ಜಿಎಸ್ ಟಿ ಸುಧಾರಣೆಯಿಂದ ದೇಶದ ನಾಗರಿಕರಿಗೆ ಸಿಕ್ಕಿತು ದೊಡ್ಡ ಗೆಲವು: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ಚೆನ್ನೈ: ‘ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರಗಳ ಪರಿಷ್ಕರಣೆಯಿಂದ ದೇಶದ ಪ್ರತಿಯೊಬ್ಬ ನಾಗರಿಕನಿಗೂ ದೊಡ್ಡ ಗೆಲುವು ಸಿಕ್ಕಂತಾಗಿದೆ’ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಣ್ಣಿಸಿದ್ದಾರೆ.ಚೆನ್ನೈ ಸಿಟಿಜನ್ಸ್ ಫೋರಮ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಪ್ರತಿಯೊಂದು ರಾಜ್ಯದಲ್ಲಿ ತನ್ನದೇ ಆದ ಹಬ್ಬಗಳನ್ನು ಆಚರಿಸುತ್ತಿರುವುದರಿಂದ ದೀಪಾವಳಿ ಹಬ್ಬಕ್ಕೂ ಮುನ್ನವೇ ಜಿಎಸ್‌ಟಿ ಸುಧಾರಣೆಗಳನ್ನು ಜಾರಿಗೆ ತರಲು ಪ್ರಧಾನಿ ನರೇಂದ್ರ ಮೋದಿಯವರ ಸೂಚನೆಗೂ ಮುಂಚಿತವಾಗಿಯೇ ನಿರ್ಧರಿಸಲಾಗಿತ್ತು’ ಎಂದು ಅವರು ಹೇಳಿದ್ದಾರೆ. ‘ಜನರು ಪ್ರತಿನಿತ್ಯ ಬಳಸುವ ಎಲ್ಲಾ ಉತ್ಪನ್ನಗಳ […]
ಆತ್ಯಹತ್ಯೆಗೆ ಯತ್ನಿಸಿದ ಒಂದೇ ಕುಟುಂಬದ ಯುವತಿಯರು: ಒಬ್ಬರ ಸಾವು, ಇಬ್ಬರು ಗಂಭೀರ!

ರಾಯಚೂರು:ಒಂದೇ ಮನೆಯ ಮೂವರು ಯುವತಿಯರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ ಮಾಡಿದಂತಹ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಕೆ ಇರಬಗೇರಾ ಗ್ರಾಮದಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಘಟನೆಯಲ್ಲಿ ಇರಬಗೇರಾ ಗ್ರಾಮದ ರೇಣುಕಾ ರಂಗಪ್ಪ (18) ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಮತ್ತಿಬ್ಬರು ಯುವತಿಯರು ತೀವ್ರ ಅಸ್ವಸ್ಥರಾಗಿದ್ದು, ನಗರದ ರಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸುನಿತಾ ಕರಿಯಪ್ಪ ಸ್ಥಿತಿ ಗಂಭೀರವಾಗಿದೆ. ಅಲ್ಲದೆ, ತಿಮ್ಮವ್ವ ನಾಗಪ್ಪ ಎಂಬ ಯುವತಿಯೂ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ಸ್ಥಳೀಯರು ಹೇಳಿಕೆ ಕೊಟ್ಟಿದ್ದಾರೆ. ದೇವದುರ್ಗ ಪೊಲೀಸ್ […]
ಪಾಕಿಸ್ತಾನವನ್ನು ಬಗ್ಗುಪಡಿದ ಭಾರತ: ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಸೇನಾಪಡೆಗೆ ಅರ್ಪಿಸಿದ ಸೂರ್ಯ ಕುಮಾರ್ ಯಾದವ್

ದುಬೈ: ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಏಷ್ಯಾ ಕಪ್ ಟಿ-20 ಅಂತಾರಾಷ್ಟ್ರೀಯ ಪಂದ್ಯದಲ್ಲಿ ಪಾಕಿಸ್ತಾನವನ್ನು ಬಗ್ಗುಪಡಿದ ಭಾರತ ಆಪರೇಷನ್ ಸಿಂಧೂರ್ ಬಳಿಕ ಮತ್ತೊಂದು ಸೋಲಿನ ರುಚಿ ತೋರಿಸಿದೆ. ಏಪ್ರಿಲ್‌ನಲ್ಲಿ ನಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿ ಮತ್ತು ‘ಆಪರೇಷನ್ ಸಿಂಧೂರ’ ಹಿನ್ನೆಲೆಯಲ್ಲಿ ಪಂದ್ಯ ಬಹಿಷ್ಕರಿಸಬೇಕೆಂಬ ಒತ್ತಡದ ನಡುವೆ ನಡೆದ ಪಂದ್ಯದಲ್ಲಿ ಭಾರತ ಕ್ರಿಕೆಟ್ ಮೂಲಕವೂ ಪಾಕಿಸ್ತಾನಕ್ಕೆ ಮತ್ತೊಂದು ಪೆಟ್ಟು ನೀಡಿದೆ. ಟಾಸ್ ಸಂದರ್ಭದಲ್ಲಿ ಪಾಕಿಸ್ತಾನದ ನಾಯಕ ಸಲ್ಮಾನ್ ಅಲಿ ಅಘಾ ಅವರೊಂದಿಗೆ ಹಸ್ತಲಾಘವ ಮಾಡದ ಸೂರ್ಯ ಕುಮಾರ್ […]
ಒಂದೇ ಹಾಡಿನಿಂದ ಫೇಮಸ್’ಆದ ಯುವತಿ! ಇನ್’ಸ್ಟಾದಲ್ಲಿ ಫಾಲೋವರ್ಸ್ ಗಳ ಸುರಿಮಳೆ..

