ಮೇ 22 ರಿಂದ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ಆರಂಭ: ಇಲ್ಲಿದೆ ವೇಳಾಪಟ್ಟಿ..!!

ಬೆಂಗಳೂರು :  ರಾಜ್ಯದಲ್ಲಿ 2023ನೇ ಸಾಲಿನ ದ್ವೀತಿಯ ಪಿಯುಸಿ ಪೂರಕ ಪರೀಕ್ಷೆ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟಗೊಳಿಸಲಾಗಿದೆ. ಮೇ 22 ರಿಂದ ಜೂನ್ 2 ರವರೆಗೆ ಪೂರಕ ಪರೀಕ್ಷೆ ನಡೆಸಲು ದಿನಾಂಕ ನಿಗದಿ ಮಾಡಲಾಗಿದೆ. ಈ ವರ್ಷದಿಂದ ದ್ವಿತೀಯ ಪಿಯು ಪರೀಕ್ಷೆ ನಡೆಸುತ್ತಿರುವ ಕರ್ನಾಟಕ ಶಾಲಾ ಪರೀಕ್ಷೆ ಹಾಗೂ ಮೌಲ್ಯ ನಿರ್ಣಯ ಮಂಡಳಿಯಿಂದ ದ್ವಿತೀಯ ಪಿಯು ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಬಿಡುಗಡೆ ಮಂಗಳವಾರ ಬಿಡುಗಡೆ ಮಾಡಿದೆ. ಮೇ 22 ರಿಂದ […]

ಮಣಿಪಾಲ: ಮಾಹೆ ಪರಿಸರಕ್ಕೆ ಭೇಟಿ ನೀಡಿದ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ

ಮಣಿಪಾಲ: ಉಡುಪಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮಂಗಳವಾರದಂದು ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್, ಎಂಐಟಿ ಮಣಿಪಾಲ, ಪಾಲಿಟೆಕ್ನಿಕ್ ಕಾಲೇಜು, ಮಣಿಪಾಲ್ ಪ್ರೆಸ್ ಮತ್ತು ಗಾರ್ಮೆಂಟ್ಸ್ ಫ್ಯಾಕ್ಟರಿಗೆ ಭೇಟಿ ನೀಡಿ ಮತಯಾಚಿಸಿದರು. ರಘುಪತಿ ಭಟ್ ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

ಬ್ರಹ್ಮಾವರ; ಜೀವ ಬೆದರಿಕೆ ಆರೋಪ: ದೂರು, ಪ್ರತಿದೂರು ದಾಖಲು..!!

ಬ್ರಹ್ಮಾವರ: ನೀಲಾವರ ಜೋಡುಕಟ್ಟೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಪ್ರಸನ್ನ ಪುತ್ರಾಯ ಅವಾಚ್ಯವಾಗಿ ಬೈದು, ನಮ್ಮ ಜಾಗದ ತಕರಾರಿನ ವಿಚಾರದಲ್ಲಿ ಮಧ್ಯಸ್ಥಿಕೆ ವಹಿಸಿಕೊಂಡು ಬಂದರೆ ಜೀವ ಸಹಿತ ಬಿಡುವುದಿಲ್ಲ ಎಂದು ಬೆದರಿಕೆ ಹಾಕಿರುವುದಾಗಿ ಮಹೇಂದ್ರ ಕುಮಾರ್‌ ಆರೋಪಿಸಿ ಪ್ರತಿದೂರು ಸಲ್ಲಿಸಿದ್ದಾರೆ. ನರಸಿಂಹ ಶೆಟ್ಟಿ, ವಿಠಲ ಮರಕಾಲ ಹಾಗೂ ಪ್ರಸನ್ನ ಪುತ್ರಾಯ ಅವರ ನಡುವೆ ತಕರಾರು ಇರುವ ದಾರಿ ಮತ್ತು ಜಾಗದ ವಿಷಯದಲ್ಲಿ ರಾಜಿ ಪಂಚಾಯತಿ ಮಾಡಿದ್ದು, ಇದೇ ವಿಷಯದಲ್ಲಿ ಅಸಮಾಧಾನಗೊಂಡು ಬೆದರಿಕೆ ಹಾಕಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ […]

ಕಾಪು: ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ ಚಿತ್ರನಟಿ ತಾರ

ಕಾಪು: ಇಲ್ಲಿನ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಾಲಯಕ್ಕೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಪಕ್ಷದ ಸ್ಟಾರ್ ಪ್ರಚಾರಕಿ ತಾರ ಭೇಟಿ ನೀಡಿದರು. ಅಭ್ಯರ್ಥಿ ಗುರ್ಮೆ ಸುರೇಶ್ ಶೆಟ್ಟಿ, ಪಕ್ಷದ ಇತರ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಅಧಿಕಾರಕ್ಕೆ ಬಂದರೆ 94 ಸಿ ಅರ್ಜಿಗಳಿಗೆ ಮರುಜೀವ: ವಿನಯ್ ಕುಮಾರ್ ಸೊರಕೆ

ಉಡುಪಿ: ಶಾಸಕನಾಗಿದ್ದ ಕಾಲದಲ್ಲಿ ಶಿಫಾರಸು ಮಾಡಿದ್ದ 94 ಸಿ ಅರ್ಜಿಗಳು ಗೆದ್ದಲು ಹಿಡಿದಿದ್ದು ಅವುಗಳಿಗೆ ಮರು‌ಜೀವ ಕೊಟ್ಟು ಬಡವರಿಗೆ ಮನೆ ಮಂಜೂರಾತಿ ಮಾಡುವ ಕೆಲಸವನ್ನು ಮಾಡಲಾಗುವುದು. 94 ಸಿ ಕಾನೂನು ಮತ್ತು ಅಕ್ರಮ‌ ಸಕ್ರಮ ಯೋಜನೆಯಡಿ 2 ಸಾವಿರ ಅರ್ಜಿಗಳನ್ನು ಶಿಫಾರಸು ಮಾಡಿದ್ದರೂ ಅವುಗಳನ್ನು ಸಂಪೂರ್ಣವಾಗಿ ತಿರಸ್ಕರಿಸಲಾಗಿದೆ ಎಂದು ಕಾಪು ವಿಧನಾಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಹೇಳಿದರು. ಮೇ.1 ರಂದು ಪೆರ್ಡೂರು ಪೇಟೆಯಲ್ಲಿ‌ ನಡೆದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ರಸ್ತೆ […]