ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮೂವರ ಬಂಧನ

ವಿಟ್ಲ: ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಟ್ಲ ಪೊಲೀಸರು ಜವಾದ್, ಶಹೀದ್ ಹಾಗೂ ರಿಯಾಝ್ ಅಲಿಯಾಸ್ ಅಬ್ದುಲ್ ಗಫೂರ್ ಎಂಬ ಮೂವರನ್ನು ಬಂಧಿಸಿದ್ದಾರೆ. 2026ರ ಫೆಬ್ರವರಿಯಿಂದ ಆಗಸ್ಟ್‌ವರೆಗೆ ಆರು ಮಂದಿ ಬಾಲಕನ ಮೇಲೆ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಸೆ.4ರಂದು ಬಾಲಕ ನೀಡಿದ ದೂರಿನ ಆಧಾರದಲ್ಲಿ ಆರು ಪ್ರತ್ಯೇಕ ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ತನಿಖೆ ನಡೆಸಿದ ಪೊಲೀಸರು ಮೂವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ ಆರೋಪಿಗಳ ಪತ್ತೆಗಾಗಿ […]

ಉಡುಪಿಯ ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ಇದೀಗ ಇನ್ನಷ್ಟು ಉತ್ತಮ ಸೇವೆ, ಮಕ್ಕಳ ಹಾಗೂ ನವಜಾತ ಶಿಶುಗಳ ವಿಭಾಗ ವಿಸ್ತರಣೆ

ಉಡುಪಿ: ಹೈಟೆಕ್ ಮೆಡಿಕೇರ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಇನ್ನಷ್ಟು ಉತ್ತಮ ಹಾಗೂ ಸಮಗ್ರ ವೈದ್ಯಕೀಯ ಸೇವೆ ಒದಗಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಮಕ್ಕಳ ಹಾಗೂ ನವಜಾತ ಶಿಶುಗಳ ವಿಭಾಗವನ್ನು ಮತ್ತಷ್ಟು ವಿಸ್ತರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಅನುಭವಿ ತಜ್ಞ ವೈದ್ಯರನ್ನು ಒಳಗೊಂಡ ಬಲಿಷ್ಠ ತಂಡವನ್ನು ಪರಿಚಯಿಸಲಾಗಿದೆ. ನವಜಾತ ಶಿಶುಗಳು ಹಾಗೂ ಮಕ್ಕಳಿಗೆ ಗುಣಮಟ್ಟದ ಮತ್ತು ತ್ವರಿತ ಚಿಕಿತ್ಸಾ ಸೇವೆ ಒದಗಿಸುವ ಉದ್ದೇಶದಿಂದ ವಿಭಾಗದಲ್ಲಿ ತಜ್ಞ ವೈದ್ಯರ ತಂಡವನ್ನು ಬಲಪಡಿಸಲಾಗಿದೆ. ಮಕ್ಕಳ ಆರೋಗ್ಯಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳ ಜೊತೆಗೆ ನವಜಾತ ಶಿಶುಗಳ ವಿಶೇಷ […]

ಅಡಿಕೆ ಎಲೆ ಚುಕ್ಕೆ ರೋಗ ನಿಯಂತ್ರಣ ಔಷಧಿ ಖರೀದಿಗೆ ಸಹಾಯಧನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಉಡುಪಿ, ಕಾಪು ಹಾಗೂ ಬ್ರಹ್ಮಾವರ ತಾಲೂಕುಗಳಿಗೆ ಸಂಬಂಧಿಸಿದಂತೆ ಅಡಿಕೆ ಬೆಳೆಯಲ್ಲಿ ಕಂಡು ಬರುತ್ತಿರುವ ಎಲೆ ಚುಕ್ಕೆ ರೋಗದ ನಿಯಂತ್ರಣಕ್ಕಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಸಸ್ಯ ಸಂರಕ್ಷಣಾ ಕ್ರಮ ಕೈಗೊಳ್ಳುವ ಸಲುವಾಗಿ ಮೈಲು ತುತ್ತು ಮತ್ತು ಎಲೆಚುಕ್ಕೆ ರೋಗಕ್ಕೆ ಶಿಫಾರಸ್ಸು ಮಾಡಿರುವ ಸಸ್ಯಸಂರಕ್ಷಣಾ ಔಷಧಿ ಖರೀದಿಗೆ ಪ್ರತಿ ಹೆಕ್ಟೇರ್ ಗೆ ರೂ. 300 ಸಹಾಯಧನ (ಕೇಂದ್ರದ ಪಾಲು ರೂ. 1500/- ಹಾಗೂ ರಾಜ್ಯದ ಪಾಲು ರೂ. 1500/-) ಗರಿಷ್ಠ 2 ಹೆಕ್ಟೇರ್ ಗಳಿಗೆ ರೂ. […]

ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ: ಸಚಿವ ಕೆ.ಜೆ ಜಾರ್ಜ್

ಉಡುಪಿ: ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್‌ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಇಂದು ತ್ರಾಸಿ ಮರವಂತೆ ಬೀಚ್‌ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡುತ್ತಿದ್ದರು. ತ್ರಾಸಿ ಬೀಚ್‌ನಲ್ಲಿ ಪಾರ್ಕಿಂಗ್, ಫುಡ್‌ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮಂದಿರ ಸೇರಿದಂತೆ ಮತ್ತಿತರ […]

ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್‌ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು: ಸಚಿವ ಕೆ.ಜೆ ಜಾರ್ಜ್

ಉಡುಪಿ: ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್‌ಗೆ ಇಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬ್ಲೂ ಫ್ಲಾಗ್ ಬೀಚ್‌ನ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್‌ಗೆ ಪ್ರವಾಸಿಗರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ವಾರದ ಕಡೆಯ ದಿನದಲ್ಲಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು […]