ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳ ಕಳವುಗೈದ ಆರೋಪಿಗೆ ಜೈಲು ಶಿಕ್ಷೆ

ಉಡುಪಿ: ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿದ ಆರೋಪಿಗೆ ನಗರದ ಪ್ರಧಾನ ಸಿ.ಜೆ ಮತ್ತು ಸಿ.ಜೆ.ಎಮ್. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ. 2022 ಅಕ್ಟೋಬರ್ 30 ರಂದು ಬೆಳಗ್ಗೆ ಪ್ರಕಾಶ್ ಎಂಬಾತನು ಬಡಗುಬೆಟ್ಟು ಗ್ರಾಮದ ಬೈಲೂರು ಶ್ರೀ ನೀಲಕಂಠ ಬಬ್ಬುಸ್ವಾಮಿ ದೈವಸ್ಥಾನದ ಕಾಣಿಕೆ ಡಬ್ಬಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ […]

ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಹೊಚ್ಚ ಹೊಸ ಝೂಮ್ ದ್ವಿಚಕ್ರ ವಾಹನ ರಿಯಾಯತಿ ದರದಲ್ಲಿ ಲಭ್ಯ

ಉಡುಪಿ: ಇಲ್ಲಿನ ಕರಾವಳಿ ಜಂಕ್ಷನ್ ಬಳಿ ಇರುವ ಹೀರೋ ಶಕ್ತಿ ಮೋಟಾರ್ಸ್ ನಲ್ಲಿ ಪುರುಷರು ಹಾಗೂ ಮಹಿಳೆಯರಿಬ್ಬರಿಗೂ ಉಪಯೋಗವಾಗುವ ಝೂಮ್ ದ್ವಿಚಕ್ರ ವಾಹನಗಳು ಪ್ರಮುಖ ಆಕರ್ಷಣೆಯ ಕೇಂದ್ರವಾಗಿದೆ. ಈ ಝೂಮ್ ದ್ವಿಚಕ್ರ ವಾಹನಗಳು ಅತ್ಯಂತ ರಿಯಾಯತಿ ದರದಲ್ಲಿ ಲಭ್ಯವಿದೆ. ಹೊಸದಾಗಿ ಲಾಂಚ್ ಆಗಿರುವ 110cc ಎಂಜಿನ್ ಸಾಮರ್ಥ್ಯ ಹೊಂದಿರುವ ದ್ವಿಚಕ್ರ ವಾಹನಗಳು ಬ್ಲೂಟೂಥ್, ಮೊಬೈಲ್ ಚಾರ್ಜರ್, ಯು.ಎಸ್.ಬಿ, ಎಲ್.ಇ.ಡಿ ಲೈಟ್, ಡಿಸ್ಕ್ ಬ್ರೇಕ್ ಗಳನ್ನು ಒಳಗೊಂಡಿದೆ. zx, lx, vx ಮೂರು ವೇರಿಯಂಟ್ ಗಳಲ್ಲಿ ವಾಹನಗಳು ಲಭ್ಯವಿದೆ […]

ವಚನಭ್ರಷ್ಟ ಕಾಂಗ್ರೆಸ್ ಸರಕಾರದ ಸುಳ್ಳು ಗ್ಯಾರಂಟಿ ವಿರುದ್ದ ತಾಳ್ಮೆ ಕಳೆದುಕೊಂಡ ಜನತೆ ಬೀದಿಗಿಳಿಯುವ ದಿನ ದೂರವಿಲ್ಲ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಅಭಿವೃದ್ಧಿಯ ವಿಚಾರದಲ್ಲಿ ಬಿಜೆಪಿಯನ್ನು ಎದುರಿಸಲು ಸಾಧ್ಯವಿಲ್ಲ ಎಂಬುದನ್ನು ಅರಿತಿರುವ ಕಾಂಗ್ರೆಸ್ 5 ಉಚಿತ ಗ್ಯಾರಂಟಿಗಳ ಆಮಿಷವೊಡ್ಡಿ ಚುನಾವಣೆಯನ್ನು ಗೆದ್ದರೂ, ಈ 5 ಗ್ಯಾರಂಟಿಗಳನ್ನು ಯಥಾವತ್ತಾಗಿ ಜಾರಿಗೊಳಿಸದೆ ರಾಜ್ಯದ ಜನತೆಗೆ ಮೋಸ ಎಸಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸರಕಾರದ 5 ಗ್ಯಾರಂಟಿ ಯೋಜನೆ ಜಾರಿ ಬಳಿಕ ಬಿಜೆಪಿ ಜನರಲ್ಲಿ ಗೊಂದಲ ಮೂಡಿಸುತ್ತಿದೆ ಎಂಬ ಕೆಪಿಸಿಸಿ ವಕ್ತಾರೆ ವೆರೋನಿಕಾ ಕರ್ನೆಲಿಯೋ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಅವರು, ಚುನಾವಣಾ ಪೂರ್ವದಲ್ಲಿ ಬೇಕಾಬಿಟ್ಟಿ […]

