ದ.ಕ ಜಿಲ್ಲೆ: ಗುಡುಗು ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ 

ಮಂಗಳೂರು:  ಏಪ್ರಿಲ್ 7 ಮತ್ತು 8 ರಂದು  ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಮಾನ ಇಲಾಖೆ ತಿಳಿಸಿದೆ.

ಮಣಿಪಾಲ: ವಿಶ್ವ ಆರೋಗ್ಯ ದಿನ ನಿಮಿತ್ತ ಆರೋಗ್ಯ ಜಾಗೃತಿ ಅರಿವಿಗಾಗಿ ಶಿಲ್ಪ ಅನಾವರಣ

ಮಣಿಪಾಲ: ಪ್ರತಿ ವರ್ಷ ಏಪ್ರಿಲ್ 7 ರಂದು ವಿಶ್ವ ಆರೋಗ್ಯ ದಿನವನ್ನಾಗಿ ವಿಶ್ವದ್ಯಾಂತ ಆಚರಿಸಲಾಗುತ್ತದೆ. ಇದರ ಮುಖ್ಯ ಉದ್ದೇಶ ಸಾರ್ವಜನಿಕರಲ್ಲಿ ಉತ್ತಮ ಆರೋಗ್ಯದ ಕುರಿತು ಅರಿವು ಮೂಡಿಸುವುದಾಗಿದೆ. ಮೊದಲು ಸೋಂಕು ಕಾಯಿಲೆಗಳು ಮತ್ತು ಸಾಂಕ್ರಾಮಿಕ ರೋಗಗಳ ಬಗ್ಗೆ ಜನರಿಗೆ ಜಾಗೃತಿ ಮೂಡಿಸುವ ಅವಶ್ಯಕತೆ ಇತ್ತು. ಆದರೀಗ ಅಸಾಂಕ್ರಾಮಿಕ ಮತ್ತು ಜೀವನ ಶೈಲಿಯಿಂದ ಬರುವ ಕಾಯಿಲೆಗಳು, ಮಧುಮೇಹ, ಹೃದ್ರೋಗ, ಕಿಡ್ನಿ ಇತ್ಯಾದಿಗಳ ತಡೆಗಟ್ಟುವ ಮಾಹಿತಿ ಮತ್ತು ಅರಿವು ಮೂಡಿಸುವ ಅವಶ್ಯಕತೆ ಇದೆ. ಇಂತಹ ಕಾರ್ಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲವು […]

ಬೆಳ್ತಂಗಡಿಯ ಥೋಮಸ್ ನೀಲಿಯಾರ ಬೆಂಗಳೂರಿನ ಸರ್ವಜ್ಞ ನಗರ ಕ್ಷೇತ್ರದಿಂದ ಕಣಕ್ಕೆ?

ಮಂಗಳೂರು: ಮೂಲತಃ ದ.ಕ ಜಿಲ್ಲೆಯ ಬೆಳ್ತಂಗಡಿಯ ಗಂಡಿಬಾಗಿಲು ಗ್ರಾಮದ ನಿವಾಸಿಯಾಗಿರುವ, ಪ್ರಸ್ತುತ 25 ವರ್ಷಗಳಿಂದ ಬೆಂಗಳೂರು ಸರ್ವಜ್ಞನಗರದಲ್ಲಿ ನೆಲೆಯಾಗಿರುವ ಥೋಮಸ್ ನೀಲಿಯಾರ ಈ ಬಾರಿ ಬಿಜೆಪಿಯಿಂದ ಕಣಕ್ಕಿಳಿಯಲು ಸಜ್ಜಾಗಿದ್ದಾರೆ. ಮಂಗಳೂರು ವಿಶ್ವವಿದ್ಯಾನಿಲಯದಿಂದ ಕಾನೂನು ಪದವೀಧರರಾಗಿರುವ ಇವರು, ಪಕ್ಷದ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಸದಸ್ಯರು ಮತ್ತು ಕೇರಳದ ಪ್ರಭಾರಿ ಆಗಿದ್ದು, ಬೆಂಗಳೂರು ನಗರ ವಿಶ್ವವಿದ್ಯಾಲಯದ ಮಾಜಿ ಸಿಂಡಿಕೇಟ್ ಸದಸ್ಯರೂ ಆಗಿದ್ದಾರೆ. ಥೋಮಸ್(ಸುರೇಶ್) ಚೆರಿಯನ್ ನೀಲಿಯಾರ ಸರ್ವಜ್ಞ ನಗರ ಕ್ಷೇತ್ರದ ಬಿಜೆಪಿ ನಾಮಾಂಕಿತ ಅಭ್ಯರ್ಥಿಗಳ ಪಟ್ಟಿಯಲ್ಲಿ ಒಬ್ಬರಾಗಿದ್ದಾರೆ. ಹಾಲಿ ಕಾಂಗ್ರೆಸ್ […]

