ಹೆಜಮಾಡಿ: ಟಯರ್ ಸ್ಪೋಟಗೊಂಡು ಮಗುಚಿದ ಟೆಂಪೋ – ಕಾರ್ಮಿಕ ಮಹಿಳೆ ಸಾವು

ಉಡುಪಿ: ಕಾಂಕ್ರೀಟ್ ಕೆಲಸಕ್ಕೆ ಸಾಗುತ್ತಿದ್ದ ಟೆಂಪೋ ವೊಂದರ ಟಯರ್ ಸ್ಫೋಟಗೊಂಡು ಮಗುಚಿ ಬಿದ್ದ ಪರಿಣಾಮ ಮಹಿಳಾ ಕಾರ್ಮಿಕರೊಬ್ಬರು ಮೃತಪಟ್ಟಿದ್ದು, ಹಲವರು ಗಾಯಗೊಂಡ ಘಟನೆ ಹೆಜಮಾಡಿ ಕನ್ನಂಗಾರು ಬ್ರಹ್ಮಬೈದರ್ಕಳ ಗರಡಿ ಎದುರು ರಾ.ಹೆ. 66ರಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಪಾರ್ವತಿ (30) ಎಂದು ಗುರುತಿಸಲಾಗಿದೆ. ಸಾವಿತ್ರಮ್ಮ, ಮಹಂತೇಶ್ ಸಹಿತ 7 ಜನರು ಗಾಯಗೊಂಡಿದ್ದಾರೆ. ಮುಲ್ಕಿಯಿಂದ ಉಡುಪಿ ಕಡೆಗೆ ಸಾಗುತ್ತಿದ್ದ ಟೆಂಪೋದಲ್ಲಿ ಕಾಂಕ್ರೀಟ್ ಮಿಕ್ಸಿಂಗ್ ಯಂತ್ರ ಮತ್ತು ಪರಿಕರಗಳ ಸಹಿತ ಪುರುಷರು ಮತ್ತು ಮಹಿಳೆಯರಿದ್ದರು. ವೇಗವಾಗಿ ಸಾಗುತ್ತಿದ್ದ […]
ಡಿ.13ರಂದು ಉಡುಪಿಯಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ”

ಉಡುಪಿ: ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ ಉಡುಪಿ ಹಾಗೂ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಜಂಟಿ ಆಶ್ರಯದಲ್ಲಿ “ಆಳ್ವಾಸ್ ಸಾಂಸ್ಕೃತಿಕ ವೈಭವ” ವನ್ನು ಉಡುಪಿ ಶ್ರೀಕೃಷ್ಣಮಠದ ರಾಜಾಂಗಣ ಬಳಿಯ ಪಾರ್ಕಿಂಗ್ ಪ್ರದೇಶದಲ್ಲಿ ನಿರ್ಮಿಸಲಾಗಿರುವ ಶ್ರೀ ವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ. 13ರ ಶನಿವಾರ ಸಂಜೆ 5:45ಕ್ಕೆ ಆಯೋಜಿಸಲಾಗಿದೆ ಎಂದು ಸಂಘಟನಾ ಕಾರ್ಯದರ್ಶಿ ಮುರಳಿ ಕಡೆಕಾರ್ ತಿಳಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಪರ್ಯಾಯ ಪುತ್ತಿಗೆ ಮಠಾಧೀಶರಾದ ಶ್ರೀ ಸುಗಣೇಂದ್ರತೀರ್ಥ ಶ್ರೀಪಾದರು […]
ಡಿ.14ರಂದು ಶೀರೂರು ಮಠದ ಪರ್ಯಾಯ ಪೂರ್ವಭಾವಿ ಧಾನ್ಯ ಮುಹೂರ್ತ

