‘ಅಮೆಜಾನ್’ ಉದ್ಯೋಗಿಗಳಿಗೆ ಬಿಗ್ ಶಾಕ್: 30,000 ನೌಕರರನ್ನು ವಜಾಗೊಳಿಸಲು ಸಿದ್ಧತೆ!

ಸ್ಯಾನ್ ಫ್ರಾನ್ಸಿಸ್ಕೋ: ಆನ್ ಲೈನ್ ಚಿಲ್ಲರೆ ವ್ಯಾಪಾರ ಸಂಸ್ಥೆ ಅಮೆಜಾನ್ 30 ಸಾವಿರ ನೌಕರರನ್ನು ವಜಾಗೊಳಿಸಲು ಮುಂದಾಗಿದೆ. ಕೋವಿಡ್ ಸಮಯದಲ್ಲಿ ಆದ ಹೆಚ್ಚಿನ ನೌಕರರ ನೇಮಕದಿಂದ ಆದ ವೆಚ್ಚಗಳನ್ನು ಸರಿದೂಗಿಸಲು ಸಂಸ್ಥೆ ಈಗ ಈ ಕ್ರಮ ಕೈಗೊಳ್ಳಲು ನಿರ್ಧರಿಸಿದೆ ಎಂದು ವರದಿಗಳು ಹೇಳಿವೆ. ಅಮೆಜಾನ್ ನ ಒಟ್ಟು ನೌಕರರ ಪೈಕಿ ಸುಮಾರು ಶೇ. 10 ರಷ್ಟು ಮಂದಿಯನ್ನು ವಜಾಗೊಳಿಸಲಾಗುತ್ತಿದೆ. ಜಾಗತಿಕವಾಗಿ ಅಮೆಜಾನ್ ನಲ್ಲಿ ಸುಮಾರು 15 ಲಕ್ಷ ನೌಕರರಿದ್ದಾರೆ. ಕಳೆದ ವರ್ಷ ಅಮೆಜಾನ್ ಅಮೆರಿಕ ಸರ್ಕಾರಕ್ಕೆ ಸಲ್ಲಿಸಿದ […]
ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ: ರೈತರ ಕೃಷಿ ಭೂಮಿ ಸ್ವಾಧೀನವಿಲ್ಲ; ಕರ್ನಾಟಕ ವಿದ್ಯುತ್ ನಿಗಮ ಸ್ಪಷ್ಟನೆ.

ಸಾಗರ: ‘ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯಿಂದ ಉತ್ಪಾದನೆಗೊಳ್ಳುವ ವಿದ್ಯುತ್ ವಿತರಣೆಗಾಗಿ ಯಾವುದೇ ಹೊಸ ಗ್ರಿಡ್ ಸ್ಥಾಪಿಸುವುದಿಲ್ಲ. ಈಗಿರುವ ವಿದ್ಯುತ್ ಮಾರ್ಗಗಳ ಮೂಲಕವೇ ವಿತರಣೆ ಕಾರ್ಯ ನಡೆಯುವುದರಿಂದ ರೈತರ ಕೃಷಿಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳುವ ಪ್ರಶ್ನೆಯೇ ಉದ್ಭವಿಸುವುದಿಲ್ಲ’ ಎಂದು ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ ಕಾರ್ಯನಿರ್ವಾಹಕ ಎಂಜಿನಿಯರ್ ವಿ.ಎಂ.ವಿಜಯ್ ಸ್ಪಷ್ಟಪಡಿಸಿದರು. ‘ಒಟ್ಟಾರೆಯಾಗಿ ಯೋಜನೆಯಿಂದ ಲಾಭವೇ ಇಲ್ಲ ಎಂದು ಹೇಳುವುದು ಸರಿಯಲ್ಲ’ ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು. ‘ಪಂಪ್ಡ್ ಸ್ಟೋರೇಜ್ ಯೋಜನೆ ಅನುಷ್ಠಾನಕ್ಕೆ ಮೇಲ್ಭಾಗದಲ್ಲಿ ಒಂದು ಹಾಗೂ ಕೆಳ ಭಾಗದಲ್ಲಿ ಒಂದು […]
ಋತುಚಕ್ರ ರಜೆ ಘೋಷಣೆ ಹಿನ್ನೆಲೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಸನ್ಮಾನಿಸಿ, ಕೃತಜ್ಞತೆ ಸಲ್ಲಿಸಿದ ಮಹಿಳಾ ನೌಕರರ ಸಂಘ

ಬೆಂಗಳೂರು:ಕರ್ನಾಟಕ ರಾಜ್ಯ ಸರ್ಕಾರವು ಉದ್ಯೋಗಸ್ಥ ಮಹಿಳೆಯರಿಗೆ ವೇತನ ಸಹಿತ ವಾರ್ಷಿಕ 12 ಋತುಚಕ್ರ ರಜೆ ಘೋಷಣೆ ಮಾಡಿರುವ ಹಿನ್ನೆಲೆಯಲ್ಲಿ ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘದ ಪದಾಧಿಕಾರಿಗಳು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಕೃತಜ್ಞತೆ ಸಲ್ಲಿಸಿ, ಸನ್ಮಾನಿಸಿದರು. ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿಯಾದ ಸಂಘದ ಅಧ್ಯಕ್ಷರಾದ ರೋಷಿನಿಗೌಡ ಹಾಗೂ ಪ್ರಧಾನ ಕಾರ್ಯದರ್ಶಿ ಕೆ.ಶಶಿಕಲಾ, ಈ ನಿರ್ಧಾರಕ್ಕಾಗಿ ಧನ್ಯವಾದ ಅರ್ಪಿಸಿದರು. ದೇಶದಲ್ಲೇ ಮೊಟ್ಟಮೊದಲ ಬಾರಿಗೆ ಇಂತಹ ತೀರ್ಮಾನ ಕೈಗೊಂಡಿರುವ […]
ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಮೂವ್ವರು ಹೆಂಡತಿಯರ ಗಂಡ!

ಕಲಬುರಗಿ: ಚಿಂಚೊಳ್ಳಿ ತಾಲೂಕಿನ ಮಿರಿಯಾಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಕಲ್ಲು ಪರಸಿಯ ಪಾಲಿಶಿಂಗ್ ಮಾಲೀಕನೊಬ್ಬ ತನ್ನ ಪಾಲಿಸಿಂಗ್ಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕನ ಅಪ್ರಾಪ್ತ ಪುತ್ರಿಯ ಮೇಲೆ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ ಎಂದು ಚಿಂಚೋಳಿ ಸಿಪಿಐ ಕಪಿಲದೇವ ತಿಳಿಸಿದ್ದಾರೆ. ಮಿರಿಯಾಣ ಗ್ರಾಮದಲ್ಲಿರುವ ಕಲ್ಲು ಪರಸಿ ಪಾಲಿಶಿಂಗ್ದಲ್ಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದ ತಂದೆ ತಾಯಿ ಜೊತೆ ಮಗಳಿದ್ದಳು. ಕಾಮುಕ ಮಾಲೀಕ ಸದ್ಧಾಂ ಅಬ್ದುಲ್ ಹಮೀದ್ ಅಲಿಯಾಸ್ ಇಮ್ರಾನ್ (33) ಎಂಬಾತ […]
ಹೆಬ್ರಿ ಎಸ್ ಆರ್ ಪದವಿ ಪೂರ್ವ ಕಾಲೇಜು: ಚಿತ್ರಕಲಾ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ಹೆಬ್ರಿ: ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ನಡೆದ ಹೆಬ್ರಿ ತಾಲೂಕು ಮಟ್ಟದ ಚಿತ್ರಕಲೆ ಸ್ಪರ್ಧೆಯಲ್ಲಿ ಎಸ್ ಆರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಪರೀಕ್ಷಿತ್ ಆಚಾರ್ಯ ಪ್ರಥಮ ಸ್ಥಾನ, ನೇಸರ ಎ ಎನ್ ತೃತೀಯ ಸ್ಥಾನ, ಪಡೆದು ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆ ಆಗಿದ್ದಾರೆ. ವಿಜೇತ ವಿದ್ಯಾರ್ಥಿಗಳನ್ನು ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಚ್ ನಾಗರಾಜ್ ಶೆಟ್ಟಿ ಮತ್ತು ಕಾರ್ಯದರ್ಶಿಯವರಾದ ಸಪ್ನಾ ಎನ್ ಶೆಟ್ಟಿ ಅವರು ಅಭಿನಂದಿಸಿದ್ದಾರೆ.