ತ್ರಾಸಿ – ಮರವಂತೆ ಬೀಚ್ ಅಭಿವೃದ್ಧಿ ಕಾಮಗಾರಿ ಮುಂದಿನ ಮೂನಾಲ್ಕು ತಿಂಗಳ ಒಳಗಾಗಿ ಪೂರ್ಣ: ಸಚಿವ ಕೆ.ಜೆ ಜಾರ್ಜ್

ಉಡುಪಿ: ಸಮುದ್ರ ಮತ್ತು ನದಿಯ ನಡುವೆ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಅಂಚಿನಲ್ಲಿರುವ ತ್ರಾಸಿ ಮತ್ತು ಮರವಂತೆ ಬೀಚ್ನ ಅಭಿವೃದ್ಧಿ ಕಾಮಗಾರಿಗಳನ್ನು ಮುಂದಿನ ಮೂರ್ನಾಲ್ಕು ತಿಂಗಳ ಒಳಗಾಗಿ ಪೂರ್ಣಗೊಳಿಸಿ ಪ್ರವಾಸಿಗರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಪ್ರವಾಸೋದ್ಯಮ ಹಾಗೂ ಇಂಧನ ಇಲಾಖೆ ಸಚಿವ ಕೆ.ಜೆ. ಜಾರ್ಜ್ ಹೇಳಿದರು. ಅವರು ಇಂದು ತ್ರಾಸಿ ಮರವಂತೆ ಬೀಚ್ಗೆ ಭೇಟಿ ನೀಡಿ, ಅಭಿವೃದ್ಧಿ ಕಾಮಗಾರಿಗಳನ್ನು ಪರಿಶೀಲಿಸಿ ಮಾತನಾಡುತ್ತಿದ್ದರು. ತ್ರಾಸಿ ಬೀಚ್ನಲ್ಲಿ ಪಾರ್ಕಿಂಗ್, ಫುಡ್ಕೋರ್ಟ್, ಸೈಕಲ್ ಟ್ರಾö್ಯಕ್, ಬಯಲು ರಂಗಮಂದಿರ ಸೇರಿದಂತೆ ಮತ್ತಿತರ […]
ಪಡುಬಿದ್ರಿ ಬ್ಲೂ ಫ್ಲಾಗ್ ಬೀಚ್ನಲ್ಲಿ ಮೂಲ ಸೌಕರ್ಯಗಳ ಅಭಿವೃದ್ಧಿಗಳನ್ನು ಆದ್ಯತೆಯ ಮೇಲೆ ಕೈಗೊಳ್ಳಲಾಗುವುದು: ಸಚಿವ ಕೆ.ಜೆ ಜಾರ್ಜ್

ಉಡುಪಿ: ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್ಗೆ ಇಂದು ಪ್ರವಾಸೋದ್ಯಮ ಹಾಗೂ ಇಂಧನ ಸಚಿವ ಕೆ.ಜೆ. ಜಾರ್ಜ್ ಭೇಟಿ ನೀಡಿ ಪರಿಶೀಲನೆ ನಡೆಸಿ ಬ್ಲೂ ಫ್ಲಾಗ್ ಬೀಚ್ನ ಪ್ರದೇಶಗಳಲ್ಲಿ ಪ್ರವಾಸಿಗರಿಗೆ ಅಗತ್ಯ ಮೂಲಸೌಕರ್ಯ ಸೇರಿದಂತೆ ಮತ್ತಿತರ ಸೌಲಭ್ಯಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಇದೇ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್ಗೆ ಪ್ರವಾಸಿಗರ ಸಂಖ್ಯೆ ದಿನೇದಿನೇ ಹೆಚ್ಚುತ್ತಿದೆ. ವಾರದ ಕಡೆಯ ದಿನದಲ್ಲಿ ಹೆಚ್ಚು ಪ್ರವಾಸಿಗರು ಆಗಮಿಸುತ್ತಿದ್ದಾರೆ. ಪ್ರವಾಸಿಗರ ಅನುಕೂಲಕ್ಕಾಗಿ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳನ್ನು […]
ಹಿರಿಯ ಸಾಹಿತಿ ಕೀರ್ತಿ ಶೇಷ ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ

ಹೆಬ್ರಿ: ನನಗೆ ಸ್ವಲ್ಪ ಸಮಾಜಕ್ಕೆ ಸರ್ವಸ್ವ ಎಂದು ಬದುಕಿದ ನಾಡಿನ ಶ್ರೇಷ್ಠ ಸಾಹಿತಿ ಕೀರ್ತಿಶೇಷ ಅಂಬಾತನಯರು ಎಂದೂ ಪ್ರಶಸ್ತಿಗೆ ಅರ್ಜಿ ಹಾಕಿದವರಲ್ಲ. ಅವರ ಸ್ಮರಣಾರ್ಥಕಳೆದ ಹಲವಾರು ವರ್ಷಗಳಿಂದ ಯಾವುದೇ ಅರ್ಜಿ ಸಲ್ಲಿಸದೆ ತನ್ನಷ್ಟಕ್ಕೆ ಶಿಕ್ಷಣ ಜೊತೆ ಸಾಂಸ್ಕೃತಿಕವಾಗಿ ಸಾಮಾಜಿಕವಾಗಿ ಗುರುತಿಸಿಕೊಂಡ ಶಿಕ್ಷಕರನ್ನು ಗುರುತಿಸಿ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಚಾಣಕ್ಯ ಸಂಸ್ಥೆಯ ಸಮಾಜಮುಖಿ ಚಿಂತನೆ ಶ್ಲಾಘನೀಯಎಂದು ನಿಟ್ಟೆ ಪ.ಪೂ. ಕಾಲೇಜಿನ ಕನ್ನಡ ಉಪನ್ಯಾಸಕಿ ಶ್ರೀ ಮುದ್ರಾಡಿ ಹೇಳಿದರು. ಅವರು ಹೆಬ್ರಿ ಎಸ್. ಆರ್. ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ […]
ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಇದೇ ಸೆಪ್ಟೆಂಬರ್ 4 ರಂದು ಕಟಪಾಡಿಯ ಎಸ್.ವಿ. ಎಸ್. ಪದವಿ ಪೂರ್ವ, ಕಾಲೇಜಿನಲ್ಲಿ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ತ್ರಿಶಾ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಿ.ಎ.ಗೋಪಾಲಕೃಷ್ಣ ಭಟ್ ಅವರು ಇಂತಹ ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುದಲ್ಲದೇ ಮಾನಸಿಕವಾಗಿ ಸದೃಢರಾಗಿಸುತ್ತದೆ. ಜಯಗಳಿಸಿದ […]
ಮೊಂತಿ ಹಬ್ಬ: ಮೇರಿ ಮಾತೆಯ ಜನ್ಮದೊಂದಿಗೆ ಕುಟುಂಬ, ನಂಬಿಕೆ ಮತ್ತು ಸೃಷ್ಟಿಯ ನವೀಕರಣ – ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ

ಉಡುಪಿ: ಸೆಪ್ಟೆಂಬರ್ 8ರಂದು ವಿಶ್ವದಾದ್ಯಂತ ಕ್ರೈಸ್ತ ಸಮುದಾಯವು ಪವಿತ್ರ ಕನ್ಯಾಮರಿಯಮ್ಮನ ಜನ್ಮದ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುತ್ತದೆ. ಕರಾವಳಿ ಕರ್ನಾಟಕದ ಕ್ರೈಸ್ತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಈ ಹಬ್ಬವು ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಪ್ರೀತಿಯಿಂದ “ಮೊಂತಿ ಹಬ್ಬ” ಎಂದು ಕರೆಯಲ್ಪಡುತ್ತದೆ. ಮರಿಯಮ್ಮನ ಜನ್ಮವನ್ನು ಸ್ಮರಿಸುವ ಈ ಹಬ್ಬವು ದೇವರ ಕೃಪೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಕುಟುಂಬದ ಏಕತೆ, ಹೆಣ್ಣುಮಗುವಿನ ಘನತೆ, ಹೊಸ ಬೆಳೆಯ ಕೃತಜ್ಞತೆ ಮತ್ತು ಸೃಷ್ಟಿಯ ಸಂರಕ್ಷಣೆಯ ಮೌಲ್ಯಗಳನ್ನು ನಮ್ಮ ಮುಂದೆ ತೆರೆದಿಡುತ್ತದೆ. ಮರಿಯಮ್ಮನ ಜನ್ಮವು ದೇವರ […]