ಕಾರ್ಕಳ ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ, ಕಾರ್ಕಳ ಶಾಸಕ ನೇರ ಹೊಣೆ: ಮುನಿಯಾಲು ಉದಯ ಕುಮಾರ್ ಶೆಟ್ಟಿ

ಕಾರ್ಕಳ: ಕಾರ್ಕಳದ ಪರಶುರಾಮ ಥೀಮ್ ಪಾರ್ಕಿನಲ್ಲಿ ಎರಡನೆಯ ಬಾರಿ ಕಳ್ಳತನ ನಡೆದಿದೆ. ಪರಶುರಾಮ ಪ್ರತಿಮೆಯ ಸೊಂಟದ ಮೇಲ್ಬಾಗದ ಕಳ್ಳತನವೇ ಉಳಿದ ಬಿಡಿಭಾಗಗಳ ಕಳ್ಳತನಕ್ಕೆ ಪ್ರೇರಣೆ. ಈ ದುಸ್ಥಿತಿಗೆ ಶಾಸಕ ಸುನೀಲ್ ಕುಮಾರ್ ನೇರ ಹೊಣೆ ಎಂದು ಕಾರ್ಕಳ ಕಾಂಗ್ರೆಸ್ ನಾಯಕ ಮುನಿಯಾಲು ಉದಯ ಕುಮಾರ ಶೆಟ್ಟಿ ತಿಳಿಸಿದ್ದಾರೆ. ಮೊದಲನೇ ಬಾರಿ ಕಳ್ಳತನ ನಡೆದಿದ್ದು:ಕಂಚಿನ ಬದಲು ಪರಶುರಾಮರ ಪೈಬರ್ ಮಿಶ್ರಿತ ನಕಲಿ ಪ್ರತಿಮೆ ನಿರ್ಮಿಸಿ ಅದರಲ್ಲಿಯೂ ಪ್ರತಿಮೆಯ ಸೊಂಟದ ಮೇಲಿನ ಭಾಗವನ್ನು ಸುನೀಲ್ ಕುಮಾರ್ ನಿರ್ದೇಶನದಂತೆ ಕಳ್ಳತನ ನಡೆಸಲಾಗಿತ್ತು. […]
ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ

ಉಡುಪಿ:ಗ್ರಾಫಿಕ್ ಡಿಸೈನರ್ ಹುದ್ದೆಗೆ ನೇಮಕಾತಿ ನಡೆಯಲಿದೆ. ಅರ್ಹತೆಗಳು: ▪️ ಈ ಕೆಲಸದಲ್ಲಿ ಎರಡು ವರ್ಷಕ್ಕಿಂತ ಹೆಚ್ಚಿನ ಅನುಭವವಿರಬೇಕು. ▪️ ವಿಶ್ವಾಸಾರ್ಹ ಮತ್ತು ವೃತ್ತಿಪರರಾಗಿರಬೇಕು. ▪️ ಟೀಮ್ ಪ್ಲೇಯರ್ ಆಗಿರಬೇಕು. ನಿಮ್ಮ ರೆಸ್ಯೂಮ್ ಅನ್ನು ಕೆಳಗಿನ ಮೇಲ್ ಐಡಿಗೆ ಕಳುಹಿಸಿ. [email protected]
ಉಡುಪಿ:ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ

ಉಡುಪಿ:ಬ್ರಹ್ಮಾವರ ಹಾಗೂ ಕುಂದಾಪುರದ ಜನನಿ ಎಂಟರ್ಪ್ರೈಸಸ್ ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಹುದ್ದೆಗಳು :🔹 ಸರ್ವಿಸ್ ಟೆಕ್ನಿಷಿಯನ್🔹 ಡ್ರೈವರ್🔹 ಡೆಲಿವರಿ ಎಕ್ಸಿಕ್ಯೂಟಿವ್🔹 ಸೇಲ್ಸ್ ಎಕ್ಸಿಕ್ಯೂಟಿವ್🔹 ಬ್ರಾಂಡ್ ಪ್ರಮೋಟರ್ ಮಾಹಿತಿಗಾಗಿ ಸಂಪರ್ಕಿಸಿ :8197 070262
ಕಾರ್ಕಳ ಪರಶುರಾಮ ಥೀಮ್ ಪಾರ್ಕ್ನಲ್ಲಿ ತಾಮ್ರದ ಹೊದಿಕೆಗಳನ್ನು ಕದ್ದೊಯ್ದ ಕಳ್ಳರು!

