ಕಾರ್ಕಳ ಕ್ರೈಸ್ಟ್ ಕಿಂಗ್: ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ

ಕಾರ್ಕಳ: ಇಲ್ಲಿನ ಕ್ರೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ತೋಟಗಾರಿಕಾ ಅಧ್ಯಯನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ನಿಟ್ಟಿನಲ್ಲಿಹೊಸ್ಮಾರಿನಲ್ಲಿರುವ ಲೀಲಾ ಫಾರ್ಮ್ಸ್ ಹಣ್ಣುಗಳ ತೋಟಗಾರಿಕಾ ಕ್ಷೇತ್ರಕ್ಕೆ ಭೇಟಿ ನೀಡಲಾಯಿತು. ಅಲ್ಲಿ ವಿವಿಧ ತಳಿಯ ದೇಶಿ ಮತ್ತು ವಿದೇಶಿ ಹಣ್ಣುಗಳು, ಅವುಗಳನ್ನು ಬೆಳೆಯುವ ವಿಧಾನ, ಕೊಯ್ಲು, ಸಂಸ್ಕರಣೆ ಹಾಗೂ ಮಾರುಕಟ್ಟೆಯ ಬಗ್ಗೆ ವಿದ್ಯಾರ್ಥಿಗಳು ಮಾಹಿತಿ ಪಡೆದುಕೊಂಡರು. ಲೀಲಾ ಫಾರ್ಮ್ಸ್ನ ಮಾಲಕರಾದ ಶಿವಾನಂದ ಶೆಣೈ ಹಾಗೂ ಅವರ ಪುತ್ರ ಶ್ರವಣ್ ಶೆಣೈ ತೋಟಗಾರಿಕಾ ವಿಧಾನಗಳ ಸಮಗ್ರ ಮಾಹಿತಿ ನೀಡಿದರು. […]

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿನಿಗೆ ಫೈನಲ್ ಪಿಚ್ ಡೇ ಸ್ಪರ್ಧೆಯಲ್ಲಿ ಬಹುಮಾನ

ಉಡುಪಿ,ಬಂಟಕಲ್: ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯ ಬಂಟಕಲ್ ಮತ್ತು ಕೆನರಾಇಂಜಿನಿಯರಿಂಗ್ ಕಾಲೇಜು, ಮಂಗಳೂರು ಜಂಟಿಯಾಗಿ ಕೆನರಾ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉದ್ಯಮಶೀಲತೆಯನ್ನು ಉತ್ತೇಜಿಸಲು ದಿನಾಂಕ 13 ಸೆಪ್ಟೆಂಬರ್ 2025 ರಂದು ಫೈನಲ್ ಫೀಚ್ ಡೇ ಕಾರ್ಯಕ್ರಮವನ್ನು ಆಯೋಜಿಸಿತ್ತು. ಈ ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ತಾವು ಕಲ್ಪಿಸಿರುವಸ್ಟಾರ್ಟ್ಅಪ್ ಕಲ್ಪನೆಗಳನ್ನು ರೂಪಿಸಿಕೊಳ್ಳಲು,ವಿಸ್ತರಿಸಿಕೊಳ್ಳಲು ಹಾಗೂ ಅನುಭವೀ ಮಾರ್ಗದರ್ಶಕರಮಾರ್ಗದರ್ಶನದಲ್ಲಿ ಕಾರ್ಯನಿರ್ವಹಿಸಲು ಒಂದು ಉತ್ತಮವೇದಿಕೆಯಾಗಿತ್ತು. ಸ್ಪರ್ಧೆಯಲ್ಲಿ ಸಂಸ್ಥೆಯ 32 ವಿದ್ಯಾರ್ಥಿಗಳು ಮತ್ತು ಕೆನರಾ ಇಂಜಿನಿಯರಿಂಗ್ ಕಾಲೇಜಿನ ಒಟ್ಟು140 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಅಂತಿಮಸುತ್ತಿನಲ್ಲಿ ಸಂಸ್ಥೆಯ(ಎಸ್ ಎಮ್‌ವಿಐಟಿಎಮ್) ಒಂದು ಸ್ಟಾರ್ಟ್ಅಪ್ […]

ಸೆ.21ರಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯಿಂದ “ಗುರು ಸಂದೇಶ ಸಾಮರಸ್ಯ ಜಾಥಾ”

