಾಗೃತಿಯ ಸಮನ್ವಯದ ಮೂಲಕ ವ್ಯಕ್ತಿತ್ವ ವಿಕಾಸಕ್ಕೆ ನೆರವಾಗುವ ಈ ತರಗತಿಗಳನ್ನು ಡಾ. ಸ್ವರೂಪಾ ಮೊರೆ ನಡೆಸಲಿದ್ದಾರೆ. ಶನಿವಾರ ಮತ್ತು ಭಾನುವಾರ ಬೆಳಗ್ಗೆ 7 ರಿಂದ 8 ಗಂಟೆಯವರೆಗೆ ತರಗತಿಗಳು ನಡೆಯಲಿದ್ದು, ನೋಂದಣಿಗಾಗಿ ಸಂಪರ್ಕಿಸಿ:📞 7676843931 / 8310159071
ಕೇಸರಿ ಧ್ವಜ ಪ್ರದರ್ಶನ: ಉಡುಪಿ ಜಿಲ್ಲಾಧಿಕಾರಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಮುಖ್ಯಮಂತ್ರಿಗೆ ಪತ್ರ.

ಉಡುಪಿ: ಜ.18ರ ಮುಂಜಾನೆ ನಗರದ ಜೋಡುಕಟ್ಟೆ ಬಳಿ ನಡೆದ ಶೀರೂರು ಪರ್ಯಾಯದ ಪುರಮೆರವಣಿಗೆ ಸಂದರ್ಭ ಆರೆಸ್ಸೆಸ್ ಧ್ವಜ ಹಿಡಿದು ಹಾರಿಸುತ್ತಾ ಮೆರವಣಿಗೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾನೂನು ಮತ್ತು ಮಾನವ ಹಕ್ಕುಗಳ ಸೆಲ್ ಮುಖ್ಯಮಂತ್ರಿ ಸಿದ್ಧರಾಮಯ್ಯರಿಗೆ ಪತ್ರ ಬರೆದಿದೆ. ಮುಂಜಾನೆ 3:00ಗಂಟೆ ಸುಮಾರಿಗೆ ಮೆರವಣಿಗೆಯ ವೇಳೆ ಉಪಸ್ಥಿತರಿದ್ದ ಜಿಲ್ಲಾಧಿಕಾರಿಯವರ ಕೈಗೆ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ಆರೆಸ್ಸೆಸ್ ಧ್ವಜ (ಭಗವಾನ್ಧ್ವಜ) […]
CSEET ಕಂಪೆನಿ ಸೆಕ್ರೆಟರಿ ಅರ್ಹತ ಪರೀಕ್ಷೆ – 2026 ಜನತಾ ಪಿ.ಯು. ಕಾಲೇಜು ರಾಜ್ಯಕ್ಕೆ ಪ್ರಥಮ ಸ್ಥಾನ :ದಾಖಲೆಯ 40 ವಿದ್ಯಾರ್ಥಿಗಳು ಉತ್ತೀರ್ಣ

ಕುಂದಾಪುರ: CSEET-ಇನ್ಸ್ಟಿಟ್ಯೂಟ್ ಆಫ್ ಕಂಪನಿ ಸೆಕ್ರೆಟರಿಸ್ ಆಫ್ ಇಂಡಿಯಾ ಇವರು ನಡೆಸುವ ಎಕ್ಸಿಕ್ಯೂಟಿವ್ ಎಂಟ್ರೆನ್ಸ್ ಟೆಸ್ಟ್ (ಅರ್ಹತಾ ಪರೀಕ್ಷೆ)ಯಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು, ಪರೀಕ್ಷೆ ಬರೆದ 43 ವಿದ್ಯಾರ್ಥಿಗಳಲ್ಲಿ 40 ವಿದ್ಯಾರ್ಥಿಗಳು ಅತ್ಯಧಿಕ ಅಂಕಗಳನ್ನು ಪಡೆಯುದರ ಮೂಲಕ CS ಎಕ್ಸಿಕ್ಯೂಟಿವ್ ಪ್ರೋಗ್ರಾಮ್ ಗೆ ಅರ್ಹತೆ ಪಡೆದಿದ್ದಾರೆ. ಸಾಧನೆ ಮೆರೆದು ಅರ್ಹತೆ ಪಡೆದ ವಿದ್ಯಾರ್ಥಿಗಳು ಕ್ರಮವಾಗಿ ಸಹನಾ(168), ಅಮೂಲ್ಯ ಆರ್ ಶೆಟ್ಟಿ (166),ಧನುಷ್ ಆರ್ ಹೆಬ್ಬಾರ್( 164)ಪ್ರಥಮ್ ಜಿ ಕಾಂಚನ್(159),ಶಮ್ಯ(156) ಶಿವಮ್(155),ಶಯನ್(154),ಶ್ರೀಶಾ ಆರ್ ಶೆಟ್ಟಿ (154),ದ್ರಶ್ಯ ಜಿ […]
ಸಹಕಾರಿ ಕ್ಷೇತ್ರದಿಂದ ದೇಶದ ಆರ್ಥಿಕ ವ್ಯವಸ್ಥೆ ಬಲವರ್ಧನೆ-ಜಯಕರ ಶೆಟ್ಟಿ ಇಂದ್ರಾಳಿ

