ಸೆ.27 ರಂದು ಮಂಗಳೂರಿನ ಅಂಬೇಡ್ಕರ್ ಭವನದಲ್ಲಿ ಕರ್ಣಾಟಕ ಬ್ಯಾಂಕ್ “ಸ್ವರ ತರಂಗ್” ಸಂಗೀತ ಕಾರ್ಯಕ್ರಮ

ಮಂಗಳೂರಿನ ಸಂಗೀತ ಭಾರತೀ ಪ್ರತಿಷ್ಠಾನ ಪ್ರಸ್ತುತ ಪಡಿಸುವ ಉತ್ಕøಷ್ಟ ಮಟ್ಟದ ಕರ್ಣಾಟಕ ಬ್ಯಾಂಕ್ “ಸ್ವರ ತರಂಗ್” ಸಂಗೀತ ಕಾರ್ಯಕ್ರಮ ನಗರದ ಅಂಬೇಡ್ಕರ್ ಭವನದಲಿದಲ್ಲಿ ಸೆಪ್ಟೆಂಬರ್ 27 ರಂದು ಸಂಜೆ 05.30 ರಿಂದ ನಡೆಯಲಿದೆ.ಕಾರ್ಯಕ್ರಮದ ಪೂರ್ವಾರ್ಧದಲ್ಲಿ ಕೊಲ್ಕತ್ತದ ವಿದುಷಿ ರುಚಿರ ಪಾಂಡ ಇವರಿಂದ ಶಾಸ್ತ್ರೀಯ ಗಾಯನ ಕಾರ್ಯಕ್ರಮ ನಡೆಯಲಿದೆ. ಇವರಿಗೆ ಉತ್ತರ ಕನ್ನಡದ ಸತೀಶ್ ಭಟ್ ಹೆಗ್ಗಾರ್ ಅವರು ಹಾರ್ಮೋನಿಯಂ ನಲ್ಲಿ ಹಾಗೂ ಮುಂಬೈನ ಯುವ ತಬ್ಲಾ ಪಟು ಯಶವಂತ್ ವೈಷ್ಣವ್ ಸಾಥ್ ನೀಡಲಿದ್ದಾರೆ. ಕಾರ್ಯಕ್ರಮದ ಉತ್ತರಾರ್ಧದಲ್ಲಿ ನವ […]
ಉಡುಪಿ ತಾಲೂಕು ಮಟ್ಟದ ಫುಟ್ಬಾಲ್ ಪಂದ್ಯಾಟದಲ್ಲಿ ಮಣಿಪಾಲ ಜ್ಞಾನಸುಧಾ ಪ್ರಥಮ

ಮಣಿಪಾಲ: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಡುಪಿ ಜಿಲ್ಲೆ ಹಾಗೂ ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರ ಇವರ ಜಂಟಿ ಆಶ್ರಯದಲ್ಲಿ ಉಡುಪಿ ತಾಲೂಕು ಮಟ್ಟದ ಬಾಲಕ ಬಾಲಕಿಯರ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ದಿನಾಂಕ: 08-09-2026 ಮಂಗಳವಾರದಂದು ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾಗಿ ಆಗಮಿಸಿದ ಡಾ. ಕೆಂಪರಾಜ್ ಎಚ್.ಬಿ., ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕರು, ಮಾಹೆ, ಮಣಿಪಾಲ ಇವರು ಮಾತನಾಡಿ ಕ್ರೀಡೆ ವ್ಯಕ್ತಿಯ ಸರ್ವಾಂಗೀಣ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ನಮ್ಮನ್ನು ಸ್ವಾಸ್ಥ್ಯ, ಸದೃಢ, ಉತ್ತಮ […]
ಉಡುಪಿ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ನೇಮಕ, ದಕ್ಷಿಣ ಕನ್ನಡಕ್ಕೆ ಪದ್ಮರಾಜ್ ರಾಮಯ್ಯ ನೇಮಕ

