ಮೂಡುಬಿದಿರೆ: ಯುವಕ ಆತ್ಮಹತ್ಯೆ

ಮೂಡುಬಿದಿರೆ: ಹೊಟೇಲ್ ಉದ್ಯಮವನ್ನು ಆರಂಭಿಸಬೇಕೆಂದು ಕನಸು ಕಂಡಿದ್ದ ಯುವಕನೋರ್ವ ನೇಣಿಗೆ ಶರಣಾದ ಘಟನೆ ಶನಿವಾರ ಮಧ್ಯಾಹ್ನ ನಾಗರಕಟ್ಟೆಯ ರಿಂಗ್ ರೋಡ್ ಬಳಿಯಲ್ಲಿ ನಡೆದಿದೆ. ನಾಗರಕಟ್ಟೆ-ಒಂಟಿಕಟ್ಟೆ ಕ್ರಾಸ್ ರಸ್ತೆಯ ಬಳಿ ಕಬ್ಬಿನ ಜ್ಯೂಸ್ ನ ಮಾರಾಟ ಮಾಡುತ್ತಿರುವ ಶ್ರೀನಿವಾಸ್ ಅವರ ಮಗ ದೀಕ್ಷಿತ್ (35) ಆತ್ಮಹತ್ಯೆ ಮಾಡಿಕೊಂಡ ಯುವಕ. ದುಬೈನಲ್ಲಿ ಉದ್ಯೋಗ ಮಾಡುತ್ತಿದ್ದ ದೀಕ್ಷಿತ್ ಕಳೆದ ಒಂದೂವರೆ ವಷ೯ಗಳಿಂದ ಊರಿನಲ್ಲಿಯೇ ಇದ್ದು ಹೊಟೇಲ್ ನಡೆಸುವ ಯೋಚನೆಯನ್ನು ಮಾಡಿದ್ದು ಅದಕ್ಕೆ ಪೂರಕವಾದ ಕೆಲಸಗಳನ್ನು ಮಾಡಿದ್ದರು. ತಾಯಿ ಅನಾರೋಗ್ಯ ಪೀಡಿತರಾಗಿದ್ದು, ಅವರ […]
ಉಡುಪಿ ಪರ್ಯಾಯ: ಶ್ರೀ ಸರ್ವಜ್ಞ ಪೀಠಾರೋಹಣ ಮಾಡಿದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರು

ಉಡುಪಿ: ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶೀರೂರು ಮಠದ 31ನೇ ಯತಿಯಾಗಿ ಜ.18ರ ಮುಂಜಾನೆ ಸರ್ವಜ್ಞ ಪೀಠವೇರಿ ಶ್ರೀಕೃಷ್ಣಮಠದ ಕೃಷ್ಣಪೂಜಾ ಕೈಂಕರ್ಯವನ್ನು ಮುಂದಿನ ಎರಡು ವರ್ಷ ನೆರವೇರಿಸಲಿದ್ದಾರೆ. ಉಡುಪಿ ಪ್ರಯಾಯೋತ್ಸವವು ಲಕ್ಷಾಂತರ ಭಕ್ತಸಾಗರದ ಸಂಭ್ರಮೋತ್ಸವಕ್ಕೆ ಸಾಕ್ಷಿಯಾಯಿತು. ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಜ.18 ರಂದು ಪ್ರಾತಃ ಕಾಲ 1.15ಕ್ಕೆ ಕಾಪು ಸಮೀಪದ ದಂಡತೀರ್ಥದಲ್ಲಿ ಪವಿತ್ರ ಸ್ನಾನ ಮಾಡಿದರು.ಪ್ರಾತಃ ಕಾಲ 2ಕ್ಕೆ ಜೋಡುಕಟ್ಟೆಯಿಂದ ವೈಭವದ ಪರ್ಯಾಯ ಮೆರವಣಿಗೆ ಪ್ರಾರಂಭವಾಯಿತು. ಈ ವೇಳೆ ಲಕ್ಷಾಂತರ ಭಕ್ತರು ರಸ್ತೆಯ ಇಕ್ಕೆಲದಲ್ಲಿ ಕಿಕ್ಕಿರಿದು […]
ಉಡುಪಿ XPRESS.COM ಉಡುಪಿ ಪರ್ಯಾಯ ವಿಶೇಷ ಸಂಚಿಕೆ “ಪರ್ಯಾಯ ಚರಿತೆ”ಬಿಡುಗಡೆ

ಉಡುಪಿ: ಉಡುಪಿ xpress.com ಡಿಜಿಟೆಲ್ ಸುದ್ದಿ ಮಾಧ್ಯಮ, ಉಡುಪಿಯ ಶೀರೂರು ಪರ್ಯಾಯ ಮಹೋತ್ಸವದ ಕುರಿತು ಸಿದ್ಧಪಡಿಸಿದ ವಿಶೇಷ ಸಂಚಿಕೆ “ಪರ್ಯಾಯ ಚರಿತೆ” ಯನ್ನು ಶೀರೂರು ಮಠದ ಪರ್ಯಾಯ ಪೀಠವೇರಲಿರುವ ಶ್ರೀ ವೇದವರ್ಧನ ತೀರ್ಥ ಸ್ವಾಮೀಜಿಯವರು ಶನಿವಾರ ಶೀರೂರು ಮಠದಲ್ಲಿ ಅನಾವರಣಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಡುಪಿ Xprss.Com ಸಂಪಾದಕರಾದ ಪ್ರಸಾದ್ ಶೆಣೈ, ಮಾರ್ಕೆಟಿಂಗ್ ವಿಭಾಗದ ಮುಖ್ಯಸ್ಥರಾದ ಸ್ವರೂಪ್ ಶ್ರೀಯನ್, ಅಶೋಕ್ ಆಚಾರ್ಯ ಕೊಂಡಾಡಿ ಉಪಸ್ಥಿತರಿದ್ದರು. ಸಂಚಿಕೆಯ ಕುರಿತ ವಿಡಿಯೋ ನೋಡಲು ಈ ಕೆಳಗಿನ ಫೇಸ್ಬುಕ್ ಲಿಂಕ್ […]
ಉಡುಪಿ:ಶೈಕ್ಷಣಿಕ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಯಡಿ ಎನ್.ಐ.ಎಸ್ ತರಬೇತಿ ಪಡೆಯುತ್ತಿರುವ ಪರಿಶಿಷ್ಟ ಜಾತಿಗೆ ಸೇರಿದ ವಿದ್ಯಾರ್ಥಿಗಳ ಶೈಕ್ಷಣಿಕ ಶುಲ್ಕ ಮರುಪಾವತಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿಯ ಅರ್ಹ ವಿದ್ಯಾರ್ಥಿಗಳು ಪ್ರಸ್ತಾವನೆಯನ್ನು ಸಲ್ಲಿಸಲು ಜನವರಿ 31 ಕೊನೆಯ ದಿನವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದೂ.ಸಂ: 0820-2521324/9845432303 ಅನ್ನು ಸಂಪರ್ಕಿಸುವಂತೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿ ಪ್ರಕಟಣೆ ತಿಳಿಸಿದೆ.
ಉಡುಪಿ:ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಜಂಟಿ ಆಶ್ರಯದಲ್ಲಿ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಜನವರಿ 19 ಮತ್ತು 20 ರಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜ. 19 ರಂದು ಬೆಳಗ್ಗೆ 10 ಗಂಟೆಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ […]