ಮೊಬೈಲ್ ಪ್ರಿಯಾರಿಗೆ ಬಿಗ್ ಶಾಕ್; 2026ರಲ್ಲಿ ಮೊಬೈಲ್ ರೀಚಾರ್ಜ್’ಗಳು ಮತ್ತಷ್ಟು ದುಬಾರಿ!

ಹೊಸ ವರ್ಷದ ಸಂಭ್ರಮದಲ್ಲಿರೋ ಮೊಬೈಲ್ ಪ್ರಿಯರಿಗೆ ದೊಡ್ಡ ಆಘಾತ ಕಾದಿದೆ. 2026ರಲ್ಲಿ ಮೊಬೈಲ್ ರೀಚಾರ್ಜ್ ಯೋಜನೆಗಳು ಮತ್ತಷ್ಟು ದುಬಾರಿ ಆಗುವ ಸಾಧ್ಯತೆ ಇದೆ. ವರದಿಗಳ ಪ್ರಕಾರ, ರಿಲಯನ್ಸ್ ಜಿಯೋ, ಏರ್ಟೆಲ್, ವೊಡಾಫೋನ್ ಐಡಿಯಾ ತಮ್ಮ ಪ್ರಿಪೇಯ್ಡ್ ಮತ್ತು ಪೋಸ್ಟ್ಪೇಯ್ಡ್ ಯೋಜನೆಗಳ ಬೆಲೆಗಳನ್ನು ಶೇಕಡಾ 20 ರಷ್ಟು ಹೆಚ್ಚಿಸಬಹುದು ಎಂದು ಹೇಳಲಾಗಿದೆ. ಹಲವಾರು ಆಯ್ದ ಯೋಜನೆಗಳಲ್ಲಿನ ಸುಂಕ ಹೆಚ್ಚಳದ ಬಗ್ಗೆ ಕಂಪನಿಯ ಅಧಿಕಾರಿಗಳಿಗೆ ಮಾಹಿತಿ ಸಲ್ಲಿಸಲಾಗಿದೆ. ಟೆಲಿಕಾಂ ಕಂಪನಿಗಳು ಕಳೆದ ಒಂದು ತಿಂಗಳಿನಿಂದ ತಮ್ಮ ಯೋಜನೆಗಳನ್ನು ಪರಿಷ್ಕರಿಸುತ್ತಿವೆ. ಇದು […]
ಉಡುಪಿ: ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಮನವಿ

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಮನವಿ ಸಲ್ಲಿಸಿದರು. ಉಡುಪಿ ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಬಿಲ್ಲಾಡಿ ಅವರಿಗೆ ಸೇರಿದ ಹನೆಹಳ್ಳಿ ಗ್ರಾಮದ ಕೂರಾಡಿ ಸಂಕಮ್ಮ ತಾಯಿ ರೆಸಾರ್ಟ್ನಲ್ಲಿ ಅಕ್ರಮವಾಗಿ ದೇಶದೊಳಗೆ ಬಂದ ವಿದೇಶಿಗರನ್ನು ಸೇರಿಸಿ ಅವರಿಗೆ ಕಾನೂನುಬಾಹಿರವಾಗಿ […]
ಉಡುಪಿ:ಕ್ರಿಸ್ಮಸ್ ಮತ್ತು ಹೊಸ ವರ್ಷದ ಪ್ರಯುಕ್ತ ಡಿ.15 ರಿಂದ ಜ.11ರವರೆಗೆ ಬೃಹತ್ ಮಾರಾಟ ಮೇಳ

ಉಡುಪಿ: ಡಿ.15 ರಿಂದ ಜ.11ರವರೆಗೆ ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂಭ್ರಮಕ್ಕೆ ಸೋಜಾ ಬಳಗದಿಂದ ಬೃಹತ್ ಮಾರಾಟ ಮೇಳವು ಉಡುಪಿಯಲ್ಲಿ ನಡೆಯಲಿದೆ. ಇಲ್ಲಿ ಎಕ್ಸ್ಚೇಂಜ್ ಆಫರ್, ಕಾಂಬೋ ಆಫರ್, ಹಾಗೂ ಎಲ್ಲಾ ಎಲೆಕ್ಟ್ರಾನಿಕ್ಸ್ ಹಾಗೂ ಫರ್ನಿಚರ್ ನ ಪ್ರತಿ ಖರೀದಿಗೆ 50% ರಿಯಾಯಿತಿ ದೊರಕಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:7353750507
ಮಲ್ಪೆ ಕಡಲ ತೀರದಲ್ಲಿ ತೇಲಿಬಂದ ಕೃಷ್ಣನ ವಿಗ್ರಹ: ವಿಡಿಯೋ ವೈರಲ್

