ಗೂಡ್ಸ್ ಟೆಂಪೋದಲ್ಲಿ ಮಕ್ಕಳ ಅಪಾಯಕಾರಿ ಪ್ರಯಾಣ:

ಉಡುಪಿ: ಕಾಪುವಿನಿಂದ ಉಡುಪಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗೂಡ್ಸ್ ಟೆಂಪೋ ವಾಹನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮಕ್ಕಳನ್ನು ಕರೆದೊಯ್ಯುತ್ತಿರುವ ದೃಶ್ಯ ಕಟಪಾಡಿಯಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಮಕ್ಕಳನ್ನು ಸುರಕ್ಷಿತವಾಗಿ ಕರೆದೊಯ್ಯುವ ಬದಲು ಗೂಡ್ಸ್ ಟೆಂಪೋದಲ್ಲಿ ಪ್ರಯಾಣ ಮಾಡಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸಂಭ್ರಮದ ಹೆಸರಿನಲ್ಲಿ ಮಕ್ಕಳ ಜೀವದ ಜೊತೆ ಚೆಲ್ಲಾಟವಾಡುವುದು ಎಷ್ಟರಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದ್ದಾರೆ. ಮುಂದಿನ ದಿನಗಳಲ್ಲಿ ಚೌತಿ ಸೇರಿದಂತೆ ಹಲವು ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, […]
ಅಂತರoಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುವುದು: ವಸಂತಿ ಶೆಟ್ಟಿ ಬ್ರಹ್ಮಾವರ

ಉಡುಪಿ: ನಿತ್ಯ ಜೀವನದ ಅನುಭವಗಳಿಂದ ಸಾಹಿತ್ಯ ಹುಟ್ಟುತ್ತದೆ. ಸಾಹಿತಿ ನೀತಿ ಬೋಧಕ ಅಥವಾ ಧರ್ಮ ಬೋಧಕ ಅಲ್ಲ, ಆದರೆ ಸಮಾಜದ ಅಂಕು ಡೊಂಕುಗಳನ್ನು ತನ್ನ ಬರವಣಿಗೆಯ ಮೂಲಕ ತಿದ್ದುವ ಚಿಕಿತ್ಸಕ. ಬರವಣಿಗೆ ಮೂಲಕ ವಿಚಾರದ ಬೆಳಕು ಚೆಲ್ಲಿ ಅಜ್ಞಾನದ ಕತ್ತಲೆಯನ್ನು ಹೋಗಲಾಡಿಸುವವರು ಕವಿಗಳು. ಅಂತರoಗ ಅರಳಿದಾಗ ಅನುಭವ ಪ್ರಪಂಚ ವಿಸ್ತಾರವಾದಾಗ ಸಾಹಿತ್ಯ ಹುಟ್ಟುತ್ತದೆ ಎಂದು ಹಿರಿಯ ಲೇಖಕಿ ವಸಂತಿ ಶೆಟ್ಟಿ ಬ್ರಹ್ಮಾವರ ಅಭಿಪ್ರಾಯಪಟ್ಟರು. ಕರ್ನಾಟಕ ಸರ್ಕಾರ ಸಾರ್ವಜನಿಕ ಗ್ರಂಥಾಲಯ ಇಲಾಖೆ ಜಿಲ್ಲಾ ಕೇಂದ್ರ ಗ್ರಂಥಾಲಯ ಉಡುಪಿ ಇವರ […]
ಹಿರಿಯ ನಾಗರಿಕರು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ನಡೆಸುಂತಾಗಲಿ: ನ್ಯಾ. ಕಿರಣ್ ಸಿದ್ದಪ್ಪ ಗಂಗಣ್ಣನವರ್

ಉಡುಪಿ: ಹಿರಿಯ ನಾಗರಿಕರ ಹಕ್ಕುಗಳ ರಕ್ಷಣೆಗಾಗಿ ಸರ್ಕಾರ ಜಾರಿಗೊಳಿಸಿರುವ ಕಾಯಿದೆ ಹಾಗೂ ಕಾನೂನುಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವಿದ್ದಾಗ ಮಾತ್ರ ಹಿರಿಯರ ಮೇಲಾಗುವ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಹಾಕಲು ಸಾಧ್ಯ. ಈ ಬಗ್ಗೆ ಜನರಿಗೆ ಹೆಚ್ಚು ಜಾಗೃತಿ ಮೂಡಿಸುವ ಮೂಲಕ ಹಿರಿಯ ಜೀವಗಳು ತಮ್ಮ ಸಂಧ್ಯಾ ಕಾಲದಲ್ಲಿ ನೆಮ್ಮದಿಯ ಜೀವನ ಜೀವಿಸಲು ಅನುವು ಮಾಡಿಕೊಡಬೇಕು ಎಂದು ಜಿಲ್ಲಾ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಸಿದ್ದಪ್ಪ ಗಂಗಣ್ಣನವರ್ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ […]
ಉಡುಪಿ: ನಕಲಿ ಆಧಾರ್ ಕಾರ್ಡ್ ಬಳಸಿ ನ್ಯಾಯಾಲಯಕ್ಕೆ ವಂಚಿಸಲು ಯತ್ನ: ಇಬ್ಬರ ಬಂಧನ

ಉಡುಪಿ: ನ್ಯಾಯಾಲಯದಲ್ಲಿ ಆರೋಪಿಯೊಬ್ಬನಿಗೆ ಜಾಮೀನು ನೀಡುವ ಸಂದರ್ಭದಲ್ಲಿ ನಕಲಿ ಆಧಾರ್ ಕಾರ್ಡ್ ಸೃಷ್ಟಿಸಿ, ಅದನ್ನು ನೈಜ ದಾಖಲೆ ಎಂಬಂತೆ ಹಾಜರುಪಡಿಸಿ ವಂಚನೆಗೆ ಯತ್ನಿಸಿದ ಆರೋಪದಡಿ ಇಬ್ಬರನ್ನು ಉಡುಪಿ ನಗರ ಪೊಲೀಸರು ಬಂಧಿಸಿದ್ದಾರೆ. ಉಮ್ಮರ್ ಫಾರೂಕ್ ಬಂಟ್ವಾಳ ಹಾಗೂ ನಿಶಾಂತ್ ಕುಮಾರ್ ಮಂಗಳೂರು ಬಂಧಿತ ಆರೋಪಿಗಳು. ಆರೋಪಿಗಳು ಮತ್ತೊಬ್ಬರ ಆಧಾರ್ ಕಾರ್ಡ್ ಸಂಖ್ಯೆಯನ್ನು ಬಳಸಿಕೊಂಡು, ಕೆ.ಟಿ. ಮೊಹಮ್ಮದ್ ಅವರ ಹೆಸರು ಹಾಗೂ ವಿಳಾಸವನ್ನು ನಕಲಿಯಾಗಿ ನಮೂದಿಸಿ ದಾಖಲೆ ಸಿದ್ಧಪಡಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ ಕುರಿತು […]
ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ಸೆಪ್ಟಂಬರ್ 10: ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು ಸೆ. 7 ರಂದು ಬೆಳಗ್ಗೆ 8.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ಸಂ:0820-2537999, ಪಿ.ಎಸ್.ಐ ಸಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂ:9480805430 ಅನ್ನು ಸಂಪರ್ಕಿಸುವoತೆ ಮಲ್ಪೆ ಪೊಲೀಸ್ […]