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಾಳೆ ಶ್ರೀ ಮನ್ಮಹಾರಥೋತ್ಸವ

ಉಚ್ಚಿಲ: ಶ್ರೀ ಕ್ಷೇತ್ರ ಉಚ್ಶಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಮಹೋತ್ಸವ ಎ. 4 ರಿಂದ 9ರವರೆಗೆ ನಡೆಯಲಿದ್ದು ಎ. 7 ರಂದು ಶ್ರೀ ಮಹಾಲಕ್ಷ್ಮೀ ರಥಾರೋಹಣ ನಡೆಯಲಿದೆ. ಎ. 6 ರಂದು ಬೆಳಿಗ್ಗೆ 9.30 ರಿಂದ ನಾಗಾಲಯದಲ್ಲಿ ನವಕ ಪ್ರಧಾನ ಹೋಮ, ಕಲಶಾಭಿಷೇಕ, ಆಶ್ಲೇಷಾ ಬಲಿ, ಮಧ್ಯಾಹ್ನ 12: 30ಕ್ಕೆ ಮಹಾಲಕ್ಷ್ಮೀ ಸನ್ನಿಧಿಯಲ್ಲಿ ಪ್ರಧಾನ ಯಾಗ, ಮಹಾಪೂಜೆ, ರಾತ್ರಿ 7.30 ರಿಂದ ಆರಾಧನಾ ಪೂಜೆ, ಅನ್ನ ಸಂತರ್ಪಣ ಪ್ರಾರ್ಥನೆ, ರಾತ್ರಿ 11 ರಿಂದ ನಿತ್ಯ ಬಲಿ, […]

ಕಾರ್ಕಳ ಎಣ್ಣೆಹೊಳೆ ಏತ ನೀರಾವರಿ ಯೋಜನೆ ಸಂಪೂರ್ಣ ವಿಫಲ, ಪುರಸಭೆ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ…!!!

ಕಾರ್ಕಳ: ಪುರಸಭೆ ವ್ಯಾಪ್ತಿಯಲ್ಲಿ ನೀರಿಗಾಗಿ ಹಾಹಾಕಾರ ಮುಂದುವರೆದಿದ್ದು, ಕುಡಿಯುವ ನೀರಿಗೂ ತತ್ವಾರ ಎದುರಿಸುವ ದಿನಗಳು ಆರಂಭವಾಗಿದೆ ಕೋಟ್ಯಾಂತರ ರೂ.ಯೋಜನೆಗಳು ಹಳ್ಳ ಹಿಡಿದಿರುವುದರಿಂದ ಈ ಸಂಕಷ್ಟ ಎದುರಾಗಿದೆ ಎಂದು ಪುರಸಭೆ ಸದಸ್ಯ ಕಾಂಗ್ರೇಸ್ ವಕ್ತಾರ ಶುಭದ ರಾವ್ ತಿಳಿಸಿದ್ದಾರೆ. ಮುಂಡ್ಲಿ ಜಲಾಶಯ ಸಂಪೂರ್ಣ ಬತ್ತಿಹೋಗಿದೆ. ರಾಮಸಮುದ್ರದಿಂದ ನೀರನ್ನು ಬಳಸಲಾಗುತ್ತಿದ್ದರೂ ಸಮರ್ಪಕವಾಗಿ ವಿತರಿಸಲು ಸಾದ್ಯವಾಗುತ್ತಿಲ್ಲ ಹಾಗಾಗಿ ಮಿತವಾದ ನೀರಿನ ಬಳಕೆ ಮಾಡುವಂತೆ ಪುರಸಭೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ. ಈ ನಡುವೆ 136 ಕೋಟಿ ರೂ.ನಲ್ಲಿ ಪೂರ್ಣಗೊಂಡ ಎಣ್ಣೆಹೊಳೆ ಏತ ನೀರಾವರಿ […]