ವ್ಯಕ್ತಿಯ ಸರ್ವಾಂಗೀಣ ಆರೋಗ್ಯಕ್ಕಾಗಿ ಪ್ರತಿನಿತ್ಯ ಯೋಗಾಭ್ಯಾಸ ಉತ್ತಮ: ಯಶ್‌ಪಾಲ್ ಸುವರ್ಣ

ಉಡುಪಿ: ಯೋಗ ಮನುಷ್ಯನ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಉತ್ತಮ ಸಾಧನವಾಗಿದ್ದು, ಪ್ರತಿಯೊಬ್ಬರೂ ತಮ್ಮ ದೈನಂದಿನ ಜೀವನದಲ್ಲಿ ಯೋಗಾಭ್ಯಾಸವನ್ನು ಮಾಡಬೇಕೆಂದು ಶಾಸಕ ಯಶ್‌ಪಾಲ್ ಸುವರ್ಣ ಕರೆ ನೀಡಿದರು. ಅವರು ಬುಧವಾರದಂದು ನಗರದ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ, ಆಯುಷ್ ಇಲಾಖೆ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆಯುಷ್ ಇಲಾಖೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ, ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಅಜ್ಜರಕಾಡು […]

ಅನ್ನಭಾಗ್ಯ ಅಕ್ಕಿ ರಾಜಕೀಯ; ಕೇಂದ್ರವನ್ನು ಒತ್ತಾಯಿಸುತ್ತಿರುವ ರಾಜ್ಯ ಸರ್ಕಾರಕ್ಕೆ ಪ್ರಶ್ನೆಗಳ ಸುರಿಮಳೆಗೈದ ಮಹೇಶ್ ಠಾಕೂರ್

ಉಡುಪಿ: ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ 10 ಕೆ.ಜಿ. ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಬೊಗಳೆ ಬಿಟ್ಟಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕಾಂಗ್ರೆಸ್ ಮುಖಂಡರು ತಾವು ಘೋಷಿಸಿದ 5 ಗ್ಯಾರಂಟಿಗಳನ್ನು ಜಾರಿಗೊಳಿಸಲು ವಿಫಲಗೊಂಡು, ಇದೀಗ ಅಕ್ಕಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವನ್ನು ಒತ್ತಾಯಿಸಲು ನಾಚಿಕೆಯಾಗುವುದಿಲ್ಲವೆ? ಎಂದು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಮುಖಂಡರು ಉಚಿತ 10 ಕೆ.ಜಿ. […]

ಕೇಂದ್ರ ಸರಕಾರದ 5 ಕೆ.ಜಿ ಜೊತೆಗೆ ಗ್ಯಾರಂಟಿಯ 10 ಕೆ.ಜಿ. ಅಕ್ಕಿ ವಿತರಿಸಿ ಕಾಂಗ್ರೆಸ್ ಪೌರುಷ ತೋರಿಸಲಿ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಚುನಾವಣೆಯ ಸಂದರ್ಭದಲ್ಲಿ ಪೂರ್ವಾಪರ ಆಲೋಚಿಸದೆ ಬೇಕಾಬಿಟ್ಟಿಯಾಗಿ 5 ಉಚಿತ ಗ್ಯಾರಂಟಿಗಳನ್ನು ಘೋಷಿಸಿ, ತಮ್ಮ ವಾಗ್ದಾನದಂತೆ 24 ಗಂಟೆಗಳಲ್ಲಿ ಜಾರಿಗೊಳಿಸದೆ ರಾಜ್ಯದ ಜನತೆಯನ್ನು ಯಾಮಾರಿಸಿರುವ ಕಾಂಗ್ರೆಸ್ ಇದೀಗ ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸುವ ಪ್ರಯತ್ನದ ಬದಲು ಕೇಂದ್ರ ಸರಕಾರ ರಾಜ್ಯಕ್ಕೆ ನೀಡುತ್ತಿರುವ ಉಚಿತ 5 ಕೆ.ಜಿ. ಅಕ್ಕಿಯನ್ನು ಹೊರತುಪಡಿಸಿ, ತಮ್ಮ ಗ್ಯಾರಂಟಿಯ 10 ಕೆ.ಜಿ. ಅಕ್ಕಿಯನ್ನು ಖರೀದಿಸಿ ಪ್ರತ್ಯೇಕವಾಗಿ ವಿತರಿಸಿ ಪೌರುಷ ತೋರಿಸಲಿ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ರಾಷ್ಟ್ರೀಯ […]