ಉಡುಪಿ: ದೇಶದ ಆರ್ಥಿಕ ವ್ಯವಸ್ಥೆಯನ್ನು ಸಹಕಾರಿ ಕ್ಷೇತ್ರದಿಂದ ಪ್ರಗತಿ ಪಥದತ್ತ ಕೊಂಡೊಯ್ಯಲು ಸಾಧ್ಯವಿದೆ. ಇದನ್ನು ಮನಗಂಡಿರುವ ಕೇಂದ್ರ ಹಾಗೂ ರಾಜ್ಯ ಸರಕಾರಗಳು ಸಹಕಾರಿ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ನೀತಿಗಳನ್ನು ಜಾರಿಗೊಳಿಸುತ್ತಿದೆ. ಇದನ್ನು ಎಲ್ಲರಿಗೂ ತಲುಪಿಸುವ ಕೆಲಸ ಆಗಬೇಕಿದೆ ಎಂದು ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ ಹೇಳಿದರು. ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಹಾಗೂ ಸಹಕಾರ ಇಲಾಖೆ ಆಶ್ರಯದಲ್ಲಿ ಮೈಸೂರು ವಿಭಾಗದ ಮೀನುಗಾರರ ಸಹಕಾರ ಸಂಘಗಳ ಪದಾಧಿಕಾರಿಗಳು […]
CSEET ಜನವರಿ ಆವೃತ್ತಿಯ ಪರೀಕ್ಷ ಫಲಿತಾಂಶ ಪ್ರಕಟ: ಕಾರ್ಕಳದ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳ ಅಮೋಘ ಸಾಧನೆ.

ಕಾರ್ಕಳ: ICSI ಬೋರ್ಡ್ ನಿಂದ ನಡೆಸಲ್ಪಡುವ ದೇಶದ ಅತಿ ಕ್ಲಿಷ್ಟಕರ ಪರೀಕ್ಷೆಗಳಲ್ಲಿ ಒಂದಾದ CSEET ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿಕೊಂಡಿದ್ದಾರೆ. ದೇಶದಲ್ಲಿ ಕಂಪನಿ ಸೆಕ್ರೆಟರಿ ಪರೀಕ್ಷೆಯ ಅರ್ಹತೆಗಾಗಿ ನಡೆಯುವ CSEET ಪರೀಕ್ಷೆಯಲ್ಲಿ ಕ್ರಿಯೇಟಿವ್ ಕಾಲೇಜಿನ 60 ವಿದ್ಯಾರ್ಥಿಗಳ ಪೈಕಿ 41 ವಿದ್ಯಾರ್ಥಿಗಳು ತೇರ್ಗಡೆಗೊಂಡು ಮುಂದಿನ CS ಪರೀಕ್ಷೆಗೆ ಅರ್ಹತೆಯನ್ನು ಪಡೆದುಕೊಂಡಿದ್ದಾರೆ. 200ಕ್ಕೆ ಅತಿ ಹೆಚ್ಚು 169 ಅಂಕವನ್ನು ಪಡೆದ ಸಾಯಿ ಪ್ರಸಾದ್ ಕಾಲೇಜಿಗೆ ಪ್ರಥಮ ಸ್ಥಾನಿಯಾಗಿ, ಕಿಶನ್ ಎನ್ .157, ಮಂಗಿಲಾಲ್ […]