ಉಡುಪಿ: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ನೇತೃತ್ವದಲ್ಲಿ ಜಿಲ್ಲೆಯ ಎಲ್ಲ ಬಿಲ್ಲವ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಬ್ರಹ್ಮಶ್ರೀ ನಾರಾಯಣಗುರುಗಳ 171ನೇ ಜನ್ಮದಿನಾಚರಣೆ ಪ್ರಯುಕ್ತ “ಗುರು ಸಂದೇಶ ಸಾಮರಸ್ಯ ಜಾಥಾ” ವನ್ನು ಇದೇ ಸೆ.21ರಂದು ಉಡುಪಿಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಪ್ರವೀಣ್ ಎಂ. ಪೂಜಾರಿ ತಿಳಿಸಿದರು‌. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಅಂದು ಮಧ್ಯಾಹ್ನ 2ಗಂಟೆಗೆ ಬನ್ನಂಜೆ ಜಯಲಕ್ಷ್ಮೀಯ ಪಾರ್ಕಿಂಗ್ ಪ್ರದೇಶದಲ್ಲಿ ಮಹಿಳಾ ಪೊಲೀಸ್ ಅಧಿಕಾರಿ ರೀನಾ ಸುವರ್ಣ […]

ಮೂಡುಬಿದಿರೆ:36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟ: ಆಳ್ವಾಸ್‌ನ 29 ಕ್ರೀಡಾಪಟುಗಳು ಆಯ್ಕೆ

ಮೂಡುಬಿದಿರೆ: ಅಥ್ಲೆಟಿಕ್ಸ್ ಫೆಡರೇಷನ್ ಆಫ್ ಇಂಡಿಯಾ ಹಾಗೂ ಆಂಧ್ರಪ್ರದೇಶ ಅಥ್ಲೆಟಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಆಂಧ್ರಪ್ರದೇಶದ ಗುಂಟೂರುನಲ್ಲಿ ಸೆಪ್ಟೆಂಬರ್ 23ರಿಂದ 25ರವರೆಗೆ ನಡೆಯುತ್ತಿರುವ 36ನೇ ದಕ್ಷಿಣ ವಲಯ ಕಿರಿಯರ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಆಳ್ವಾಸ್ ಶಿಕ್ಷಣ ಸಂಸ್ಥೆಯ 29 ಮಂದಿ ಕ್ರೀಡಾಪಟುಗಳು ಭಾಗವಹಿಸಲು ಆಯ್ಕೆಯಾಗಿದ್ದಾರೆ. ಒಂದೇ ಸಂಸ್ಥೆಯಿಂದ 29 ಕ್ರೀಡಾಪಟುಗಳು ಸ್ಪರ್ಧೆಗೆ ಅವಕಾಶ ಪಡೆದಿರುವುದು ಉಲ್ಲೇಖಾರ್ಹ ಸಾಧನೆಯಾಗಿದೆ. ಇವರಲ್ಲಿ 10 ಮಂದಿ ಬಾಲಕಿಯರು ಹಾಗೂ 19 ಮಂದಿ ಬಾಲಕರು ವಿವಿಧ ವಿಭಾಗಗಳಲ್ಲಿ ತಮ್ಮ ಪ್ರತಿಭೆ ಹಾಗೂ ಸಾಮರ್ಥ್ಯವನ್ನು ಪ್ರದರ್ಶಿಸಲಿದ್ದಾರೆ. ಬಾಲಕಿಯರ […]

ರಾಜ್ಯ ಸರ್ಕಾರ ಹಿಂದೂ ಧರ್ಮವನ್ನು ಒಡೆಯುವ ಕೆಲಸ ಮಾಡುತ್ತಿದೆ: ಸಂಸದ ಕೋಟ

ಉಡುಪಿ: ಕಾಂತರಾಜ್ ವರದಿಯನ್ನು ಈ ಸರ್ಕಾರ ತಿರಸ್ಕರಿಸಲೂ ಇಲ್ಲ‌.. ಅಂಗೀಕರಿಸಿಯೂ ಇಲ್ಲ, ಈಗ ಮತ್ತೊಮ್ಮೆ ಹೊಸ ವರದಿಗೆ ಸಿದ್ದರಾಮಯ್ಯ ಸರ್ಕಾರ ಹೊರಟಿದೆ. 42 ರಿಂದ 50 ಜಾತಿಯ ಜೊತೆ ಕ್ರಿಶ್ಚಿಯನ್ ಎಂಬ ಪದ ಸೇರಿಸಿದ್ದಾರೆ. ಇದರ ಬಗ್ಗೆ ನಮ್ಮ ಕಠಿಣವಾದ ವಿರೋಧ ಇದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ನೀಡಿದ್ದಾರೆ. ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲಿಂಗಾಯಿತ ಕ್ರಿಶ್ಚಿಯನ್ ,ಒಕ್ಕಲಿಗ ಕ್ರಿಶ್ಚಿಯನ್, ಕುರುಬ ಕ್ರಿಶ್ಚಿಯನ್ ,ಈಡಿಗ ಕ್ರಿಶ್ಚಿಯನ್ ,ಮಡಿವಾಳ ಕ್ರಿಶ್ಚಿಯನ್‌..ಹೀಗೆ ಜಾತಿಯ ಜೊತೆ […]