ಕಾರ್ಕಳ: ಆಶ್ರಯ ಮನೆ ವಿತರಣೆ ವಿಳಂಬ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಕಾರ್ಕಳ ತಾಲೂಕಿನ ಪುರಸಭಾ ವ್ಯಾಪ್ತಿಯ ಮನೆ ರಹಿತರಿಗೆ ಸರ್ಕಾರದ ಯೋಜನೆಯಡಿ ನಿರ್ಮಿಸಲಾಗುತ್ತಿರುವ ಆಶ್ರಯ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ವಿತರಿಸುವಲ್ಲಿ ಶಾಸಕ ವಿ. ಸುನಿಲ್ ಕುಮಾರ್ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ವತಿಯಿಂದ ಶನಿವಾರ ಪ್ರತಿಭಟನೆ ನಡೆಯಿತು. ಬ್ಲಾಕ್ ಕಾಂಗ್ರೆಸ್ ಸಮಿತಿ ಹಾಗೂ ನಗರ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಕಾಂಗ್ರೆಸ್ ಮುಖಂಡ ಮುನಿಯಾಲು ಉದಯ ಶೆಟ್ಟಿ ಅವರ ನೇತೃತ್ವದಲ್ಲಿ ಪತ್ತೊಂಜಿಕಟ್ಟೆಯ ಗುಂಪು ನಿವೇಶನದ ಮುಂಭಾಗ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮುನಿಯಾಲು ಉದಯ ಶೆಟ್ಟಿ […]
ಗಣೇಶೋತ್ಸವಕ್ಕೆ ಸಿದ್ಧವಾಯ್ತು ‘ಕಪ್ಪು ಕಬ್ಬು’

ಉಡುಪಿ: ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಇನ್ನಂಜೆ ಗ್ರಾಮದಲ್ಲಿ ಬೆಳೆದಿರುವ ಕಪ್ಪು ಕಬ್ಬು ಕಟಾವಿಗೆ ಸಿದ್ಧವಾಗಿದ್ದು, ಹಬ್ಬದ ಪೂಜಾ ಮಂಟಪಗಳ ಅಲಂಕಾರಕ್ಕೆ ವಿಶೇಷ ಬೇಡಿಕೆ ಪಡೆದುಕೊಂಡಿದೆ. ಇನ್ನಂಜೆಯ ಸುಮಾರು 10 ಮಂದಿ ರೈತರು ನಾಲ್ಕು ಎಕರೆ ಪ್ರದೇಶದಲ್ಲಿ ಕಳೆದ 15 ವರ್ಷಗಳಿಂದ ಗಣೇಶೋತ್ಸವವನ್ನೇ ಗಮನದಲ್ಲಿಟ್ಟುಕೊಂಡು ಕಬ್ಬು ಬೆಳೆಯುತ್ತಿದ್ದಾರೆ. ಏಳು ತಿಂಗಳ ಹಿಂದೆ ನಾಟಿ ಮಾಡಿದ್ದ ಕಬ್ಬು ಇದೀಗ ಕಟಾವಿಗೆ ಸಿದ್ಧವಾಗಿದೆ. ಸ್ಥಳೀಯ ಕೃಷಿಕ ಉದಯ್ ಅವರೂ ಈ ವಿಶೇಷ ಕಬ್ಬು ಕೃಷಿ ನಡೆಸುತ್ತಿದ್ದಾರೆ. ಗಣಪತಿಯ ಕೈಯಲ್ಲೂ […]
ಬೆಳ್ತಂಗಡಿ: ಕಾರು-ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಹಲವರಿಗೆ ಗಾಯ

