ತ್ರಿಶಾ ವಿದ್ಯಾ ಪಿಯು ಕಾಲೇಜು ಕಟಪಾಡಿ: ಕಾಪು ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಕಟಪಾಡಿ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಮತ್ತು ತ್ರಿಶಾ ವಿದ್ಯಾ ಪದವಿ ಪೂರ್ವ ಕಾಲೇಜು, ಕಟಪಾಡಿ ಇವರ ಜಂಟಿ ಆಶ್ರಯದಲ್ಲಿ ಕಾಪು ತಾಲೂಕು ಮಟ್ಟದ ಬಾಲಕರ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ ಇದೇ ಸೆಪ್ಟೆಂಬರ್ 4 ರಂದು ಕಟಪಾಡಿಯ ಎಸ್.ವಿ. ಎಸ್. ಪದವಿ ಪೂರ್ವ, ಕಾಲೇಜಿನಲ್ಲಿ ನಡೆಯಿತು. ಪಂದ್ಯಾಟವನ್ನು ಉದ್ಘಾಟಿಸಿದ ತ್ರಿಶಾ ಸಮೂಹ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಸಿ.ಎ.ಗೋಪಾಲಕೃಷ್ಣ ಭಟ್ ಅವರು ಇಂತಹ ಕ್ರೀಡಾಕೂಟ ವಿದ್ಯಾರ್ಥಿಗಳಿಗೆ ದೈಹಿಕ ಸಾಮರ್ಥ್ಯ ಹೆಚ್ಚಿಸುದಲ್ಲದೇ ಮಾನಸಿಕವಾಗಿ ಸದೃಢರಾಗಿಸುತ್ತದೆ. ಜಯಗಳಿಸಿದ […]
ಮೊಂತಿ ಹಬ್ಬ: ಮೇರಿ ಮಾತೆಯ ಜನ್ಮದೊಂದಿಗೆ ಕುಟುಂಬ, ನಂಬಿಕೆ ಮತ್ತು ಸೃಷ್ಟಿಯ ನವೀಕರಣ – ಬಿಷಪ್ ಲೆಸ್ಲಿ ಕ್ಲಿಫರ್ಡ್ ಡಿಸೋಜಾ

ಉಡುಪಿ: ಸೆಪ್ಟೆಂಬರ್ 8ರಂದು ವಿಶ್ವದಾದ್ಯಂತ ಕ್ರೈಸ್ತ ಸಮುದಾಯವು ಪವಿತ್ರ ಕನ್ಯಾಮರಿಯಮ್ಮನ ಜನ್ಮದ ಹಬ್ಬವನ್ನು ಭಕ್ತಿಭಾವದಿಂದ ಆಚರಿಸುತ್ತದೆ. ಕರಾವಳಿ ಕರ್ನಾಟಕದ ಕ್ರೈಸ್ತರ ಸಾಂಸ್ಕೃತಿಕ ಮತ್ತು ಧಾರ್ಮಿಕ ಪರಂಪರೆಯಲ್ಲಿ ಈ ಹಬ್ಬವು ವಿಶಿಷ್ಟ ಸ್ಥಾನವನ್ನು ಹೊಂದಿದ್ದು, ಪ್ರೀತಿಯಿಂದ “ಮೊಂತಿ ಹಬ್ಬ” ಎಂದು ಕರೆಯಲ್ಪಡುತ್ತದೆ. ಮರಿಯಮ್ಮನ ಜನ್ಮವನ್ನು ಸ್ಮರಿಸುವ ಈ ಹಬ್ಬವು ದೇವರ ಕೃಪೆಗೆ ಕೃತಜ್ಞತೆ ಸಲ್ಲಿಸುವುದರೊಂದಿಗೆ ಕುಟುಂಬದ ಏಕತೆ, ಹೆಣ್ಣುಮಗುವಿನ ಘನತೆ, ಹೊಸ ಬೆಳೆಯ ಕೃತಜ್ಞತೆ ಮತ್ತು ಸೃಷ್ಟಿಯ ಸಂರಕ್ಷಣೆಯ ಮೌಲ್ಯಗಳನ್ನು ನಮ್ಮ ಮುಂದೆ ತೆರೆದಿಡುತ್ತದೆ. ಮರಿಯಮ್ಮನ ಜನ್ಮವು ದೇವರ […]
ಹೂಡೆ ಸಮೀಪ ರಸ್ತೆ ಬದಿ ಎಸೆಯಲ್ಪಟ್ಟ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ

ಉಡುಪಿ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಪ್ರದೇಶದಲ್ಲಿ ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ಪತ್ತೆಯಾಗಿದ್ದ ನವಜಾತ ಗಂಡು ಶಿಶು ಚಿಕಿತ್ಸೆ ಫಲಿಸದೆ ಮೃತಪಟ್ಟ ಘಟನೆ ಸೋಮವಾರ ನಡೆದಿದೆ. ಮನೆಯೊಂದಕ್ಕೆ ತೆರಳುವ ಕಾಲುದಾರಿಯಲ್ಲಿ ಕೆಲವೇ ಸಮಯದ ಹಿಂದೆ ಜನಿಸಿದ್ದ ಎನ್ನಲಾದ ಗಂಡು ಮಗು ಪತ್ತೆಯಾಗಿತ್ತು. ಸ್ಥಳೀಯರು ಮಗುವನ್ನು ಗಮನಿಸಿ ತಕ್ಷಣ ಆಸ್ಪತ್ರೆಗೆ ದಾಖಲಿಸಿದ್ದರು. ವೈದ್ಯರು ನಡೆಸಿದ ಪ್ರಾಥಮಿಕ ಪರೀಕ್ಷೆಯಲ್ಲಿ ಮಗುವಿನ ಹೃದಯ ಬಡಿತ ಕಂಡುಬಂದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಉಡುಪಿಯ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ […]
ಕರಾವಳಿ ಕರ್ನಾಟಕ ವಾಣಿಜ್ಯ ಮೇಳ ಮತ್ತು ‘ಮಂಗಳೂರನ್ನು ಬ್ರ್ಯಾಂಡ್ ಆಗಿ ರೂಪಿಸುವ’ ರಚನಾ ದೃಷ್ಟಿಕೋನಕ್ಕೆ ಪ್ರವಾಸೋದ್ಯಮ ಸಚಿವರ ಮೆಚ್ಚುಗೆ

ಮಂಗಳೂರು, ಸೆಪ್ಟೆಂಬರ್ 6, 2026: ಕರಾವಳಿ ಕರ್ನಾಟಕದ ಉದ್ಯಮಿಗಳು, ಕೈಗಾರಿಕೋದ್ಯಮಿಗಳು, ಎಂಎಸ್ಎಂಇಗಳು, ವ್ಯಾಪಾರಿಗಳು ಹಾಗೂ ಪ್ರವಾಸೋದ್ಯಮ ಕ್ಷೇತ್ರದ ವಿವಿಧ ಭಾಗೀದಾರರಿಗೆ ಪ್ರಮುಖ ವೇದಿಕೆಯನ್ನು ಒದಗಿಸುವ ಉದ್ದೇಶದಿಂದ ಪ್ರಸ್ತಾಪಿಸಲಾದ ಏಳು ದಿನಗಳ ಕರಾವಳಿ ಕರ್ನಾಟಕ ವಾಣಿಜ್ಯ, ಕೈಗಾರಿಕೆ, ಉದ್ಯಮಶೀಲತೆ ಮತ್ತು ಪ್ರವಾಸೋದ್ಯಮ ಪ್ರದರ್ಶನಕ್ಕೆ ಕರ್ನಾಟಕದ ಇಂಧನ ಮತ್ತು ಪ್ರವಾಸೋದ್ಯಮ ಸಚಿವರಾದ ಶ್ರೀ ಕೆ. ಜೆ. ಜಾರ್ಜ್ ಅವರು ಉತ್ತೇಜನಕಾರಿ ಪ್ರತಿಕ್ರಿಯೆ ನೀಡಿದ್ದಾರೆ. ರಚನಾ – ಕ್ಯಾಥೋಲಿಕ್ ಚೇಂಬರ್ ಆಫ್ ಕಾಮರ್ಸ್ & ಇಂಡಸ್ಟ್ರಿ ನಿಯೋಗವು ಕರ್ನಾಟಕ ಸರ್ಕಾರದ ವಿಧಾನ […]
ಮಣಿಪಾಲ ಜ್ಞಾನಸುಧಾದಲ್ಲಿ ಶಿಕ್ಷಕರ ದಿನಾಚರಣೆ: ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ ಶಿಕ್ಷಕರ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.ಶಿಕ್ಷಕ ವೃತ್ತಿಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ ವಿದ್ಯಾರ್ಥಿಗಳ ಬಾಳು ಬೆಳಗಿಸಿ ನಿವೃತ್ತರಾದ ಕೆ.ಪಿ.ಎಸ್.ಪ್ರಾ. ಶಾಲೆ ಕೋಟೆಶ್ವರದ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಚಂದ್ರ ನಾಯ್ಕ್ ಎಚ್, ಮಣಿಪಾಲ ಪದವಿ ಪೂರ್ವ ಕಾಲೇಜಿನ ನಿವೃತ್ತ ಉಪ ಪ್ರಾಂಶುಪಾಲರಾದ ಶ್ರೀಮತಿ ಇಂದಿರಾ ರಾವ್, ಸರಕಾರಿ ಪ್ರೌಢಶಾಲೆ ಒಳಕಾಡು ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಶ್ರೀಮತಿ ನಿರ್ಮಲ ಬಿ. ಮತ್ತು ಪರ್ಕಳ ಪ್ರೌಢಶಾಲೆ ಪರ್ಕಳ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ […]