ಮಾ.15: ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ

ಉಡುಪಿ: ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ, ಬಳಕೆದಾರರ ವೇದಿಕೆ (ರಿ), ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಗ್ರಾಹಕರ ಹಕ್ಕುಗಳ ದಿನಾಚರಣೆ ಕಾರ್ಯಕ್ರಮವು ಮಾರ್ಚ್ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಕುಂಜಿಬೆಟ್ಟು […]

ಹಸಿ ತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿ: ಸುಮಿತ್ರಾ ಆರ್ ನಾಯಕ್

ಉಡುಪಿ: ತ್ಯಾಜ್ಯ ಎಂಬುದು ಎಲ್ಲಾ ಸ್ಥಳೀಯ ಸಂಸ್ಥೆಗಳಿಗೆ ಹಾಗೂ ಗ್ರಾಮ ಪಂಚಾಯತಿಗಳಿಗೆ ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸುತ್ತಿದೆ. ಹಸಿತ್ಯಾಜ್ಯವನ್ನು ಸಾವಯವ ಗೊಬ್ಬರವಾಗಿ ಪರಿವರ್ತಿಸಿದರೆ ಈ ಸಮಸ್ಯೆಯನ್ನು ತಡೆಗಟ್ಟಬಹುದು ಎಂದು ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್ ಹೇಳಿದರು. ಅವರು ನಗರದ ಬ್ರಹ್ಮಗಿರಿಯ ಲಯನ್ಸ್ ಭವನದಲ್ಲಿ, ನಗರಸಭೆ ಉಡುಪಿ ಹಾಗೂ ಸಿತಾರ ಸಂಸ್ಥೆ ದಾವಣಗೆರೆ ಇವರ ಸಹಯೋಗದೊಂದಿಗೆ ನಡೆದ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ಬಲ್ಕ್ ವೆಸ್ಟ್ ಸಮರ್ಪಕ ವಿಲೇವಾರಿ ಸಂಬಂಧಿಸಿದಂತೆ ಮಾಹಿತಿ ಕಾರ್ಯಾಗಾರ ಹಾಗೂ ಸಾವಯವ ಗೊಬ್ಬರ ಪರಿವರ್ತನಾ […]

ಮಾ.20ರ ವರೆಗೆ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ

ಪೆರ್ಡೂರು: ಶ್ರೀ ಕ್ಷೇತ್ರ ಪೆರ್ಡೂರು ಮಹತೋಭಾರ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಮಾ.13 ರಿಂದ 20ರ ವರೆಗೆ ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದೆ. ಮಾ.13 ಸೋಮವಾರ                                    ರಾತ್ರಿ ಭೇರಿತಾಡನ, ಮೃತ್ತಿಕಾ ಸಂಗ್ರಹ, ಅಂಕುರಾರೋಪಣ ಮಾ.14 ಮಂಗಳವಾರ ಬೆಳಿಗ್ಗೆ ಧ್ವಜಾರೋಹಣ, ಅಗ್ನಿಜನನ, ಪ್ರಧಾನಹೋಮ, ಕಲಶಾಭಿಷೇಕ ಮಧ್ಯಾಹ್ನ ಮಹಾಪೂಜೆ ಅನ್ನ ಸಂತರ್ಪಣೆ ಅನ್ನಸಂತರ್ಪಣೆಯ ಸೇವಾಕರ್ತರು: ದೇವಸ್ಥಾನದ ವ್ಯವಸ್ಥಾಪನಾ […]

ಇಂದಿನಿಂದ 5 ದಿನ ಉಡುಪಿ, ದ.ಕ ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಉಡುಪಿ, ದಕಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವಡೆ ಇಂದಿನಿಂದ ಮಾರ್ಚ್ 18 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯದ ನಾನಾ ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆ, ಬಾಗಲಕೋಟೆ, ಬಳ್ಳಾರಿ, ಕಲಬುರಗಿ, ಬೀದರ್, ಧಾರವಾಡ, ಗದಗ, ವಿಜಯಪುರ, ಕೊಪ್ಪಳ ಜಿಲ್ಲೆಗಳ್ಲಿ ಮಳೆಯಾಗಲಿದೆ. ಮಾರ್ಚ್ […]

ತರಬೇತಿಯಿಂದ ಪರಿಪೂರ್ಣತೆ: ಎಸ್.ಟಿ ಸಿದ್ದಲಿಂಗಪ್ಪ

ಉಡುಪಿ: ತರಬೇತಿಯು ಅಧಿಕಾರಿ ಹಾಗೂ ಸಿಬ್ಬಂದಿಗಳಲ್ಲಿ ಜ್ಞಾನ, ಕೌಶಲ್ಯತೆ ಹಾಗೂ ಅತ್ಮವಿಶ್ವಾಸವನ್ನು ಹೆಚ್ಚಿಸಲಿದ್ದು, ಯಾವುದೇ ಉದ್ಯೋಗದಲ್ಲಿ ಪರಿಪೂರ್ಣತೆಯನ್ನು ಸಾಧಿಸುವಲ್ಲಿ ತರಬೇತಿಯು ಅತೀ ಅಗತ್ಯ ಎಂದು ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ಧಲಿಂಗಪ್ಪ ಹೇಳಿದರು. ಅವರು ಗುರುವಾರ, ಮಲ್ಪೆಯ ಸಿ.ಎಸ್.ಪಿ ಕೇಂದ್ರ ಕಚೇರಿಯಲ್ಲಿ, ಕರಾವಳಿ ಕಾವಲು ಪೊಲೀಸ್ ಘಟಕದ ಕರಾವಳಿ ಭದ್ರತಾ ತರಬೇತಿ ಸಂಸ್ಥೆಯ 2 ನೇ ತಂಡದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕರಾವಳಿ ಕಾವಲು ಪೊಲೀಸ್ ಘಟಕದ ವತಿಯಿಂದ ಹಮ್ಮಿಕೊಂಡಿರುವ ಈಜು ತರಬೇತಿ, ಪ್ರಥಮ […]