ಕಾಂಗ್ರೆಸ್ ದ್ವೇಷ ರಾಜಕಾರಣಕ್ಕೆ ಥೀಮ್ ಪಾರ್ಕ್ ಬಲಿ-ಸುನಿಲ್ ಕುಮಾರ್ ಆರೋಪಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳದಲ್ಲಿರುವ ವಿವಾದಿತ ಪರಶುರಾಮ ಥೀಮ್ ಪಾರ್ಕ್ನಲ್ಲಿ ಮೇಲ್ಛಾವಣಿಗೆ ಹಾಕಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳನ್ನು ಕಳ್ಳತನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ.ಬಿಜೆಪಿ-ಕಾಂಗ್ರೆಸ್ ನಡುವಿನ ರಾಜಕೀಯ ಕೆಸರೆರಚಾಟದ ಕೇಂದ್ರವಾಗಿದ್ದ ಥೀಮ್ ಪಾರ್ಕ್ ಯೋಜನೆ ನಿರ್ವಹಣೆಯಿಲ್ಲದೆ ನೆನೆಗುದಿಗೆ ಬಿದ್ದಿತ್ತು. ಇದೀಗ ಬಾಗಿಲು ಮುರಿದು ಒಳನುಗ್ಗಿರುವ ಕಳ್ಳರು, ಪಾರ್ಕ್ನ ಮೇಲ್ಚಾವಣಿಗೆ ಅಳವಡಿಸಲಾಗಿದ್ದ ಬೆಲೆಬಾಳುವ ತಾಮ್ರದ ಹೊದಿಕೆಗಳನ್ನು ಹೊತ್ತೊಯ್ದಿದ್ದಾರೆ. ಪಾಳುಬಿದ್ದಿರುವ ಈ ಪ್ರದೇಶದಲ್ಲಿ ಭದ್ರತೆಯ ವೈಫಲ್ಯದಿಂದಾಗಿ ಈ ಘಟನೆ ಸಂಭವಿಸಿದೆ […]
ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಇಂದಿರಾ ಶೇಖರ್ ಕಲ್ಮಾಡಿ ನಿಧನ

ಉಡುಪಿ: ನಗರಸಭಾ ವ್ಯಾಪ್ತಿಯ ಕಲ್ಮಾಡಿ ವಾರ್ಡ್ನಲ್ಲಿ ಬಿಜೆಪಿಯ ಮೊದಲ ನಗರಸಭಾ ಸದಸ್ಯೆಯಾಗಿ, ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆಯಾಗಿದ್ದ ಕಲ್ಮಾಡಿಯ ಇಂದಿರಾ ಶೇಖರ್ ಅವರು ನಿಧನರಾಗಿದ್ದಾರೆ.ಇಂದಿರಾ ಶೇಖರ್ ಅವರು ಸದಾ ಸಮಾಜ ಸೇವಾ ಚಟುವಟಿಕೆಗಳಲ್ಲಿ ನಿರತರಾಗಿ, ಜನಾನುರಾಗಿಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದರು. ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಇಂದಿರಾ ಶೇಖರ್ ಅವರು ಪಕ್ಷ ಸಂಘಟನೆಗೆ ನೀಡಿದ ಕೊಡುಗೆ ಮಹತ್ವಪೂರ್ಣ. ಅವರ ನಿಧನ ಪಕ್ಷಕ್ಕೆ ತುಂಬಲಾರದ ನಷ್ಟವೆನಿಸಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ […]