ದಸರಾ ರಜೆ ನೀಡದೆ ಸೆಮಿಸ್ಟರ್ ಪರೀಕ್ಷೆ: ಸೈಂಟ್ ಆಗ್ನೆಸ್ ಕಾಲೇಜು ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮಂಗಳೂರು: ದಸರಾ ಹಬ್ಬದ ಸಂಭ್ರಮದ ನಡುವೆಯೇ ಪದವಿ ಸೆಮಿಸ್ಟರ್ ಪರೀಕ್ಷೆಗಳನ್ನು ನಿಗದಿಪಡಿಸಿರುವುದನ್ನು ವಿರೋಧಿಸಿ, ಮಂಗಳೂರಿನ ಬೆಂದೂರ್ವೆಲ್ನಲ್ಲಿರುವ ಖ್ಯಾತ ಸೈಂಟ್ ಆಗ್ನೆಸ್ ಕಾಲೇಜಿನ ವಿದ್ಯಾರ್ಥಿನಿಯರು ಪರೀಕ್ಷೆ ಬಹಿಷ್ಕರಿಸಿ ಕಾಲೇಜು ಗೇಟ್ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಲೇಜಿನಲ್ಲಿ ಅಕ್ಟೋಬರ್ 12ರಿಂದ 28ರವರೆಗೆ ಪದವಿ ವಿದ್ಯಾರ್ಥಿಗಳಿಗೆ ಸೆಮಿಸ್ಟರ್ ಪರೀಕ್ಷೆಗಳನ್ನು ಆಯೋಜಿಸಲಾಗಿದೆ. ಕರಾವಳಿಯ ಪ್ರಮುಖ ಹಬ್ಬವಾದ ಮಂಗಳೂರು ದಸರಾ ಸಂದರ್ಭದಲ್ಲಿ ರಜೆ ನೀಡದೆ ಪರೀಕ್ಷೆ ನಡೆಸಲು ಮುಂದಾಗಿರುವ ಕಾಲೇಜು ಆಡಳಿತ ಮಂಡಳಿಯ ನಿರ್ಧಾರಕ್ಕೆ ವಿದ್ಯಾರ್ಥಿಗಳು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ದಸರಾ ಹಬ್ಬದ ಆಚರಣೆ ಹಾಗೂ […]
ಉಡುಪಿ-ಉಚ್ಚಿಲ ದಸರಾ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅದ್ದೂರಿ ಚಾಲನೆ; ಅ.11ರಿಂದ 21ರವರೆಗೆ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳ ಸಂಭ್ರಮ

ಉಡುಪಿ: ಕರಾವಳಿಯ ಪ್ರಮುಖ ಧಾರ್ಮಿಕ ಹಾಗೂ ಸಾಂಸ್ಕೃತಿಕ ಉತ್ಸವಗಳಲ್ಲಿ ಒಂದಾಗಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026ಕ್ಕೆ ಭಾನುವಾರ ಅದ್ದೂರಿ ಚಾಲನೆ ದೊರೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವತಿಯಿಂದ ಅ. 11ರಿಂದ 21ರವರೆಗೆ ನಡೆಯಲಿರುವ ಉತ್ಸವಕ್ಕೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಚಾಲನೆ ನೀಡಿದರು.ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಸರ್ಕಾರ ಹಾಗೂ ಭಕ್ತಾಭಿಮಾನಿಗಳ ಸಹಕಾರದೊಂದಿಗೆ ಶ್ರೀ ಕ್ಷೇತ್ರ ಉಚ್ಚಿಲದ ಶ್ರೀಮತಿ ಶಾಲಿನಿ ಡಾ. ಜಿ. ಶಂಕರ್ ಸಭಾಂಗಣದಲ್ಲಿ 11 ದಿನಗಳ ಕಾಲ ವಿವಿಧ ಧಾರ್ಮಿಕ, ಸಾಂಸ್ಕೃತಿಕ […]
ಉಡುಪಿ: ದನ ಕಳವು ಮಾಡಿ ಕಸಾಯಿಖಾನೆಗೆ ಸಾಗಿಸಲು ಯತ್ನ: ಇಬ್ಬರ ಬಂಧನ – ಹಿರಿಯಡಕ ಪೊಲೀಸರಿಂದ ನಾಲ್ಕು ಜಾನುವಾರುಗಳ ರಕ್ಷಣೆ, ಟೆಂಪೊ ವಶಕ್ಕೆ