ಬೆಂಗಳೂರು: ಸೋಶಿಯಲ್ ಮೀಡಿಯಾವೇ ಕೆಲವರನ್ನು ರಾತ್ರೋರಾತ್ರಿ ಸ್ಟಾರ್‌ಗಳನ್ನಾಗಿ ಮಾಡಿಬಿಡುತ್ತದೆ. ಕೆಲವರು ಒಂದೇ ಒಂದು ವೀಡಿಯೋದಿಂದಲೇ ಪಾಪ್ಯುಲರ್ ಆಗಿಬಿಡುತ್ತಾರೆ. ಇದಕ್ಕೆ ʼಹೂವಿನ ಬಾಣದಂತೆʼ ಹಾಡಿದ ಹುಡುಗಿಯೇ ಸಾಕ್ಷಿ. ಈ ಹಾಡನ್ನು ತನ್ನದೇ ಧಾಟಿಯಲ್ಲಿ ಹಾಡಿದ ಹುಡುಗಿ ಈಗ ಸೋಶಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗಿದ್ದಾಳೆ. ಕೆಲವೇ ದಿನಗಳಲ್ಲಿ ಈಕೆಯ ಇನ್‌ಸ್ಟಾಗ್ರಾಂ ಫಾಲೋವರ್ಸ್ ಸಂಖ್ಯೆ 150ರಿಂದ 40000ಕ್ಕೆ ಜಿಗಿದಿದೆ. ಕಳೆದ ಒಂದು ವಾರದಿಂದ ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲರ ಬಾಯಲ್ಲಿ ‘ಹೂವಿನ ಬಾಣದಂತೆ’ ಹಾಡು ಕೇಳಿಬರುತ್ತಿದೆ. ‘ಬಿರುಗಾಳಿ’ ಚಿತ್ರದ ಈ […]
ದೇಶದ ಕನಸು ಕಟ್ಟಿದ ಇಂಜಿನಿಯರ್ಸ್ ಗಳನ್ನು ನೆನಪಿಸುವ ದಿನ :ಇಂಜಿನಿಯರ್ಸ್ ಡೇ ವಿಶೇಷ ಬರಹ

ದೇಶದ ಪ್ರಗತಿ, ಅಭಿವೃದ್ಧಿ ಹಾಗೂ ಆರ್ಥಿಕ ಸದೃಢತೆಗೆ ಇಂಜಿನಿಯರ್ಗಳ ಪಾತ್ರ ಅತ್ಯಂತ ಮಹತ್ವದ್ದು. ಇಂಜಿನಿಯರಿಂಗ್ ಎಂದರೆ ಪರಿಶ್ರಮ, ಕ್ರಿಯಾಶೀಲತೆ ಮತ್ತು ವಿಜ್ಞಾನವನ್ನು ಸಮರ್ಥವಾಗಿ ಬಳಸಿ ಸಮಾಜಕ್ಕೆ ಉಪಯುಕ್ತ ಪರಿಹಾರಗಳನ್ನು ನೀಡುವುದು. ಇಂಜಿನಿಯರ್ಗಳ ಸೇವೆಯನ್ನು ಗೌರವಿಸುವ ಸಲುವಾಗಿ ಪ್ರತಿ ವರ್ಷ ಸೆಪ್ಟೆಂಬರ್ 15 ರಂದು ಇಂಜಿನಿಯರ್ಸ್ ಡೇ ಅನ್ನು ಆಚರಿಸಲಾಗುತ್ತದೆ. ಈ ದಿನವನ್ನು ಭಾರತದ ಮಹಾನ್ ಇಂಜಿನಿಯರ್ ಸರ್ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ ಸ್ಮರಣಾರ್ಥವಾಗಿ ಆಚರಿಸಲಾಗುತ್ತದೆ. 1861ರ ಸೆಪ್ಟೆಂಬರ್ 15ರಂದು ಜನಿಸಿದ ಅವರು ಜೀವನದೊಳಗೆ ಅನೇಕ ಸಾಧನೆಗಳನ್ನು ಮಾಡಿದ್ದಾರೆ. […]