ಉಡುಪಿ: ಶ್ರೀ ಕೃಷ್ಣಮಠದಲ್ಲಿ 2026ರ ಜ. 18ರಂದು ನಡೆಯುವ ಶೀರೂರು ಮಠದ ಶ್ರೀ ವೇದವರ್ಧನತೀರ್ಥ ಶ್ರೀಪಾದರ ಪ್ರಥಮ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ನಡೆಯುವ ಚತುರ್ಥ ಮುಹೂರ್ತವಾದ ಧಾನ್ಯ ಮುಹೂರ್ತವು ಕೃಷ್ಣಮಠದ ಆವರಣದಲ್ಲಿ ಡಿ.14ರ ಭಾನುವಾರ ನೆರವೇರಲಿದೆ ಎಂದು ಶೀರೂರು ಮಠದ ದಿವಾನರಾದ ಉದಯ ಕುಮಾರ್ ಸರಳತ್ತಾಯ ತಿಳಿಸಿದರು. ಈ ಕುರಿತು ಶೀರೂರು ಮಠದಲ್ಲಿ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 6.15ಕ್ಕೆ ಶೀರೂರು ಮಠದಲ್ಲಿ ದೇವತಾ ಪ್ರಾರ್ಥನೆ ನಡೆಯಲಿದೆ. ಬಳಿಕ ಶ್ರೀ ಅನಂತೇಶ್ವರ, ಶ್ರೀಚಂದ್ರಮೌಳೀಶ್ವರ, ಶ್ರೀಕೃಷ್ಣಮುಖ್ಯಪ್ರಾಣ, ಗರುಡ […]
ಆಸ್ಟ್ರೇಲಿಯಾದಲ್ಲಿ ಮಕ್ಕಳಿಗೆ ಸೋಶಿಯಲ್ ಮೀಡಿಯಮ್ ಬ್ಯಾನ್!

ಆಸ್ಟ್ರೇಲಿಯಾದಲ್ಲಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನವರಿಗೆ ಸೋಷಿಯಲ್ ಮೀಡಿಯಾ ಬ್ಯಾನ್ ಮಾಡುವ ಕಾನೂನು ಜಾರಿಗೆ ಬಂದಿದೆ. ಈ ಮೂಲಕ, ಮಕ್ಕಳ ಸಾಮಾಜಿಕ ಜಾಲತಾಣಗಳ ಬಳಕೆ ಸಂಬಂಧ ಸಮಗ್ರ ಕಾನೂನು ರೂಪಿಸಿದ ಮೊದಲ ದೇಶವಾಗಿದೆ. ಫೇಸ್ಬುಕ್, ಇನ್ಸ್ಟಾಗ್ರಾಮ್, ಯೂಟ್ಯೂಬ್, ಥ್ರೆಡ್ಸ್, ಸ್ಮ್ಯಾಪ್ಚಾಟ್, ಟಿಕ್ಟಾಕ್ ನಂತಹ ಸಾಮಾಜಿಕ ಜಾಲತಾಣಗಳ ವೇದಿಕೆಗಳು ಬಳಕೆದಾರರ ವಯಸ್ಸನ್ನ ಖಚಿತಪಡಿಸಿಕೊಳ್ಳುವುದು ಕಡ್ಡಾಯವಾಗಿದೆ. ಇಲ್ಲವಾದಲ್ಲಿ ಭಾರೀ ಪ್ರಮಾಣದಲ್ಲಿ ದಂಡ ತೆರಬೇಕಾಗಿದೆ. ಮಕ್ಕಳ ಸುರಕ್ಷತೆ ಖಾತರಿಪಡಿಸಲು ಸಾಮಾಜಿಕ ಹೊಣೆಗಾರಿಕೆ ನಿಗದಿಪಡಿಸುವ ಉದ್ದೇಶ ಈ ಕಾನೂನಿನಲ್ಲಿದೆ ಅಂತ ಆಸ್ಟ್ರೇಲಿಯಾ ಸರ್ಕಾರ […]
ಕಾರ್ಕಳ: ಅಡಿಕೆ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

ಅಜೆಕಾರು: ಅಡಿಕೆ ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಡಿ.9ರಂದು ಮಧ್ಯಾಹ್ನ ವೇಳೆ ಶಿರ್ಲಾಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೆರ್ವಾಶೆ ಗ್ರಾಮದ ಮುಗ್ಗೆರಕಳ ನಿವಾಸಿ ನಾರಾಯಣ ಆರ್. ಎಂದು ಗುರುತಿಸಲಾಗಿದೆ. ಇವರು ಶಿರ್ಲಾಲು ಗ್ರಾಮದ ಜಯಪ್ರಕಾಶ್ ಅರಿಗ ಎಂಬವರ ತೋಟಕ್ಕೆ ಅಡಿಕೆ ಕೊಯ್ಯಲು ಹೋಗಿದ್ದು ಅಡಿಕೆ ಮರ ಹತ್ತಿ ಅಡಿಕೆ ಕೊಯ್ಯುತ್ತಿದ್ದ ನಾರಾಯಣ, ಆಕಸ್ಮಿಕವಾಗಿ ಮರದಿಂದ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ದಾರಿ ಮಧ್ಯೆ ಮೃತಪಟಞ್ಟರು ಎಂದು ತಿಳಿದುಬಂದಿದೆ. […]