ಉಡುಪಿ: ಉಡುಪಿಯ ಮಲ್ಪೆ ಕಡಲ ತೀರದಲ್ಲಿ ಕೃಷ್ಣನ ವಿಗ್ರಹ ತೇಲಿ ಬಂದು ಪವಾಡ ಸಂಭವಿಸಿದೆ ಎಂಬ ವದಂತಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಭಾನುವಾರ ಕೃಷ್ಣಮಠದಲ್ಲಿ ಇಸ್ಕಾನ್ ಸಂಸ್ಥೆಯ ಧಾರ್ಮಿಕ ಕಾರ್ಯಕ್ರಮ ಇದ್ದು, ಸುಮಾರು 18 ಬಸ್ಸುಗಳಲ್ಲಿ ಇಸ್ಕಾನ್ ಅನುಯಾಯಿಗಳು ಸಮುದ್ರ ತೀರಕ್ಕೆ ತೆರಳಿದ್ದರು. ಈ ವೇಳೆ ಕಡಲಲ್ಲಿ ತೇಲಿ ಬಂದ ವಿಗ್ರಹವೊಂದು ಎಲ್ಲರ ಗಮನ ಸೆಳೆಯಿತು. ಅಲ್ಲಿ ಸೇರಿದ್ದ ಸಾವಿರಾರು ಮಂದಿ ಆ ವಿಗ್ರಹವನ್ನು ಮೇಲಕ್ಕೆ ತೆಗೆದು ಸಂಭ್ರಮಿಸಿದರು. ಉಡುಪಿಯ ಕೃಷ್ಣ ದೇವರು ಕೂಡ ಕಡಲಲ್ಲೇ […]
ಮಂಗಳೂರು ವಿವಿ ವ್ಯಾಪ್ತಿಯಲ್ಲಿ ಬಂದ್ ಆಗಲಿದೆ 22 ಖಾಸಗಿ ಕಾಲೇಜುಗಳು!

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಮಾನ್ಯತೆ ಪಡೆದಿದ್ದ 22 ಖಾಸಗಿ ಪದವಿ ಶಿಕ್ಷಣ ಕಾಲೇಜುಗಳು ಸಲ್ಲಿಸಿದ್ದ ಸ್ವಯಂ ಮುಚ್ಚುವ ಪ್ರಸ್ತಾವಗಳಿಗೆ ವಿಶ್ವವಿದ್ಯಾನಿಲಯದ ಶೈಕ್ಷಣಿಕ ಮಂಡಳಿ ಸಭೆಯಲ್ಲಿ ಸೋಮವಾರ ಅನುಮೋದನೆ ನೀಡಲಾಯಿತು. ಸಭೆಯ ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಪಿ.ಎಲ್.ಧರ್ಮ, ‘ಕಾಲೇಜುಗಳನ್ನು ಮುಚ್ಚಲು ಆಡಳಿತ ಮಂಡಳಿಗಳು ನಿರ್ಧರಿಸಿವೆ. ಈಗ ಪ್ರವೇಶ ಪಡೆದು ಬೇರೆ ಬೇರೆ ತರಗತಿಗಳಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗಾಗಿ ಶೈಕ್ಷಣಿಕ ಚಟುವಟಿಕೆ ಮುಂದುವರಿಸಲಿವೆ. ಅಂಕಪಟ್ಟಿ ಪರಿಶೀಲನೆ ಸೇರಿ ವಿದ್ಯಾರ್ಥಿಗಳಿಗೆ ಎಲ್ಲ ಅಗತ್ಯ ಸೇವೆಗಳನ್ನು ಒದಗಿಸಲು ಆಯಾ ಕಾಲೇಜುಗಳಿಗೆ ಸೂಚನೆ ನೀಡಲಾಗಿದೆ‘ ಎಂದರು. […]