ಅಕ್ಷಯಾಮೃತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ: 5ನೇ ವಾರ್ಷಿಕ ಮಹಾಸಭೆ

ಹಿರಿಯಡಕ: ಅಕ್ಷಯಾಮೃತ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ 5ನೇ ವಾರ್ಷಿಕ ಮಹಾಸಭೆಯು ಸೆ.06 ರಂದು ಸುರಭಿ ಸಭಾಭವನ ಹಿರಿಯಡಕದಲ್ಲಿ ಅಪರಾಹ್ನ 4 ಗಂಟೆಗೆ ಸಂಘದ ಅಧ್ಯಕ್ಷರಾದ ಜನಾರ್ಧನ ಆರ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಸರ್ಕಾರಿ ಸೇವೆಗೈದು ಇತ್ತೀಚಿಗಷ್ಟೆ ನಿವೃತ್ತಿರಾದ ಐ.ಎ.ಎಸ್ ಅಧಿಕಾರಿ ಬಿ.ಸದಾಶಿವ ಪ್ರಭು ಎಳ್ಳಾರೆ, ಕೃಷಿ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಸೇವೆಗೈದ ವಾಸು ಪ್ರಭು ನರ್ಜೆಯವರನ್ನು, ಸಮಾಜ ಸೇವೆ ಮತ್ತು ಪತ್ರಿಕೋದ್ಯಮದಲ್ಲಿ ಕಾರ್ಯನಿವಹಿಸಿದ ಗೋಪಾಲಕೃಷ್ಣ ನಾಯಕ್ ರವರನ್ನು ಹಾಗು ಪ್ರಾಚೀನ ವಿದ್ಯೆ ಹಾಗು ಪಾರಂಪರಿಕ ವೈದ್ಯರಾಗಿರುವ […]

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿದ ಶಾಸಕ ವಿ. ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ಮುಂಬರುವ ಐತಿಹಾಸಿಕ ಶ್ರೀ ಗೊಮ್ಮಟೇಶ್ವರಸ್ವಾಮಿಯ ಮಹಾಮಸ್ತಕಾಭಿಷೇಕದ ಸಿದ್ಧತೆ ಕುರಿತು ಕಾರ್ಕಳ ಶಾಸಕ ಹಾಗೂ ಮಾಜಿ ಸಚಿವ ವಿ. ಸುನಿಲ್ ಕುಮಾರ್ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಸುದೀರ್ಘವಾಗಿ ಚರ್ಚಿಸಿದರು. ಹನ್ನೆರಡು ವರ್ಷಗಳಿಗೊಮ್ಮೆ ನಡೆಯುವ ಐತಿಹಾಸಿಕ ಮಹಾ ಮಸ್ತಕಾಭಿಷೇಕಕ್ಕೆ 2027ರ ಫೆಬ್ರವರಿ 18ರಿಂದ ಹತ್ತು ದಿನಗಳ ಕಾಲ ನಡೆಯಲಿದ್ದು ದೇಶ-ವಿದೇಶಗಳಿಂದ ಅಪಾರ ಸಂಖ್ಯೆಯಲ್ಲಿ ಯಾತ್ರಾರ್ಥಿಗಳು, ಮತ್ತು ಪ್ರವಾಸಿಗರು ಆಗಮಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಕಾರ್ಕಳದಲ್ಲಿ ಅಗತ್ಯ […]

ಉಡುಪಿ: ಕಾಪುವಿನಲ್ಲಿ ‘ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ’ದ 8ನೇ ನೂತನ ಶಾಖೆ ಶುಭಾರಂಭ