ಉಡುಪಿ: ರಾಜ್ಯದ ವಿವಿಧ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿ ಪಟ್ಟಿಯನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಪ್ರಕಟಿಸಿದ್ದಾರೆ.ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಿಶನ್ ಹೆಗ್ಡೆ ಕೊಳ್ಕೆಬೈಲ್ ಅವರನ್ನು ನೇಮಕ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಪದ್ಮರಾಜ್ ರಾಮಯ್ಯ ಅವರನ್ನು ನೇಮಕಗೊಳಿಸಿ ಆದೇಶ ಹೊರಡಿಸಲಾಗಿದೆ.ಎರಡೂ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಬಲಪಡಿಸುವುದು, ತಳಮಟ್ಟದಲ್ಲಿ ಪಕ್ಷದ ಕಾರ್ಯಕರ್ತರನ್ನು ಸಕ್ರಿಯಗೊಳಿಸುವುದು ಹಾಗೂ ಮುಂಬರುವ ರಾಜಕೀಯ ಚಟುವಟಿಕೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಜವಾಬ್ದಾರಿ ನೂತನ ಜಿಲ್ಲಾಧ್ಯಕ್ಷರ ಮೇಲಿದೆ.
ಉಡುಪಿ: ತಪ್ಪು ಮಾಡದಿದ್ದರೂ ಕಳ್ಳತನದ ಆರೋಪಿ; ಕೊನೆಗೂ ಹೈಕೋರ್ಟ್ನಿಂದ ಅಮಾಯಕ ರಿಕ್ಷಾ ಚಾಲಕನಿಗೆ ನ್ಯಾಯ!

ಉಡುಪಿ: ಪೊಲೀಸರನ್ನು ನಂಬಿ ದಾಖಲೆಯೊಂದಕ್ಕೆ ಹಾಕಿದ ಸಹಿಯೊಂದು ಅಮಾಯಕ ರಿಕ್ಷಾ ಚಾಲಕನೊಬ್ಬನನ್ನು ಒಂದೂವರೆ ವರ್ಷಗಳ ಕಾಲ ಕ್ರಿಮಿನಲ್ ಪ್ರಕರಣದ ಆರೋಪಿಯನ್ನಾಗಿ ಮಾಡಿತ್ತು. ಮಾನಸಿಕ ಯಾತನೆ, ಸಾಮಾಜಿಕ ಅವಮಾನ ಅನುಭವಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದ ಕುಂದಾಪುರ ತಾಲ್ಲೂಕಿನ ಆಲೂರು ಗ್ರಾಮದ ಶೀನ ಪೂಜಾರಿ ಅವರಿಗೆ ಇದೀಗ ಕರ್ನಾಟಕ ಹೈಕೋರ್ಟ್ನಲ್ಲಿ ನ್ಯಾಯ ದೊರೆತಿದೆ. ಸರಕಾರಿ ಜಮೀನಿನಲ್ಲಿ ಅಕ್ರಮವಾಗಿ ಕಲ್ಲುಕೋರೆ ನಡೆಸಿ ಕೆಂಪುಕಲ್ಲು ಕಳವು ಮಾಡಿದ ಆರೋಪದ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿ ಸೇರಿಸಲಾಗಿದ್ದ ಶೀನ ಪೂಜಾರಿ ವಿರುದ್ಧದ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ. ಅವರ […]
ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ಕಿತ್ತುಹೋದ ರಸ್ತೆ!

ಉಡುಪಿ: ಮಣಿಪಾಲದ ಟೈಗರ್ ಸರ್ಕಲ್ನಿಂದ ಕೆನರಾ ಬ್ಯಾಂಕ್ ಕಡೆಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಡಾಂಬರು ಹಾಕಿದ ನಾಲ್ಕೇ ತಿಂಗಳಲ್ಲಿ ರಸ್ತೆ ಕಿತ್ತುಹೋಗಿ ಅಲ್ಲಲ್ಲಿ ಗುಂಡಿಗಳು ನಿರ್ಮಾಣವಾಗಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಸುಮಾರು ₹70 ಲಕ್ಷ ವೆಚ್ಚದಲ್ಲಿ ಕೈಗೊಂಡಿದ್ದ ರಸ್ತೆ ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಡಾಂಬರು ಕಿತ್ತುಹೋಗಿರುವುದರಿಂದ ರಸ್ತೆಯ ಹಲವೆಡೆ ಗುಂಡಿಗಳು ಕಾಣಿಸಿಕೊಂಡಿದ್ದು, ವಾಹನ ಸವಾರರು ಸಂಚರಿಸಲು ಪರದಾಡುವಂತಾಗಿದೆ. ಹೊಸದಾಗಿ ನಿರ್ಮಿಸಿದ ರಸ್ತೆ ಕೆಲವೇ ತಿಂಗಳಲ್ಲಿ ಹದಗೆಟ್ಟಿರುವುದು ಕಾಮಗಾರಿಯ ಗುಣಮಟ್ಟದ ಬಗ್ಗೆ ಹಲವು […]