ಬೆಳ್ತಂಗಡಿ: ಕಾರು ಹಾಗೂ ಕೆಎಸ್ಆರ್ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡ ಘಟನೆ ಶನಿವಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೊಕ್ಕಡ ಸಮೀಪ ನಡೆದಿದೆ. ಧರ್ಮಸ್ಥಳದಿಂದ ಬೆಂಗಳೂರಿನತ್ತ ತೆರಳುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದತ್ತ ಸಾಗುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದೆ. ಡಿಕ್ಕಿಯ ರಭಸಕ್ಕೆ ಕಾರು ಹಾಗೂ ಬಸ್ನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಪ್ರಯಾಣಿಕರು ಸೇರಿದಂತೆ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಾಹಿತಿ ತಿಳಿದು […]
ಮೂಡ್ಲಕಟ್ಟೆ ಎಂ ಐ ಟಿ ಕೆ ಆವರಣದಲ್ಲಿ ಜಾಬ್ಸ್ ಎಕ್ಸ್ಪ್ರೆಸ್ 2026

ಕುಂದಾಪುರ: ಕರಾವಳಿ ಕರ್ನಾಟಕದ ಯುವಜನರಿಗೆ ಉದ್ಯೋಗ ಮತ್ತು ವೃತ್ತಿ ಅವಕಾಶಗಳನ್ನು ಒದಗಿಸುವ ಉದ್ದೇಶದಿಂದ ನಡೆಯುತ್ತಿರುವ ಪ್ರಾದೇಶಿಕ ಪ್ರಮುಖ ಕಾರ್ಯಕ್ರಮವಾದ ಜಾಬ್ಸ್ ಎಕ್ಸ್ಪ್ರೆಸ್ 2026, ಸೆಪ್ಟೆಂಬರ್ 17 ಮತ್ತು 18, 2026ರಂದು ಕುಂದಾಪುರದ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MIT)ಯಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ 35ಕ್ಕೂ ಅಧಿಕ ಪ್ರಮುಖ ಕಂಪನಿಗಳು ಭಾಗವಹಿಸಲಿದ್ದು, 5,000ಕ್ಕೂ ಅಧಿಕ ಉದ್ಯೋಗಾವಕಾಶಗಳನ್ನು ಒದಗಿಸಲಿವೆ. ಇದರ ಮೂಲಕ ಕರಾವಳಿ ಕರ್ನಾಟಕದ ವಿದ್ಯಾರ್ಥಿಗಳು, ಪದವೀಧರರು ಹಾಗೂ ಉದ್ಯೋಗಾಕಾಂಕ್ಷಿಗಳಿಗೆ ನೇರವಾಗಿ ಕಂಪನಿಗಳೊಂದಿಗೆ ಸಂಪರ್ಕ ಸಾಧಿಸಿ ವೃತ್ತಿ ಅವಕಾಶಗಳನ್ನು ಪಡೆಯಲು […]
ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ ಮಂಡಳಿಗೆ ಕರ್ನಾಟಕ ರಾಜ್ಯಪಾಲರಿಂದ ನೇಮಕವಾದ ಸದಸ್ಯರಾದ ಡಾ. ಮುರಳಿಮೋಹನ್ ಚಾಂತಾರು ರೆಡ್ ಕ್ರಾಸ್ ಜಿಲ್ಲಾ ಶಾಖೆಗೆ ಭೇಟಿ ನೀಡಿ ಪರಿಶೀಲಿಸಿದರು. ಜಿಲ್ಲಾ ರೆಡ್ ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಸ್ವಾಗತಿಸಿ ರೆಡ್ ಕ್ರಾಸ್ ಚಟುವಟಿಕೆಗಳ ಬಗ್ಗೆ ವಿವರಿಸಿದರು. ಉಡುಪಿ ಜಿಲ್ಲಾ ರೆಡ್ಕ್ರಾಸ್ ಚಟುವಟಿಕೆ ಹಾಗೂ ರೆಡ್ ಕ್ರಾಸ್ ಪ್ರಾಯೋಜಿತ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯ ಚಟುವಟಿಕೆಗಳು ರಾಜ್ಯದಲ್ಲೆ ಮಾದರಿಯಾಗಿದೆ ಎಂದು ಮೆಚ್ಚುಗೆ ವ್ಯಕ್ತ […]