ಉಡುಪಿ: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ ನೂತನ 8ನೇ ಶಾಖೆಯು ಕಾಪು ಹೊಸ ಮಾರಿಗುಡಿ ದೇವಸ್ಥಾನದ ಮುಂಭಾಗದ ಮುಖ್ಯರಸ್ತೆಯಲ್ಲಿರುವ ಶ್ರೀ ನಾರಾಯಣಗುರು ಕಾಂಪ್ಲೆಕ್ಸ್‌ನಲ್ಲಿ ಬುಧವಾರ ಶುಭಾರಂಭಗೊಂಡಿತು.ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರು, ಆಧುನಿಕ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳು ನಶಿಸಿ ಹೋಗುತ್ತಿರುವ ಸಂದರ್ಭದಲ್ಲೂ ಸಮಾಜದ ಅಗತ್ಯಗಳಿಗೆ ಸ್ಪಂದಿಸುತ್ತಾ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಹೇಳಿದರು. ಸಂಘವು ಸತತ ಎರಡು ವರ್ಷ ರಾಜ್ಯ ಪ್ರಶಸ್ತಿಗೆ ಭಾಜನವಾಗಿದ್ದು, ಕಳೆದ […]

Tulu Language: ಮಂಗಳೂರಿನ ಸಚಿವ ಸಂಪುಟ ಸಭೆಯಲ್ಲಿ ತುಳುವನ್ನು 2ನೇ ಅಧಿಕೃತ ಭಾಷೆಯಾಗಿ ಘೋಷಿಸಿ; ವಿ ಸುನೀಲ್ ಕುಮಾರ್

‘ಸೆಪ್ಟೆಂಬರ್ 18 ರಂದು ರಾಜ್ಯ ಸರ್ಕಾರ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ ನಡೆಸಲು ನಿರ್ಧರಿಸಿದೆ. ಆದರೆ, ಈ ಸಭೆ ಕೇವಲ ಔಪಚಾರಿಕತೆ ಹಾಗೂ ಘೋಷಣೆಗೆ ಸೀಮಿತವಾಗಬಾರದು. ಕರಾವಳಿ ಜನರ ದಶಕಗಳ ಭಾವನಾತ್ಮಕ ಹಾಗೂ ನ್ಯಾಯಯುತ ಬೇಡಿಕೆಯಾದ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸುವ ನಿರ್ಧಾರವನ್ನು ಈ ಸಂಪುಟ ಸಭೆಯಲ್ಲಿ ಸರ್ಕಾರ ಘೋಷಿಸಲೇಬೇಕು’ ಎಂದು ವಿ ಸುನೀಲ್ ಕುಮಾರ್ ಹೇಳಿದ್ದಾರೆ. ಬೆಂಗಳೂರು: ಇದೇ ಬರುವ ಸೆಪ್ಟೆಂಬರ್ 18ರಂದು ಮೊದಲ ಬಾರಿಗೆ ಮಂಗಳೂರಿನಲ್ಲಿ ಸಚಿವ ಸಂಪುಟ ಸಭೆ […]

ಕಲ್ಯಾಣಪುರ, ತ್ರಿಶಾ ಪದವಿಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ.

ಉಡುಪಿ – ಕಲ್ಯಾಣಪುರದಲ್ಲಿರುವ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ಶೈಕ್ಷಣಿಕ ಸಹಭಾಗಿತ್ವದ ತ್ರಿಶಾ ಪದವಿ ಪೂರ್ವ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಪ್ರಯುಕ್ತ ‘ಗುರು ದೇವೋಭವ’ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ, ದೀಪ ಪ್ರಜ್ವಲನೆಯೊಂದಿಗೆ ಉದ್ಘಾಟಿಸಲಾಯಿತು. ಡಾಕ್ಟರ್ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಗೌರವ ಸಲ್ಲಿಸಲಾಯಿತು.ಸಾಮಾಜಿಕ,ಶೈಕ್ಷಣಿಕ ಕ್ಷೇತ್ರದಲ್ಲಿನ ಸಾಧನೆಗಾಗಿ ಶ್ರೀ ದಿನಕರ ಆರ್ ಶೆಟ್ಟಿ ನಿವೃತ್ತ ಮುಖ್ಯ ಶಿಕ್ಷಕರು ನಿವೇದಿತಾ ಪ್ರೌಢಶಾಲೆ ಬಸ್ರೂರು, ಶ್ರೀ ಮಂಜುನಾಥ್ ಕೆ ಎಸ್ ರಸಾಯನ ಶಾಸ್ತ್ರ ಉಪನ್ಯಾಸಕರು ತ್ರಿಶಾ ಪದವಿ ಪೂರ್ವ […]