ಸೆ.9ರಿಂದ ಉಡುಪಿಯಲ್ಲಿ ‘ವನಸುಮ ಜೇಸಿ ಸಪ್ತಾಹ’; ‘ಕೋವಿ ಮತ್ತು ಕೊಳಲು’ ಟೀಸರ್ ಬಿಡುಗಡೆ

ಉಡುಪಿ: ಜೇಸಿಐ ಉಡುಪಿ ಸಿಟಿ, ವನಸುಮ ಟ್ರಸ್ಟ್ ಹಾಗೂ ವನಸುಮ ವೇದಿಕೆ ಸಹಯೋಗದಲ್ಲಿ ಸೆ.9ರಿಂದ 15ರವರೆಗೆ ಉಡುಪಿಯ ಎಂಜಿಎಂ ಕಾಲೇಜಿನ ಮುದ್ದಣ ಮಂಟಪದಲ್ಲಿ ‘ವನಸುಮ ಜೇಸಿ ಸಪ್ತಾಹ’ ಹೆಸರಿನ ಒಂದು ವಾರದ ಸಾಂಸ್ಕೃತಿಕ ಹಬ್ಬ ಆಯೋಜಿಸಲಾಗಿದೆ. ಪ್ರತಿದಿನ ಸಂಜೆ 6 ಗಂಟೆಯಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಪ್ತಾಹದ ನಿರ್ದೇಶಕ ಬಾಸುಮ ಕೊಡಗು ತಿಳಿಸಿದರು.ಸಪ್ತಾಹದ ಉದ್ಘಾಟನೆಯನ್ನು ಜೇಸಿಐ ಭಾರತದ ಜೇಸಿ ಸಪ್ತಾಹ ನಿರ್ದೇಶಕ ಗೌರೀಶ್ ಭಾರ್ಗವ ನೆರವೇರಿಸಲಿದ್ದು, ಜೇಸಿಐ ಉಡುಪಿ ಸಿಟಿ ಅಧ್ಯಕ್ಷೆ ಪಲ್ಲವಿ ಕೊಡಗು […]
ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಭಾಗವಹಿಸಿದ ಶಾಸಕ ಮಂಜುನಾಥ ಭಂಡಾರಿ

ಫಿಲಡೆಲ್ಫಿಯಾ: ಅಮೆರಿಕದ ಫಿಲಡೆಲ್ಫಿಯಾದಲ್ಲಿ ಸೆಪ್ಟೆಂಬರ್ 4ರಿಂದ 6ರವರೆಗೆ ನಡೆಯುತ್ತಿರುವ ಅಕ್ಕ ರಜತ ಮಹೋತ್ಸವ ವಿಶ್ವ ಕನ್ನಡ ಸಮ್ಮೇಳನದಲ್ಲಿ ಮಾನ್ಯ ಕನ್ನಡ ಮತ್ತು ಸಂಸ್ಕೃತಿ ಸಚಿವರಾದ ಶಿವರಾಜ್ ತಂಗಡಗಿ ಹಾಗೂ ಆದಿಚುಂಚನಗಿರಿ ಮಹಾಸಂಸ್ಥಾನ ಮಠ ಮತ್ತು ಬಿಜಿಎಸ್ ಸಂಸ್ಥೆಗಳ ಪೀಠಾಧಿಪತಿಗಳಾದ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿ ಅವರೊಂದಿಗೆ ಮಾನ್ಯ ಶಾಸಕರಾದ ಮಂಜುನಾಥ ಭಂಡಾರಿ ಅವರು ಭಾಗವಹಿಸಿದರು. ವಿದೇಶದಲ್ಲಿ ನೆಲೆಸಿರುವ ಕನ್ನಡಿಗರನ್ನು ಒಗ್ಗೂಡಿಸುವ ಹಾಗೂ ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ಪರಂಪರೆಯನ್ನು ವಿಶ್ವಮಟ್ಟದಲ್ಲಿ ಪರಿಚಯಿಸುವ ಉದ್ದೇಶದ ಈ […]
ಉಡುಪಿಯಲ್ಲಿ ಕೇರಳದ ಸಾಂಸ್ಕೃತಿಕ ವೈಭವ: ಓಣಂ ಸಂಭ್ರಮಕ್ಕೆ ಮನಸೋತ ಕರಾವಳಿಗರು

