ಸವಿತಾ ಸಮಾಜ ಅಭಿವೃದ್ಧಿ ನಿಗಮದಿಂದ ಸಾಲ ಸೌಲಭ್ಯ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಸವಿತಾ ಸಮಾಜ ಅಭಿವೃದ್ಧಿ ನಿಗಮ ನಿ. ವತಿಯಿಂದ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸಲಾದ ಸ್ವಯಂ ಉದ್ಯೋಗ ಸಾಲ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ ಹಾಗೂ ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಾಂಗಕ್ಕೆ ಸಾಲ ಯೋಜನೆಯ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳ ಸವಿತಾ ಮತ್ತು ಅದರ ಉಪಜಾತಿಗಳಿಗೆ ಸೇರಿದ ಅರ್ಹ ಫಲಾಪೇಕ್ಷಿಗಳಿಂದ ಸೇವಾಸಿಂಧು ಪೋರ್ಟಲ್ http://sevasindhu.karnataka.gov.inಮುಖಾಂತರ ಗ್ರಾಮ-ಒನ್, ಬೆಂಗಳೂರು-ಒನ್ ಹಾಗೂ ಕರ್ನಾಟಕ-ಒನ್ ಸೇವಾ ಕೇಂದ್ರಗಳಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 01 […]

ಶಾಸಕ ಸುನಿಲ್ ಕುಮಾರ್ ವಿರುದ್ಧ ಆಕ್ಷೇಪಾರ್ಹ ಪೋಸ್ಟ್: ಕಾಂಗ್ರೆಸ್ ಕಾರ್ಯಕರ್ತ ವಶಕ್ಕೆ

ಉಡುಪಿ: ಬಿಜೆಪಿ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪಾರ್ಹ ಹಾಗೂ ಪ್ರಚೋದನಕಾರಿ ಪೋಸ್ಟ್‌ ಹಾಕಿದ ಆರೋಪದ ಮೇರೆಗೆ ಕಾಂಗ್ರೆಸ್ ಕಾರ್ಯಕರ್ತ ಪ್ರಸಾದ್ ಶೆಟ್ಟಿ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ಒಳಪಡಿಸಿದ್ದಾರೆ‌. ಶಾಸಕರಿಗೆ ಜೀವ ಬೆದರಿಕೆ ಒಡ್ಡುವ ರೀತಿಯಲ್ಲಿ ಹಾಗೂ ‘ತಲೆ ಬೇಕು’ ಎಂಬ ಅರ್ಥ ಬರುವಂತೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪೋಸ್ಟ್‌ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಸಾರ್ವಜನಿಕ […]

ಉಡುಪಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯಲ್ಲಿ ಬೆಂಕಿ: ರಸ್ತೆ ಮಧ್ಯೆಯೇ ಸ್ಕೂಟಿ ನಿಲ್ಲಿಸಿ ಅಪಾಯದಿಂದ ಪಾರಾದ ಸವಾರ!

ಉಡುಪಿ: ಚಲಿಸುತ್ತಿದ್ದ ಎಲೆಕ್ಟ್ರಿಕ್ ಸ್ಕೂಟಿಯೊಂದರಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದ ಘಟನೆ ಉಡುಪಿಯಲ್ಲಿ ನಡೆದಿದೆ. ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಗೊಂಡ ಸವಾರ ರಸ್ತೆ ಮಧ್ಯೆಯೇ ಸ್ಕೂಟಿಯನ್ನು ನಿಲ್ಲಿಸಿ ತಕ್ಷಣ ದೂರ ಓಡಿ ಹೋಗಿದ್ದಾನೆ. ಇದರಿಂದ ಸವಾರ ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾನೆ. ಬಳಿಕ ಸ್ಥಳೀಯರು ನೀರು ಸುರಿದು ಬೆಂಕಿಯನ್ನು ನಂದಿಸಿದ್ದಾರೆ. ಸ್ಕೂಟಿಗೆ ಬೆಂಕಿ ಕಾಣಿಸಿಕೊಳ್ಳಲು ನಿಖರ ಕಾರಣ ತಿಳಿದುಬಂದಿಲ್ಲ.

ಸೆ.16 ರಂದು ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭರತ್ ಪ್ರೆಸ್ ಎದುರುಗಡೆಯ ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ಸೆಪ್ಟಂಬರ್ 16 ರಂದು ಬೆಳಗ್ಗೆ 10.30 ಕ್ಕೆ ನೇರ ಸಂದರ್ಶನ ನಡೆಯಲಿದೆ. ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, […]

‘ಮನುಸ್ಮೃತಿ ಮನಸ್ಥಿತಿಯಿಂದ ಸಂವಿಧಾನಕ್ಕೆ ಅಪಮಾನ’: ಸೊರಕೆ

ಉಡುಪಿ: ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಿಸಿರುವುದು ಬಿಜೆಪಿಯ ಮನುಸ್ಮೃತಿ ಮನಸ್ಥಿತಿಗೆ ಸಾಕ್ಷಿ. ದಲಿತರ ಮೂಲಕ ಅಂಬೇಡ್ಕರ್ ಅವರ ಸಂವಿಧಾನಕ್ಕೆ ಅಪಮಾನ ಮಾಡುವ ಕೆಲಸ ನಡೆಯುತ್ತಿದೆ ಎಂದು ಮಾಜಿ ಸಚಿವ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯಕುಮಾರ್ ಸೊರಕೆ ಆರೋಪಿಸಿದರು. ಖರ್ಗೆ ಭಾಷಣ ಮಾಡಿದ ಸ್ಥಳ ಶುದ್ಧೀಕರಣ ಖಂಡಿಸಿ ಕೆಪಿಸಿಸಿ ಪ್ರಚಾರ ಸಮಿತಿ ವತಿಯಿಂದ ಶನಿವಾರ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ನಡೆದ ಧರಣಿ ಸತ್ಯಾಗ್ರಹದಲ್ಲಿ ಅವರು ಮಾತನಾಡಿದರು. ಸಮಾಜದಲ್ಲಿನ ಅಸಮಾನತೆ, ಮೇಲು-ಕೀಳು […]