ಮಂಗಳೂರು: ಅನ್ನಭಾಗ್ಯಕ್ಕೆ ಅಕ್ಕಿ ನಿರಾಕರಣೆ ಆರೋಪಿಸಿ ಮಂಗಳೂರಿನಲ್ಲಿ ಅನ್ನದ ತಟ್ಟೆ ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಮಂಗಳೂರು: ಮಂಗಳವಾರ ಮಂಗಳೂರಿನ ಮಿನಿ ವಿಧಾನಸೌಧದ ಎದುರು ‘10 ಕೆಜಿ ಉಚಿತ ಅಕ್ಕಿ’ ಅನ್ನಭಾಗ್ಯ ಯೋಜನೆಗಾಗಿ ಕರ್ನಾಟಕಕ್ಕೆ ಅಕ್ಕಿ ನಿರಾಕರಿಸುತ್ತಿರುವ ಕೇಂದ್ರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಅಕ್ಕಿ ತಟ್ಟೆ ಹಿಡಿದು ಪ್ರತಿಭಟನೆ ನಡೆಸಿದರು. ಭಾರತೀಯ ಆಹಾರ ನಿಗಮವು (ಎಫ್‌ಸಿಐ) ಬಿಪಿಎಲ್ ಕಾರ್ಡ್‌ದಾರರಿಗೆ 10 ಕೆಜಿ ಉಚಿತ ಅಕ್ಕಿಯನ್ನು ಪೂರೈಸುವ ತನ್ನ ಪ್ರಮುಖ ಕಾರ್ಯಕ್ರಮಕ್ಕೆ ಹೆಚ್ಚುವರಿ ಅಕ್ಕಿಗಾಗಿ ರಾಜ್ಯದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದೆ. ಆದರೆ, ಬಳಿಕ ಕೇಂದ್ರದ ಒತ್ತಡಕ್ಕೆ ಮಣಿದು ಹೆಚ್ಚುವರಿ ಅಕ್ಕಿ ನೀಡಲು ನಿರಾಕರಿಸಿದೆ ಎಂದು ಪ್ರತಿಭಟನಾಕಾರರು […]

ಕಾರ್ಯಕರ್ತರ ಆಶೋತ್ತರಗಳಿಗೆ ಸ್ಪಂದಿಸುವುದು ಪಕ್ಷ ಮುಖಂಡರ ಕರ್ತವ್ಯ: ಗುರ್ಮೆ ಸುರೇಶ್ ಶೆಟ್ಟಿ

ಕಾಪು: ಪಕ್ಷದ ಕಚೇರಿ ದೇವಸ್ಥಾನಕ್ಕೆ ಸಮಾನ, ಇಲ್ಲಿಗೆ ಬರುವ ಪ್ರತಿಯೊಬ್ಬ ಕಾರ್ಯಕರ್ತನ ಆಶೋತ್ತರಗಳಿಗೂ ಸ್ಪಂದಿಸುವುದು ಜನಪ್ರತಿನಿಧಿಗಳು, ಪಕ್ಷದ ಮುಖಂಡರ ಕರ್ತವ್ಯವಾಗಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಅವರು ಸೋಮವಾರ ಪಟ್ಟಣದ ಮಂಜುಶ್ರೀ ಎನ್‌ಕ್ಲೇವ್‌ಗೆ ಸ್ಥಳಾಂತರಗೊಂಡ ಬಿಜೆಪಿಯ ನೂತನ ಕಾರ್ಯಾಲಯದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದರು. ಪಕ್ಷಕ್ಕೆ ಅದೃಷ್ಟ ತಂದುಕೊಟ್ಟಿರುವ ಚುನಾವಣಾ ಕಚೇರಿಯನ್ನೇ ಪಕ್ಷದ ಅಧಿಕೃತ ಕಚೇರಿಯನ್ನಾಗಿ ಪರಿವರ್ತಿಸಲಾಗಿದೆ. ವಾರಕ್ಕೊಮ್ಮೆ ಇಲ್ಲಿನ ಕಚೇರಿಯಲ್ಲಿದ್ದು ಕಾರ್ಯಕರ್ತರ ಅಹವಾಲು ಸ್ವೀಕಾರ ಮಾಡುವುದಾಗಿ ಭರವಸೆ ನೀಡಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ […]