ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ ವಿಭಾಗೀಯ ಮಟ್ಟಕ್ಕೆ ಆಯ್ಕೆ

ಕುಂದಾಪುರ:ಅಜ್ಜರ ಕಾಡಿನಲ್ಲಿ ನಡೆದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಮನು ಪೂಜಾರಿ 110 ಮೀಟರ್ ಹರ್ಡಲ್ಸ್ ನಲ್ಲಿ ಪ್ರಥಮ ಸ್ಥಾನವನ್ನು ಪಡೆದುಕೊಂಡು ವಿಭಾಗೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದಾರೆ.

ಕುಂದಾಪುರ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಫುಟ್ಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಬಾಲಕಿಯರ ತಂಡ.

ಕುಂದಾಪುರ:ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ವಿಭಾಗ ) ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಕೋಟೇಶ್ವರ ಇವರ ಸಂಯುಕ್ತ ಆಶ್ರಯದಲ್ಲಿ ಕುಂದಾಪುರ ತಾಲೂಕು ಮಟ್ಟದ ಪದವಿ ಪೂರ್ವ ವಿಭಾಗದ ಬಾಲಕ – ಬಾಲಕಿಯರ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. ವಿದ್ಯಾರ್ಥಿನಿಯರೊಂದಿಗೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ಉಪ ಪ್ರಾಂಶುಪಾಲರಾದ ಸುಜಯ್ ಕೋಟೆಗಾ‌ರ್, ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿದ ದೈಹಿಕ ಶಿಕ್ಷಣ […]

ಕಾರ್ಕಳ ಕ್ರೈಸ್ಟ್ ಕಿಂಗ್: ಪದವಿಪೂರ್ವ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬಾಲಕಿಯರ ತಂಡ ಜಿಲ್ಲಾಮಟ್ಟಕ್ಕೆ ಆಯ್ಕೆ

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ, ಕರ್ನಾಟಕ ಸರಕಾರ ಇದರ ವತಿಯಿಂದ ಕಾರ್ಕಳದ ಕೆ.ಎಂ.ಇ.ಎಸ್ ಪದವಿಪೂರ್ವ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕಿಯರ ವಿಭಾಗದ ಕಾರ್ಕಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕಾರ್ಕಳದ ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನಪಡೆದುಕೊಂಡು ಉಡುಪಿ ಜಿಲ್ಲಾಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದೆ. ಪ್ರಥಮ ವಾಣಿಜ್ಯ ವಿಭಾಗದ ವರುಣ ಶೆಟ್ಟಿ, ರಕ್ಷಾ, ರುಫಿಯಾ ಬಾನು, ಸಾಚಿ ಶೆಟ್ಟಿ, ಪ್ರಥಮ ವಿಜ್ಞಾನ ವಿಭಾಗದ ಪ್ರೀತಾ, ಅದಿತಿ ಆಚಾರ್ಯ, ಶ್ರಾವ್ಯ ಶೆಟ್ಟಿ, ದ್ವಿತೀಯ ವಾಣಿಜ್ಯ […]

ಕಾರ್ಕಳ ಕ್ರೈಸ್ಟ್ಕಿಂಗ್: ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯಲ್ಲಿ ದ್ವಿತೀಯ ವಾಣಿಜ್ಯ ವಿಭಾಗದ ರಿಹಾನ್‌ಶೇಖ್‌ಗೆ ಬೆಳ್ಳಿ ಪದಕ

ಕಾರ್ಕಳ: ಜಿಲ್ಲಾ ಪಂಚಾಯತ್ ಉಡುಪಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಹಾಗೂ ಪೂರ್ಣಪ್ರಜ್ಞಾ ಪ.ಪೂ ಕಾಲೇಜು ಉಡುಪಿ ಇವರ ಆಶ್ರಯದಲ್ಲಿ ನಡೆದ ಉಡುಪಿ ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳದ ಕೈಸ್ಟ್ಕಿಂಗ್ ಪದವಿಪೂರ್ವ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ರಿಹಾನ್ ಶೇಖ್ ಬೆಳ್ಳಿಯ ಪದಕ ಪಡೆದುಕೊಂಡಿದ್ದಾನೆ.

ಸಂಗೊಳ್ಳಿ ರಾಯಣ್ಣ ಪುರಸ್ಕಾರ-2025ಕ್ಕೆ ಡಾ.ಪಿ.ವಿ.ಭಂಡಾರಿ ಆಯ್ಕೆ

ಉಡುಪಿ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಅಭಿಮಾನಿ ಬಳಗ ದ ಕ, ಉಡುಪಿ ಜಿಲ್ಲೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಸಹಯೋಗದಲ್ಲಿ ನೀಡುತ್ತಿರುವ ಸಂಗೊಳ್ಳಿ ರಾಯಣ್ಣ ಪುರಸ್ಕಾರ- 2025ಕ್ಕೆ ಸಾಮಾಜಿಕ ಹೋರಾಟಗಾರ, ಚಿಂತಕ ಹಾಗೂ ಪ್ರಸಿದ್ಧ ಮನೋವೈದ್ಯ ಡಾ. ಪಿ.ವಿ.ಭಂಡಾರಿ ಅವರು ಆಯ್ಕೆಯಾಗಿರುತ್ತಾರೆ. ಸೆಪ್ಟೆಂಬರ್ 24ರಂದು 5 ಗಂಟೆಗೆ ಉಡುಪಿಯ ಯಕ್ಷಗಾನ ಕಲರಂಗದ ಐ ವೈ ಸಿ ಹವಾ ನಿಯಂತ್ರಿತ ಸಭಾಂಗಣದಲ್ಲಿ ಪ್ರಶಸ್ತಿ ಪ್ರಧಾನವು ನಡೆಯಲಿದೆ ಎಂದು ಸಂಘದ ಅಧ್ಯಕ್ಷ ಸಿದ್ದಬಸಯ್ಯ ಸ್ವಾಮಿ ಚಿಕ್ಕಮಠ […]