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಆಹಾರ ಸುರಕ್ಷತಾ ದಿನ ಆಚರಣೆ

ಬ್ರಹ್ಮಾವರ: ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ಆಹಾರ ತಂತ್ರಜ್ಞಾನ ವಿಭಾಗದ ವತಿಯಿಂದ ವಿಶ್ವ ಆಹಾರ ಸುರಕ್ಷತಾ ದಿನದ ಆಚರಣೆ ಅಂಗವಾಗಿ ಕಲುಷಿತ ಆಹಾರ ಸೇವನೆಯಿಂದ ಉಂಟಾಗುವ ಅಪಾಯಗಳನ್ನು ತಡೆಗಟ್ಟಲು ಮತ್ತು ಆಹಾರದ ಸುರಕ್ಷತೆಯ ಬಗ್ಗೆ ಪ್ರತಿಯೊಬ್ಬರಿಗೂ ತಿಳಿಸಲು ವಿಶ್ವ ಆಹಾರ ಸುರಕ್ಷತಾ ದಿನವನ್ನು ಆಚರಿಸಲಾಯಿತು. ಪ್ರತಿ ವರ್ಷ ಜೂನ್ 7 ರಂದು ವಿಶ್ವ ಆಹಾರ ಸುರಕ್ಷತಾ ದಿನವೆಂದು ವಿಶ್ವ ಆರೋಗ್ಯ ಸಂಸ್ಥೆಯು ಆಚರಿಸುತ್ತದೆ. ಇದರ ಮುಖ್ಯ ಉದ್ದೇಶ ಆಹಾರ ಸುರಕ್ಷತೆ ಬಗ್ಗೆ ಪ್ರತಿಯೊಬ್ಬರಲ್ಲೂ ಅರಿವು ಮೂಡಿಸುವುದಾಗಿದೆ. ಆಹಾರ […]

ಮಲ್ಪೆ: ಕಡಲ್ಕೊರೆತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ ಯಶ್ ಪಾಲ್ ಸುವರ್ಣ

ಮಲ್ಪೆ: ಇಲ್ಲಿನ ಶಾಸಕಯಶ್ ಪಾಲ್ ಸುವರ್ಣ ಅವರು ಗುರುವಾರದಂದು ಕಡೆಕಾರ್ ಮತ್ತು ಅಂಬಲಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಪಡುಕೆರೆ ಭಾಗಕ್ಕೆ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸಂಭಾವ್ಯ ಕಡಲ್ಕೊರೆತ ಪ್ರದೇಶಗಳನ್ನು ಗುರುತಿಸಿ ಕಡಲ್ಕೊರೆತ ತಡೆಗೆ ಪೂರಕ ಕಾಮಗಾರಿಗಳ ಬಗ್ಗೆ ಕ್ರಮ ಕೈಗೊಳ್ಳುವಂತೆ ಬಂದರು ಮತ್ತು ಮೀನುಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಕುತ್ಪಾಡಿ ಪಡುಕರೆಯಲ್ಲಿ ನಿರ್ಮಾಣಗೊಂಡಿರುವ ನೂತನ ಕೊಠಡಿಗೆ ಅಂಗನವಾಡಿಯನ್ನು ಸ್ಥಳಾಂತರಿಸುವಂತೆ ಅಧಿಕಾರಿಗಳಿಗೆ ತಿಳಿಸಿದ ಅವರು, ಮಲ್ಪೆ ಪಡುಕರೆಯ ನದಿದಂಡೆ ಸಂರಕ್ಷಣೆ ಕಾಮಗಾರಿಯ ಪರಿಶೀಲನೆ […]