ಉಡುಪಿ: ವ್ಯಕ್ತಿ ನಾಪತ್ತೆ

ಉಡುಪಿ ಸೆಪ್ಟಂಬರ್ 10: ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು ಸೆ. 7 ರಂದು ಬೆಳಗ್ಗೆ 8.30 ರ ಸುಮಾರಿಗೆ ಕೆಲಸಕ್ಕೆಂದು ಮನೆಯಿಂದ ಹೊರಗೆ ಹೋದವರು ವಾಪಸು ಬಾರದೇ ನಾಪತ್ತೆಯಾಗಿರುತ್ತಾರೆ.5 ಅಡಿ 6 ಇಂಚು ಎತ್ತರ, ಗೋಧಿ ಮೈ ಬಣ್ಣ ಹೊಂದಿದ್ದು ಕನ್ನಡ, ತುಳು ಹಾಗೂ ಹಿಂದಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ಸಂ:0820-2537999, ಪಿ.ಎಸ್.ಐ ಸಂ:9480805447, ಉಡುಪಿ ವೃತ್ತ ನಿರೀಕ್ಷಕರು ದೂ.ಸಂ:9480805430 ಅನ್ನು ಸಂಪರ್ಕಿಸುವoತೆ ಮಲ್ಪೆ ಪೊಲೀಸ್ […]
ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಕಾಂಗ್ರೆಸ್ ಸತ್ಯಾಗ್ರಹ

ಉಡುಪಿ: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಸ್ಥಳವನ್ನು ಬಿಜೆಪಿ ಕಾರ್ಯಕರ್ತರು ಸ್ವಚ್ಛಗೊಳಿಸುವ ಮೂಲಕ ಹಿರಿಯ ರಾಷ್ಟ್ರೀಯ ನಾಯಕನಿಗೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಪ್ರಚಾರ ಸಮಿತಿ ವತಿಯಿಂದ ಸೆ.12ರಂದು ಉಡುಪಿಯಲ್ಲಿ ಸತ್ಯಾಗ್ರಹ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಅಲೆವೂರು ಹರೀಶ್ ಕಿಣಿ ತಿಳಿಸಿದರು. ಬ್ರಹ್ಮಗಿರಿಯ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೆ.12ರಂದು ಬೆಳಿಗ್ಗೆ 10.30ಕ್ಕೆ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಮೌನ […]
ಉದಯೋನ್ಮುಖ ಕಂಟೆಂಟ್ ಕ್ರಿಯೇಟರ್ ಗಳಿಗೆ ಮಣಿಪಾಲ MSDC ಯಿಂದ ಕ್ಯಾಮೆರಾ ಮುಂದೆ ಮಿಂಚಲು ಇಲ್ಲಿದೆ ಒಂದೊಳ್ಳೆ ಅವಕಾಶ

ಮಣಿಪಾಲ: ಕ್ಯಾಮೆರಾ ಮುಂದೆ ತಮ್ಮ ಪ್ರತಿಭೆ ಹಾಗೂ ಸೃಜನಶೀಲತೆಯನ್ನು ಪ್ರದರ್ಶಿಸಲು ಆಸಕ್ತಿ ಹೊಂದಿರುವ ಹೊಸ ಪ್ರತಿಭೆಗಳು ಮತ್ತು ಕಂಟೆಂಟ್ ಕ್ರಿಯೇಟರ್ಗಳಿಗೆ ಮಣಿಪಾಲ್ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ (MSDC) ವಿಶೇಷ ಅವಕಾಶ ಕಲ್ಪಿಸಿದೆ. ಕ್ಯಾಮೆರಾ ಮುಂದೆ ಆತ್ಮವಿಶ್ವಾಸದಿಂದ ಮಾತನಾಡುವ ಹಾಗೂ ತಮ್ಮ ವ್ಯಕ್ತಿತ್ವ ಮತ್ತು ಎನರ್ಜಿಯಿಂದ ಪ್ರೇಕ್ಷಕರ ಗಮನ ಸೆಳೆಯಬಲ್ಲ ಫ್ರೆಶ್ ಫೇಸ್ಗಳು ಮತ್ತು ಉದಯೋನ್ಮುಖ ಕಂಟೆಂಟ್ ಕ್ರಿಯೇಟರ್ಗಳನ್ನು MSDC ಆಹ್ವಾನಿಸಿದೆ. ಆಯ್ಕೆಯಾಗುವವರಿಗೆ MSDC ಸಹಯೋಗದಲ್ಲಿ ಕಂಟೆಂಟ್ ರಚಿಸುವ ಅವಕಾಶದೊಂದಿಗೆ ಸಂಭಾವನೆ ಪಡೆಯುವ ಅವಕಾಶವೂ ದೊರೆಯಲಿದೆ. ಈ ಚಿತ್ರೀಕರಣ […]
ಶಿರೂರು: ನಿಯಂತ್ರಣ ತಪ್ಪಿದ ಲಾರಿ ಡಿಕ್ಕಿ ಹೊಡೆದು ಸರಣಿ ಅಪಘಾತ: ಬೈಕ್ ಸವಾರ ಸಾವು

ಉಡುಪಿ: ಅಪಘಾತಕ್ಕೀಡಾದ ವಾಹನವನ್ನು ಹೆದ್ದಾರಿಯಿಂದ ಮೇಲೆತ್ತುವ ಕಾರ್ಯಾಚರಣೆ ವೇಳೆ ನಿಯಂತ್ರಣ ತಪ್ಪಿದ ಸರಕು ಸಾಗಣೆ ಲಾರಿಯೊಂದು ಹೈವೇ ಪೆಟ್ರೋಲ್ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಶಿರೂರು ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ಮೃತರನ್ನು ಶಿರೂರಿನ ನಾಗೇಂದ್ರ ಮಹಾಲೆ (45) ಎಂದು ಗುರುತಿಸಲಾಗಿದೆ. ಹೆದ್ದಾರಿಯಲ್ಲಿ ಅಪಘಾತಕ್ಕೀಡಾಗಿದ್ದ ಸರಕು ತುಂಬಿದ ಲಾರಿಯನ್ನು ಮೇಲೆತ್ತುವ ಕಾರ್ಯ ನಡೆಯುತ್ತಿದ್ದ ಹಿನ್ನೆಲೆಯಲ್ಲಿ ವಾಹನ ಸಂಚಾರವನ್ನು ತಾತ್ಕಾಲಿಕವಾಗಿ ತಡೆದು ಬ್ಯಾರಿಕೇಡ್ಗಳನ್ನು ಅಳವಡಿಸಲಾಗಿತ್ತು. ಈ ವೇಳೆ ಇಳಿಜಾರು ರಸ್ತೆಯಲ್ಲಿ ಅತಿವೇಗವಾಗಿ […]
‘ಪಕ್ಷದ ತೀರ್ಮಾನಕ್ಕೆ ಬದ್ಧ, ಪಕ್ಷ ಕೊಟ್ಟ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವೆ’

ಉಡುಪಿ: ‘ನಾಯಕರ ಹಾಗೂ ಕಾರ್ಯಕರ್ತರ ಅಭಿಪ್ರಾಯ ಪಡೆದು ಪಕ್ಷವು ನನ್ನನ್ನು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ನೇಮಕ ಮಾಡಿದೆ. ಯಾರಿಗೆ ಅಸಮಾಧಾನ, ಯಾರಿಗೆ ಸಮಾಧಾನ ಎಂಬುದು ಈಗ ಮುಖ್ಯವಲ್ಲ. ಪಕ್ಷ ನನ್ನ ಮೇಲೆ ವಿಶ್ವಾಸವಿಟ್ಟು ನೀಡಿರುವ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುವ ಸವಾಲು ನನ್ನ ಮುಂದಿದೆ’ ಎಂದು ನೂತನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಹೇಳಿದರು. ಉಡುಪಿ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಈ ಹಿಂದೆ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ನನ್ನ ಹೆಸರು ಘೋಷಿಸಿ ಬಳಿಕ ಹಿಂಪಡೆಯಲಾಗಿತ್ತು. […]