ಉಡುಪಿ:ಪ.ಜಾ/ಪ.ಪಂ ಅಭ್ಯರ್ಥಿಗಳಿಗೆ ಉಚಿತ ಕೌಶಲ್ಯ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಕಾರ್ಕಳದ ಕಾಬೆಟ್ಟುವಿನಲ್ಲಿರುವ ಸರ್ಕಾರಿ ಪಾಲಿಟೆಕ್ನಿಕ್ ಆವರಣದಲ್ಲಿ ಕಾರ್ಯನಿರ್ವಹಿಸುತ್ತಿರುವಕರ್ನಾಟಕ ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ(ಕೆ.ಜಿ.ಟಿ.ಟಿ.ಐ) ಯಲ್ಲಿ ಡಿಪ್ಲೋಮಾ/ಪದವಿ ಪೂರೈಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಹಾಗೂ ಯುವನಿಧಿ ಫಲಾನುಭವಿಗಳಿಗೆ ಉಚಿತ ಅಲ್ಪಾವಧಿ ಕೌಶಲ್ಯ ತರಬೇತಿ ನೀಡಲಾಗುತ್ತಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ನಿರ್ದೇಶಕರು, ಕೆ.ಜಿ.ಟಿ.ಟಿ.ಐ, ಕಾರ್ಕಳ ದೂ.ಸಂ: 08258 -200451 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಕೆಜಿಟಿಟಿಐ ನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

ಉಡುಪಿ:ಬೆಂಗಳೂರು ಮೂಲದ ದಂಪತಿಗಳಿಗೆ ಮಗುವಿಗೆ ದತ್ತು ಆದೇಶ ನೀಡಿದ ಜಿಲ್ಲಾಧಿಕಾರಿಗಳು

ಉಡುಪಿ: ಬೆಂಗಳೂರು ಮೂಲದ ದಂಪತಿಗಳಿಗೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅವರು ಇತ್ತೀಚೆಗೆ ತಮ್ಮ ಕಚೇರಿಯಲ್ಲಿ ಮಗುವನ್ನು ದತ್ತು ಆದೇಶ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಗುವಿಗೆ ಅವಶ್ಯವಿರುವ ಪ್ರೀತಿ ಮತ್ತು ಆರೈಕೆಯು ಕುಟುಂಬದ ವಾತಾವರಣವು ಕಲ್ಪಿಸುವುದರಿಂದ ಕೌಟುಂಬಿಕ ವ್ಯವಸ್ಥೆಯಲ್ಲಿ ಮಕ್ಕಳು ಬೆಳೆಯಬೇಕು. ದತ್ತು ಪ್ರಕ್ರಿಯೆಯು ಕಾನೂನು ಬದ್ಧವಾಗಿ ಬಾಲನ್ಯಾಯ (ಮಕ್ಕಳ ಪಾಲನೆ ಮತ್ತು ರಕ್ಷಣೆ)ತಿದ್ದುಪಡಿ ಕಾಯಿದೆ 2021ರ ಸೆಕ್ಷನ್ 56(1) 58 ಮತ್ತು 61ರ ಅಡಿಯಲ್ಲಿ ಕುಟುಂಬದ ಪ್ರೀತಿ ವಂಚಿತ, ಪೋಷಕರನ್ನು ಕಳೆದುಕೊಂಡ, ಪಾಲನೆ ಪೋಷಣೆ […]

ಉಡುಪಿ:ತಾತ್ಕಾಲಿಕ ಸುಡುಮದ್ದು ಮಾರಾಟ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನ

ಉಡುಪಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲಾ ವ್ಯಾಪ್ತಿಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟಮಾಡಲು ಅಪೇಕ್ಷಿಸುವವರಿಂದ ಸುಡುಮದ್ದು ಮಾರಾಟದ ಪರವಾನಿಗೆ ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿದಾರರು LE-5 ರಲ್ಲಿ ತಾತ್ಕಾಲಿಕ ಸುಡುಮದ್ದು ಪರವಾನಿಗೆಯನ್ನು ಪಡೆಯಲು ಸಾಕಷ್ಟು ಮುಂಚಿತವಾಗಿ AE-5 ನಮೂನೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಿಂದ ಪಡೆದು, ತಾಲೂಕು ಮಟ್ಟದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವ ಪರವಾನಿಗೆ ನೀಡಲು ತಹಶೀಲ್ದಾರರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲಾಗಿದ್ದು, ಸದ್ರಿ ಸಮಿತಿಗೆ ಅಗತ್ಯ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ ನಿರಾಕ್ಷೇಪಣಾಪತ್ರವನ್ನು ಪಡೆದು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸಿದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ […]

ಉಡುಪಿ:ಹಿರಿಯ ನಾಗರಿಕರರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಿ : ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ

ಉಡುಪಿ: ಕ್ರೀಡಾಕೂಟಗಳಲ್ಲಿ ಹಿರಿಯ ನಾಗರಿಕರು ಸಕ್ರೀಯವಾಗಿ ಭಾಗವಹಿಸುವುದರಿಂದ ನೆರೆಹೊರೆಯವರೊಂದಿಗೆ ಉತ್ತಮ ಭಾಂದವ್ಯ ಹೊಂದುವುದರೊಂದಿಗೆ ಜೀವನೋತ್ಸಾಹ ಹೆಚ್ಚುವಂತೆ ಮಾಡುತ್ತದೆ. ವಯಸ್ಸು ಕೇವಲ ದೇಹಕ್ಕೆ ಮಾತ್ರ ಮನಸ್ಸಿಗಲ್ಲ ಎಂಬ ಚಿಂತನೆಯೊಂದಿಗೆ ಯಾವುದೇ ಅಂಜಿಕೆಯಿಲ್ಲದೇ ಹಿರಿಯ ನಾಗರಿಕರು ಮುಕ್ತವಾಗಿ ಕ್ರೀಡಾಕೂಟಗಳಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಹೇಳಿದರು. ಅವರು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ […]

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆ.

ಉಡುಪಿ: ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜಿಗೆ ಕಸಾಪ ವತಿಯಿಂದ ಪುಸ್ತಕಗಳ ಕೊಡುಗೆಯನ್ನು ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್ ಪಿ. ಕಾಲೇಜು ಪ್ರಾoಶುಪಾಲ ಜಗದೀಶ ಕುಮಾರ್ ರವರಿಗೆ ಹಸ್ತಾಂತಿಸಿದರು. ಈ ಸಂದರ್ಭದಲ್ಲಿ ಕಸಾಪ ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು, ರಂಜನಿ ವಸಂತ್, ಸಂಘಟನಾ ಕಾರ್ಯದರ್ಶಿ ಸತೀಶ್ ಕೊಡವೂರು, ದೀಪಾ ಕರ್ಕಿ, ಎನ್. ಎಸ್. ಎಸ್. ಕಾರ್ಯಕ್ರಮಾಧಿಕಾರಿ ಭವ್ಯಾ ನಾಗರಾಜ ಎನ್. ಎಸ್. ಎಸ್. ನಾಯಕಿ ಮೇಘಾ ಹಾಗು ಉಪನ್ಯಾಸಕಿ ಸುಧಾ ಆಡುಕಳ ಉಪಸ್ಥಿತರಿದ್ದರು.