ಉಡುಪಿ: ಕಾರ್ಕಳ ತಾಲ್ಲೂಕಿನ ಕುಕ್ಕುಜೆ ಸಮೀಪದಿಂದ ಜಾನುವಾರುಗಳನ್ನು ಕಳವು ಮಾಡಿ ವಧೆಗಾಗಿ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಬಂಧಿಸಿರುವ ಹಿರಿಯಡಕ ಪೊಲೀಸರು, ನಾಲ್ಕು ಜಾನುವಾರುಗಳನ್ನು ರಕ್ಷಿಸಿ ಸಾಗಾಟಕ್ಕೆ ಬಳಸಿದ್ದ ಗೂಡ್ಸ್ ಟೆಂಪೊವನ್ನು ವಶಪಡಿಸಿಕೊಂಡಿದ್ದಾರೆ.ಅ. 9ರಂದು ಸಂಜೆ 7.30ರ ಸುಮಾರಿಗೆ ಹರಿಖಂಡಿಗೆಯಿಂದ ಹಿರಿಯಡಕ ಕಡೆಗೆ ಕೆಎ 20 ಎಎ 5197 ನೋಂದಣಿ ಸಂಖ್ಯೆಯ ಗೂಡ್ಸ್ ಟೆಂಪೊದಲ್ಲಿ ಅಕ್ರಮವಾಗಿ ಜಾನುವಾರುಗಳನ್ನು ಸಾಗಿಸಲಾಗುತ್ತಿದೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಬೊಮ್ಮಾರಬೆಟ್ಟು ಗ್ರಾಮದ ಕೊಟ್ನಕಟ್ಟೆ ಬಳಿ ವಾಹನವನ್ನು ನಿಲ್ಲಿಸುವಂತೆ ಸೂಚಿಸಿದರೂ ಚಾಲಕ ನಿಲ್ಲಿಸದೆ […]
ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅ. 11ರಿಂದ ಅ. 21ರವರೆಗೆ ಸಂಭ್ರಮದ ನವರಾತ್ರಿ ಮಹೋತ್ಸವ

ಮಂದಾರ್ತಿ: ಮಂದಾರ್ತಿ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಅಕ್ಟೋಬರ್ 11ರಿಂದ 21ರವರೆಗೆ ನವರಾತ್ರಿ ವಿಶೇಷ ಪೂಜಾ ಮಹೋತ್ಸವವು ಸಂಭ್ರಮದಿಂದ ನಡೆಯಲಿದೆ.ನವರಾತ್ರಿ ಮಹೋತ್ಸವದ ಅಂಗವಾಗಿ ಅಕ್ಟೋಬರ್ 16ರಂದು ಮೂಲ ದೇವಳದ ವತಿಯಿಂದ ಚಂಡಿಕಾಯಾಗ ನೆರವೇರಲಿದೆ.ನವರಾತ್ರಿ ಉತ್ಸವದ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಶ್ರೀ ಅಮ್ಮನವರ ಪೂರ್ಣಾನುಗ್ರಹಕ್ಕೆ ಪಾತ್ರರಾಗುವಂತೆ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ಸವದ ಆಯೋಜಕರು ವಿನಂತಿಸಿದ್ದಾರೆ.
₹75 ಲಕ್ಷ ವೆಚ್ಚದ ಸಂಗೀತ ಕಾರಂಜಿ ಎರಡು ವರ್ಷಗಳಿಂದ ಸ್ತಬ್ಧ!ಕೋಟ

ಉಡುಪಿ: ಪ್ರವಾಸಿಗರನ್ನು ಆಕರ್ಷಿಸುವ ಉದ್ದೇಶದಿಂದ ₹75 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗಿದ್ದ ಕೋಟ ಕಾರಂತ ಕಲಾಭವನದ ಆವರಣದಲ್ಲಿನ ಸಂಗೀತ ಕಾರಂಜಿ ಕಳೆದ ಎರಡು ವರ್ಷಗಳಿಂದ ಸ್ಥಗಿತಗೊಂಡಿದೆ. ಉದ್ಘಾಟನೆಯ ಸಂದರ್ಭದಲ್ಲಿ ಪ್ರವಾಸೋದ್ಯಮದ ಆಕರ್ಷಣೆಯಾಗಿ ಗುರುತಿಸಿಕೊಳ್ಳುವ ನಿರೀಕ್ಷೆ ಮೂಡಿಸಿದ್ದ ಯೋಜನೆ ಇದೀಗ ನಿರ್ವಹಣೆಯ ಕೊರತೆಯಿಂದ ಸ್ತಬ್ಧವಾಗಿದ್ದು, ಸಾರ್ವಜನಿಕರ ತೆರಿಗೆ ಹಣದ ಸದ್ಬಳಕೆಯ ಕುರಿತು ಪ್ರಶ್ನೆಗಳು ಎದ್ದಿವೆ. ಕೋಟತಟ್ಟು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೋಟ ಕಾರಂತ ಕಲಾಭವನದ ಥೀಮ್ ಪಾರ್ಕ್ನ ಕೊಳದ ಮಧ್ಯಭಾಗದಲ್ಲಿ, ಹಿರಿಯ ಸಾಹಿತಿ ಶಿವರಾಮ ಕಾರಂತರ ಕಂಚಿನ ಪ್ರತಿಮೆಯ ಸುತ್ತ […]