ಕರಾವಳಿಯಲ್ಲಿ ಯಾವುದೇ ಬೆಲೆ ತೆತ್ತಾದರೂ ಕೋಮು ಸೌಹಾರ್ದತೆ ಉಳಿಸಲು ಕ್ರಮ: ಜಿ. ಪರಮೇಶ್ವರ್

ಉಡುಪಿ: ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮತ್ತು ಕೋಮುವಾದವನ್ನು ಪ್ರಚೋದಿಸುವ ನೈತಿಕ ಪೊಲೀಸ್‌ಗಿರಿಯನ್ನು ಹತ್ತಿಕ್ಕಲು ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ನಮ್ಮ ಸರಕಾರ ಸರ್ವಜನಾಂಗದ ಶಾಂತಿಯ ತೋಟದ ಪರಿಕಲ್ಪನೆಯೊಂದಿಗೆ ಆಡಳಿತ ನಡೆಸಲು ತೀರ್ಮಾನ ಮಾಡಿದೆ. ಆ ಹಿನ್ನೆಲೆಯಲ್ಲಿ ಕರಾವಳಿ ಭಾಗದಲ್ಲಿ ಯಾವುದೇ ಬೆಲೆ ತೆತ್ತಾದರು ಕೋಮು ಸೌಹಾರ್ದತೆ ಉಳಿಸಲು ಮುಂದಾಗಿದ್ದೇವೆ ಎಂದು ರಾಜ್ಯ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು. ಉಡುಪಿ ಎಸ್ಪಿ ಕಚೇರಿಯಲ್ಲಿ ಉನ್ನತ ಮಟ್ಟದ ಪೊಲೀಸ್‌ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ […]

ಉತ್ತಮ ಆರೋಗ್ಯಕರ ಜೀವನದ ಬಗ್ಗೆ ಆನ್ ಲೈನ್ ಮತ್ತು ಫಿಸಿಕಲ್ ಕ್ಲಾಸ್ ಅನ್ನು ನೀಡುತ್ತಿರುವ “ಸುದೀಪ್ತಿ ಸೆಂಟರ್” 2ನೇ ವರ್ಷಕ್ಕೆ ಪಾದಾರ್ಪಣೆ

ಉಡುಪಿ: ಅಂಬಾಗಿಲು ಗುಂಡಿಬೈಲ್ ರಸ್ತೆ, ನಿಟ್ಟೂರು ಪ್ರೈಮರಿ ಶಾಲೆಯ ಹತ್ತಿರ ಇರುವ ‘ಸುದೀಪ್ತಿ ಸೆಂಟರ್’ ನಲ್ಲಿ ಪೌಷ್ಠಿಕ ಸಮತೋಲನವಾದ ಉಪಹಾರ / ಊಟ ಹಾಗೂ ದೇಹದ ತೂಕ ಮತ್ತು ಉತ್ತಮ ಆರೋಗ್ಯಕರ ಜೀವನ ಪದ್ಧತಿಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನೀಡುತ್ತಾ ಬಂದಿದ್ದು, ಇದೀಗ ಸಂಸ್ಥೆಯು ಎರಡನೇ ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಸುದೀಪ್ತಿ ಸೆಂಟರ್ ಕೇಂದ್ರವು ಜನರಿಗೆ ಉತ್ತಮ ಆರೋಗ್ಯಕರ ಜೀವನದ ಬಗ್ಗೆ ಆನ್ ಲೈನ್ ಮತ್ತು ಫಿಸಿಕಲ್ ಕ್ಲಾಸಸ್ ಸೌಲಭ್ಯ ಕಲ್ಪಿಸಿದ್ದು, ಪೌಷ್ಠಿಕ ಆಹಾರ ಕೋಚಿಂಗ್ ಕ್ಲಾಸ್ ನಲ್ಲಿ […]

ಕಾರ್ಕಳ: ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆ

ಕಾರ್ಕಳ : ಕ್ರೈಸ್ಟ್‌ಕಿಂಗ್ ಶಿಕ್ಷಣ ಸಂಸ್ಥೆಯಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸೋಮವಾರದಂದು ಆಚರಿಸಲಾಯಿತು. ಉಡುಪಿ ಅರಣ್ಯ ಸಂಚಾರಿದಳದ ವಲಯ ಅರಣ್ಯಾಧಿಕಾರಿ ಚಿದಾನಂದಪ್ಪ ಜಿ. ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ, ಇಂದು ಪ್ರಕೃತಿ ವಿನಾಶದ ಅಂಚಿನೆಡೆಗೆ ಸಾಗುತ್ತಿದೆ. ಪ್ರಕೃತಿಗೆ ಪ್ರತಿಯೊಂದು ಗಿಡವೂ ಅತ್ಯಗತ್ಯ. ಪ್ರತಿಯೊಬ್ಬರೂ ಕನಿಷ್ಠ ಎರಡು ಗಿಡಗಳನ್ನಾದರೂ ನೆಟ್ಟು ಪ್ರಕೃತಿಯನ್ನು ಸಂರಕ್ಷಿಸಬೇಕು ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಮೇರಿಯನ್ ಡಿಸೋಜ ಮಾತನಾಡಿ, ಹಿಂದೆ ನಮ್ಮ ಪ್ರಕೃತಿಯು ಬಹಳ ಸುಂದರವಾಗಿತ್ತು. ಆದರೆ […]

ಪರಿಶಿಷ್ಟ ಜಾತಿಯ ಕಾನೂನು ಪದವೀಧರರ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪರಿಶಿಷ್ಟ ಜಾತಿಯ ಕಾನೂನು ಪದವೀಧರರು ಹಿರಿಯ ವಕೀಲರ ಬಳಿ ತರಬೇತಿ ಪಡೆಯುವ ಅವಧಿಯಲ್ಲಿ ಶಿಷ್ಯವೇತನ ಸೌಲಭ್ಯ ಪಡೆಯಲು ಇಲಾಖಾ ವೆಬ್‌ಸೈಟ್ www.sw.kar.nic.inನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜುಲೈ 15 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯನ್ನು […]

ಮಳೆಗಾಲದ ತುರ್ತು ಸಂದರ್ಭಕ್ಕಾಗಿ ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆಗಳು ಇಂತಿವೆ

ಉಡುಪಿ: ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ವಿಪತ್ತು ನಿರ್ವಹಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳ ಕಚೇರಿ, ತಾಲೂಕು ಮಟ್ಟ ಹಾಗೂ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಂಟ್ರೋಲ್ ರೂಂ ಅನ್ನು ಸ್ಥಾಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ. ಉಡುಪಿ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2520417, ಬ್ರಹ್ಮಾವರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2560494, ಕಾಪು ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 0820-2551444, ಕುಂದಾಪುರ ತಹಶೀಲ್ದಾರರ ಕಚೇರಿ ಕಂಟ್ರೋಲ್ ರೂಂ ನಂ: 08254-230357, ಬೈಂದೂರು ತಹಶೀಲ್ದಾರರ ಕಚೇರಿ ಕಂಟ್ರೋಲ್ […]