ಪೆರ್ಡೂರು ಶಾಲಾ ವಿದ್ಯಾರ್ಥಿಗಳಿಗೆ ಶೂ ವಿತರಣೆ

ಹೆಬ್ರಿ: ಪೆರ್ಡೂರು ಸೀನಿಯರ್ ಚೇಂಬರ್ ಇಂಟರ್ ನ್ಯಾಷನಲ್ ಅನಂತಸ್ಪರ್ಶ ಲೀಜನ್ ವತಿಯಿಂದ ಪೆರ್ಡೂರು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘು, ಮಂಗಳೂರು ಎಸ್‌ಕೆಜಿಐ ಇಂಡಸ್ಟ್ರಿಯಲ್ ಕೋ–ಆಪರೇಟಿವ್ ಸೊಸೈಟಿ ಸಹಭಾಗಿತ್ವದಲ್ಲಿ ಪೆರ್ಡೂರು ಶ್ರೀ ಅನಂತಪದ್ಮನಾಭ ದೇವಸ್ಥಾನ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ಶೂ ವಿತರಣೆ ನಡೆಯಿತು. ಪೆರ್ಡೂರು ಅನಂತಸ್ಪರ್ಶ ಲೀಜನ್ ಅಧ್ಯಕ್ಷ ಪುರುಷೋತ್ತಮ ಐತಾಳ್ ಅಧ್ಯಕ್ಷತೆ ವಹಿಸಿದ್ದರು. ಸೀನಿಯರ್ ಚೇಂಬರ್ ರಾಷ್ಟ್ರೀಯ ಉಪಾಧ್ಯಕ್ಷ ಪಿ.ಪಿ.ಎ್.ಹುಸೇನ್ ಹಾಯ್ಕಾಡಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಮೋದ್ ರೈ, ಎಸ್‌ಕೆಜಿಐ ಬ್ಯಾಂಕ್ […]

ಬಾಸ್ಕೆಟ್ ಬಾಲ್: ಕ್ರಿಯೇಟಿವ್ ವಿದ್ಯಾರ್ಥಿ ಹ್ಯಾನ್ಸೆಲ್ ಇಮ್ಯಾನುಯೆಲ್ ರಾಜ್ಯ ಮಟ್ಟಕ್ಕೆ ಆಯ್ಕೆ.

ಕಾರ್ಕಳ: ಜಿಲ್ಲಾ ಮಟ್ಟದ ಬಾಸ್ಕೆಟ್ ಬಾಲ್ ಪಂದ್ಯಾವಳಿಯು 15 ಸೆಪ್ಟೆಂಬರ್ 2025ರಂದು ಎನ್.ಎಂ.ಎ.ಎಂ.ಐ.ಟಿ. ನಿಟ್ಟೆಯಲ್ಲಿ ಜರುಗಿತು. ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿ ಈ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಮುಂಬರುವ ರಾಜ್ಯಮಟ್ಟದ ಸ್ಪರ್ಧೆಯಲ್ಲಿ ಇವರು ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ. ವಿದ್ಯಾರ್ಥಿಯ ಸಾಧನೆಯನ್ನು ಆಡಳಿತ ಮಂಡಳಿ, ಬೋಧಕ – ಬೋಧಕೇತರ ವೃಂದದವರು ಅಭಿನಂದಿಸಿ, ಶುಭಹಾರೈಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಜನ್ಮ ದಿನಾಚರಣೆ: ಆತ್ರಾಡಿಯಲ್ಲಿ ಆಟೋ ಚಾಲಕ ಗೋಪಾಲ ಕೃಷ್ಣ ಆಚಾರ್ಯ ಅವರಿಗೆ ಸನ್ಮಾನ

ಉಡುಪಿ: ಪ್ರಧಾನಿ ನರೇಂದ್ರ ಮೋದೀಜಿಯವರ ಜನ್ಮ ದಿನವಾದ ಸೆಪ್ಟೆಂಬರ್ 17 ರಿಂದ ಅಕ್ಟೋಬರ್ 2 ದಿನಾಂಕದ ವರೆಗೆ ಕಳೆದ 5 ವರ್ಷಗಳಿಂದ ತನ್ನ ಆಟೋ ರಿಕ್ಷಾಕ್ಕೆ ಮೋದಿಜಿಯವರ ಬ್ಯಾನರ್ ನ್ನು ಕಟ್ಟಿಕೊಂಡು ಬಾಡಿಗೆ ಮಾಡುತ್ತಿರುವ ಆತ್ರಾಡಿಯ ಆಟೋ ಚಾಲಕ ಜನ ಸಂಘ ಮೂಲದಿಂದ ಪಕ್ಷದ ಕಾರ್ಯಕರ್ತರಾಗಿರುವ ಗೋಪಾಲ ಕೃಷ್ಣ ಆಚಾರ್ಯ ಅವರನ್ನು ಆತ್ರಾಡಿ ಬಿಜೆಪಿ ಕಾರ್ಯಕರ್ತರು ಬಿಜೆಪಿ ಜಿಲ್ಲಾ ಅಧ್ಯಕ್ಷರಾದ ಕುತ್ಯಾರು ನವೀನ್ ಶೆಟ್ಟಿಯವರ ನೇತೃತ್ವದಲ್ಲಿ ಶಾಲು ಹೊದಿಸಿ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಬಿಜೆಪಿ […]

ಉಡುಪಿಯ Brown Wood ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ನೇಮಕಾತಿ

ಉಡುಪಿ:ಉಡುಪಿಯ Brown Wood ನಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಹುದ್ದೆಗೆ ಪುರುಷ ಅಭ್ಯರ್ಥಿಗಳ ನೇಮಕಾತಿ ನಡೆಯಲಿದೆ.1 ವರ್ಷದ ಅನುಭವವಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ.ಕೆಲಸದ ಅವಧಿ ಬೆಳಿಗ್ಗೆ 9:30 ರಿಂದ ರಾತ್ರಿ 8:30ರವರೆಗೆ.ನಿಮ್ಮ ರೆಸ್ಯೂಮ್ ಅನ್ನು ಇಲ್ಲಿಗೆ ಕಳುಹಿಸಿ[email protected]ಸಂಪರ್ಕಿಸಿ:+91 9036772710

ಯಕ್ಷಗಾನದಲ್ಲೂ ವೈರಲ್ಲಾಯ್ತು“ಹೂವಿನ ಬಾಣದಂತೆ” ಹಾಡು: ನಕ್ಕು ಸುಸ್ತಾದ ಪ್ರೇಕ್ಷಕರು! ಕೆಲವರು ಗರಂ

ಕಳೆದ ಒಂದು ವಾರದಿಂದಲೂ ಸೋಶಿಯಲ್ ಮೀಡಿಯಾದಲ್ಲಿ ವೈರಲ್ಲಾಗುತ್ತಿರುವ “ಹೂವಿನ ಬಾಣದಂತೆ ಯಾರಿಗೂ ಕಾಣದಂತೆ” ಹಾಡು ಈಗ ಯಕ್ಷಗಾನದ ರಂಗಸ್ಥಳದಲ್ಲೂ ಸದ್ದು ಮಾಡಿದೆ. ಆ ಮೂಲಕ ಸೋಶಿಯಲ್ ಮೀಡಿಯಾದ ಈ ಟ್ರೆಂಡಿಂಗ್ ಹಾಡಿಗೆ  ಯಕ್ಷಪ್ರಿಯರು ನಕ್ಕು ನಕ್ಕು ಸುಸ್ತು ಹೊಡೆದಿದ್ದಾರೆ. ಹೌದು. ಸೋಶಿಯಲ್ ಮೀಡಿಯಾದಲ್ಲಿ ಯಕ್ಷಗಾನದ ತುಣುಕೊಂದು ವೈರಲ್ ಆಗಿದೆ. ಯಕ್ಷಗಾನ ಕಲಾವಿದರಾದ ಉದಯ ಹೆಗಡೆ ಕಡಬಾಳ, ಪಾತ್ರವೊಂದನ್ನು ನಿರ್ವಹಿಸುತ್ತ ನನಗೆ ರೂಪದಿಂದಲೇ ತೊಂದರೆ ಕೊಡುತ್ತಿದ್ದಾಳೆ ಅವಳು “ಯಾವ ರೀತಿ ಅಂದ್ರೆ “ಹೂವಿನ ಬಾಣದಂತೆ..ಯಾರಿಗೂ ಕಾಣದಂತೆ” ಎಂದು ಹಾಡನ್ನು […]