ಉಡುಪಿ: ಬಂಟಕಲ್ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪದವಿ ಪ್ರದಾನ ಸಮಾರಂಭ

ಉಡುಪಿ: ಬಂಟಕಲ್‍ನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ 13ನೇ “ಪದವಿ ಪ್ರದಾನ” ಸಮಾರಂಭವು ದಿನಾಂಕ 11 ಅಕ್ಟೋಬರ್ 2026 ಭಾನುವಾರದಂದು ಕಾಲೇಜಿನ ಆವರಣದಲ್ಲಿ ನಡೆಯಿತು. ದಾವಣಗೆರೆ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಪತಿಗಳಾದ ಡಾ. ಬಿ ಇ ರಂಗಸ್ವಾಮಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ ವಿದ್ಯಾರ್ಥಿಗಳ ಸಾಧನೆಯಲ್ಲಿ ಪೋಷಕರ ಮತ್ತು ಶಿಕ್ಷಕ ವರ್ಗದಕೊಡುಗೆಯನ್ನು ಶ್ಲಾಘಿಸಿದರು. ಶಿಕ್ಷಣವು ಉಜ್ವಲ ಭವಿಷ್ಯದ ಅಡಿಪಾಯ ಎಂದು ತಿಳಿಸಿದ ಅವರು ನಾವೀನ್ಯತೆ, ಉದಯಮಶೀಲತೆ ಮತ್ತು ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯ ಅವಕಾಶಗಳನ್ನು ಬಳಸಿಕೊಳ್ಳುವಂತೆಪದವೀಧರರಿಗೆ ಕರೆ […]

ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ‘MITK AI VISION 24H’ ರಾಷ್ಟ್ರಮಟ್ಟದ ಹ್ಯಾಕಥಾನ್ ಸಮಾರೋಪ: ಹುಬ್ಬಳ್ಳಿಯ ಚೇತನ್ ಬಿಸಿನೆಸ್ ಸ್ಕೂಲ್‌ಗೆ ಪ್ರಥಮ ಸ್ಥಾನ

ಕುಂದಾಪುರ: ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (MITK) ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ‘MITK AI VISION 24H’ 24-ಗಂಟೆಗಳ ರಾಷ್ಟ್ರಮಟ್ಟದ ಹ್ಯಾಕಥಾನ್‌ನ ಸಮಾರೋಪ ಹಾಗೂ ಬಹುಮಾನ ವಿತರಣಾ ಸಮಾರಂಭವು ಕಾಲೇಜಿನ ಸಭಾಂಗಣದಲ್ಲಿ ಯಶಸ್ವಿಯಾಗಿ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಕಾಲೇಜಿನ ಸಿಬ್ಬಂದಿ ಹಾಗೂ ಗಣ್ಯರನ್ನು ಗೌರವಪೂರ್ವಕವಾಗಿ ಸ್ವಾಗತಿಸಲಾಯಿತು. ಮುಖ್ಯ ಅತಿಥಿಯಾಗಿ ಪಾಲ್ಗೊಂಡಿದ್ದ ಬೆಂಗಳೂರಿನ ಕಾಂವಾಲ್ಟ್ ಸಂಸ್ಥೆಯ ಡಾಟಾ ಇವಾಂಜೆಲಿಸ್ಟ್ ಪ್ರಶಾಂತ್ ಜಯರಾಮ್ ತಮ್ಮ ಅನಿಸಿಕೆ ವ್ಯಕ್ತಪಡಿಸಿ, “24 ಗಂಟೆಗಳ ನಿರಂತರ ಪರಿಶ್ರಮದಲ್ಲಿ ಸ್ಪರ್ಧಿಗಳು ಪ್ರದರ್ಶಿಸಿದ ತಾಂತ್ರಿಕ ಜ್ಞಾನ ಮತ್ತು ಸಮಸ್ಯೆಗಳಿಗೆ […]

ಅ.17ರಂದು ಉಡುಪಿಯಲ್ಲಿ 9ನೇ ವರ್ಷದ ದಾಂಡಿಯಾ ಸಂಭ್ರಮ

ಉಡುಪಿ: ಉಡುಪಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಯುವ ಘಟಕದ ನೇತೃತ್ವದಲ್ಲಿ 9ನೇ ವರ್ಷದ ‘ಉಡುಪಿ ದಾಂಡಿಯಾ 2026’ ಕಾರ್ಯಕ್ರಮ ಅ.17ರಂದು ಸಂಜೆ 6 ಗಂಟೆಯಿಂದ ಕಡಿಯಾಳಿ ಹಿರಿಯ ಪ್ರಾಥಮಿಕ ಶಾಲೆಯ ಮೈದಾನದಲ್ಲಿ ನಡೆಯಲಿದೆ ಎಂದು ಯುವ ಘಟಕದ ಅಧ್ಯಕ್ಷ ಪ್ರದೀಪ್ ಶೆಟ್ಟಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಅತ್ಯುತ್ತಮ ಜೋಡಿ ನೃತ್ಯ, ಅತ್ಯುತ್ತಮ ವೇಷಭೂಷಣ, ಅತ್ಯುತ್ತಮ ಸಮೂಹ ನೃತ್ಯ ಹಾಗೂ ಮಕ್ಕಳ ಅತ್ಯುತ್ತಮ ವೇಷಭೂಷಣ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಈ ಬಾರಿ ವಿಶೇಷ ಆಕರ್ಷಣೆಯಾಗಿ ಅತ್ಯುತ್ತಮ ನವವಿವಾಹಿತ […]

ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಬೆಂದೂರ್‌ವೆಲ್‌ನಲ್ಲಿರುವ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಹಬ್ಬದ ಆಚರಣೆ ಹಾಗೂ […]