ಉಡುಪಿ:ಡಿ.24 ರಂದು ರಾಷ್ಟ್ರೀಯ ಗ್ರಾಹಕ ದಿನಾಚರಣೆ

ಉಡುಪಿ: ಜಿಲ್ಲಾಡಳಿತ, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಮತ್ತು ಬಳಕೆದಾರರ ವೇದಿಕೆ (ರಿ) ಇವರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಗ್ರಾಹಕ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 24 ರಂದು ಬೆಳಗ್ಗೆ 10 ಗಂಟೆಗೆ ನಗರದ ವಾದಿರಾಜ ರಸ್ತೆಯ ವಿದ್ಯೋದಯ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಸಂದೀಪ್ ಕುಮಾರ್ ಅಧ್ಯಕ್ಷತೆವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಂಬಲಪಾಡಿ ಶ್ರೀ ಜನಾರ್ಧನ ಮಹಾಕಾಳಿ ದೇವಸ್ಥಾನದ […]

ಉಡುಪಿ:ಸಾಂಸ್ಕೃತಿಕ ಉತ್ಸವ ಆಯೋಜನೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಜನವರಿ ಎರಡನೇ ವಾರದಲ್ಲಿ ನಗರದಲ್ಲಿ ಸಾಂಸ್ಕೃತಿಕ ಉತ್ಸವ ಆಚರಣೆಗೆ ಅಗತ್ಯವಿರುವ ಎಲ್ಲಾ ರೀತಿಯಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವುದರೊಂದಿಗೆ ವಿಜೃಂಭಣೆಯಿಂದ ಆಚರಿಸಲು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಉಡುಪಿ ಸಾಂಸ್ಕೃತಿಕ ಉತ್ಸವ ಆಯೋಜಿಸುವ ಕುರಿತು ಚರ್ಚಿಸಲು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ನಮ್ಮ ನಾಡಿನ ಕಲೆ, ಸಂಸ್ಕೃತಿ, ಪರಂಪರೆಯನ್ನು ಬಿಂಬಿಸುವಂತಹ ಅದರಲ್ಲೂ ವಿಶೇಷವಾಗಿ ಯುವಜನರು ಈ ಬಗ್ಗೆ ಉತ್ತೇಜಿಸುವರೀತಿಯಲ್ಲಿ ಸಾಂಸ್ಕೃತಿಕ ಉತ್ಸವವನ್ನು ಉಡುಪಿ ನಗರದಲ್ಲಿ […]

ಉಡುಪಿ:ಬೀಡಾಡಿ ಪ್ರಾಣಿಗಳ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ಬೀದಿ ನಾಯಿಗಳು ಹಾಗೂ ಬೀಡಾಡಿ ದನಗಳ ನಿಯಂತ್ರಣಕ್ಕೆ ಹಾಗೂ ಎಲ್ಲಾ ಪ್ರಾಣಿಗಳ ಜನನ ನಿಯಂತ್ರಣಕ್ಕೆ ಈಗಾಗಲೇ ಸವೋಚ್ಛ ನ್ಯಾಯಾಲಯವು ನಿರ್ದೇಶನ ನೀಡಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು. ಬೀಡಾಡಿ ಪ್ರಾಣಿಗಳ ಆಶ್ರಯಕ್ಕೆಅಗತ್ಯವಿರುವ ಆಶ್ರಯ ತಾಣಗಳನ್ನು ಕೂಡಲೇ ಪ್ರಾರಂಭಿಸಬೇಕೆಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯಲ್ಲಿ ಬೀದಿ ನಾಯಿಗಳ ಹಾವಳಿತಡೆಗಟ್ಟುವ ನಿಟ್ಟಿನಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಜಿಲ್ಲೆಯ […]

ಉಡುಪಿ:ಮಕ್ಕಳ ಹಕ್ಕುಗಳ ರಕ್ಷಣೆಗೆ ಸರ್ಕಾರ ಸದಾ ಬದ್ಧ: ಡಾ.ತಿಪ್ಪೇಸ್ವಾಮಿ ಕೆ.ಟಿ

ಉಡುಪಿ: ಮಕ್ಕಳು ಈ ದೇಶದ ಆಸ್ತಿ. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು ಎನ್ನುವ ಮಾತು ದೇಶದಲ್ಲಿ ಪ್ರಚಲಿತವಾಗಿದೆ. ಆದರೆ ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವ ಕಾರ್ಯಕರ್ತರಿಗೆ ಮಕ್ಕಳಿಗೆ ಸಂಬಂಧಿಸಿದ ಮಾಹಿತಿ, ಅವರ ಹಕ್ಕುಗಳು, ರಕ್ಷಣೆ ಮತ್ತು ಕಾಯ್ದೆಗಳ ಬಗ್ಗೆ ಮಾಹಿತಿಯ ಕೊರತೆ ಇದ್ದು ಅದನ್ನು ನೀಗಿಸುವ ನಿಟ್ಟಿನಲ್ಲಿ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಮಕ್ಕಳ ರಕ್ಷಣೆಯ ಕ್ಷೇತ್ರದಲ್ಲಿ ತೊಡಗಿರುವವರು ಮಕ್ಕಳ ಕಾನೂನುಗಳ ಬಗ್ಗೆ ಸ್ಪಷ್ಟ ಮಾಹಿತಿ ಹೊಂದಿದ್ದಾಗ ಮಕ್ಕಳಿಗೆ ಪರಿಣಾಮಕಾರಿಯಾಗಿ ನ್ಯಾಯ ದೊರೆಯುತ್ತದೆ. ಮಕ್ಕಳ ನ್ಯಾಯವನ್ನು ಖಚಿತ ಪಡಿಸುವ […]

ಉಡುಪಿ:ತೆಂಗು ಅಭಿವೃದ್ಧಿ ಮಂಡಳಿ ವತಿಯಿಂದ ಬೃಹತ್ ಕಾರ್ಯಾಗಾರ : ಸಂಸದ ಕೋಟಾ ಶ್ರೀನಿವಾಸ ಪೂಜಾರಿ

ಉಡುಪಿ: ಕೇಂದ್ರ ತೆಂಗು ಅಭಿವೃದ್ಧಿ ಮಂಡಳಿಯ ವತಿಯಿಂದ ಜಿಲ್ಲಾ ತೋಟಗಾರಿಕೆ ಇಲಾಖೆಯ ಸಹಯೋಗದೊಂದಿಗೆತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವು ಜನವರಿ 12 ರಂದು ನಡೆಯಲಿದೆ ಎಂದು ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯಲ್ಲಿ ತೆಂಗು ಅಭಿವೃದ್ಧಿ ಕುರಿತು ಅರಿವುಮೂಡಿಸುವ ಕಾರ್ಯಕ್ರಮ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ತೆಂಗು ಅಭಿವೃದ್ಧಿ ಕುರಿತು ಬೃಹತ್ ಕಾರ್ಯಾಗಾರವನ್ನು ಕುಂದಾಪುರ […]