ಉಡುಪಿ: ಕೃಷ್ಣ ಜನ್ಮಾಷ್ಟಮಿ ಹಾಗೂ ವಿಟ್ಲಪಿಂಡಿ ಮಹೋತ್ಸವದ ಸಂಭ್ರಮದ ನಡುವೆಯೇ ಉಡುಪಿಯಲ್ಲಿ ಕೇರಳದ ಓಣಂ ಹಬ್ಬದ ವೈಭವವೂ ಕಳೆಗಟ್ಟಿತು. ಕೇರಳ ಸಮಾಜಂ ಉಡುಪಿ (ರಿ) ವತಿಯಿಂದ ಅಂಬಾಗಿಲಿನ ಅಮೃತ್ ಗಾರ್ಡನ್ನಲ್ಲಿ ಆಯೋಜಿಸಿದ್ದ ಎರಡನೇ ವರ್ಷದ ಓಣಂ ಸಂಭ್ರಮಾಚರಣೆ ಸಾಂಸ್ಕೃತಿಕ ವೈವಿಧ್ಯ, ಸಂಗೀತ, ನೃತ್ಯ, ಕ್ರೀಡೆ ಹಾಗೂ ಆಹಾರ ಪದ್ಧತಿಗಳ ಮೂಲಕ ಕರಾವಳಿಗರ ಮನಸೆಳೆಯಿತು. ಮಲಯಾಳಂ ಚಿತ್ರರಂಗದ ನಟಿ ನೀನಾ ಕುರುಪ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಓಣಂ ಕೇರಳದ ಪ್ರಮುಖ ಹಬ್ಬಗಳಲ್ಲಿ ಒಂದಾಗಿದ್ದು, ಕೇರಳದಾದ್ಯಂತ ಹತ್ತು […]
ಫುಟ್ಬಾಲ್ ಬಾಲಕರ ವಿಭಾಗದಲ್ಲಿ ವಿಜೇತರಾದ ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ, ಕೋಟ ವಿವೇಕ ಪದವಿ ಪೂರ್ವ ಕಾಲೇಜಿಗೆ ರನ್ನರ್ ಅಪ್

ಬ್ರಹ್ಮಾವರ: ಫುಟ್ಬಾಲ್ ಬಾಲಕರ ವಿಭಾಗದಲ್ಲಿ ವಿಜೇತರಾಗಿ ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ಹಾಗೂ ರನ್ನರ್ ಅಪ್ ಸ್ಥಾನ ವಿವೇಕ ಪದವಿ ಪೂರ್ವ ಕಾಲೇಜ್ ಕೋಟಗೆ ಸಿಕ್ಕಿದೆ. ಬಾಲಕಿಯರ ವಿಭಾಗ ವಿಜೇತರು ವಿವೇಕ ಪದವಿ ಪೂರ್ವ ಕಾಲೇಜ್ ಕೋಟ ರನ್ನರ್ ಅಪ್ಎಸ್ಎಂಎಸ್ ಪದವಿ ಪೂರ್ವ ಕಾಲೇಜು ಬ್ರಹ್ಮಾವರ ವಾಲಿಬಾಲ್ ಬಾಲಕಿಯರ ವಿಭಾಗ ವಿಜೇತರು ಎಸ್ ಡಿ ಪಿ ಟಿ ಪದವಿ ಪೂರ್ವ ಕಾಲೇಜು ಮಂದರ್ತಿ, ರನ್ನರ್ ಅಪ್ ಸರಕಾರಿ ಪದವಿ ಪೂರ್ವ ಕಾಲೇಜು, ಬ್ರಹ್ಮಾವರಬಾಲಕರು ವಿಜೇತರು ಎಸ್ಎಂಎಸ್ […]
ಎಸ್.ಎಂ.ಎಸ್. ಪದವಿಪೂರ್ವ ಕಾಲೇಜಿನಲ್ಲಿ ತಾಲ್ಲೂಕು ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ

ಬ್ರಹ್ಮಾವರ: ಎಸ್.ಎಂ.ಎಸ್. ಪದವಿಪೂರ್ವ ಕಾಲೇಜು, ಬ್ರಹ್ಮಾವರದ ಆತಿಥ್ಯದಲ್ಲಿ ಬ್ರಹ್ಮಾವರ ತಾಲ್ಲೂಕು ಮಟ್ಟದ ವಾಲಿಬಾಲ್ ಮತ್ತು ಫುಟ್ಬಾಲ್ ಕ್ರೀಡಾಕೂಟವು ಸೆಪ್ಟೆಂಬರ್ 4ರಂದು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಓ ಎಸ್ ಸಿ ವಿದ್ಯಾಸಂಸ್ಥೆಯ ಅಧ್ಯಕ್ಷರು ಹಾಗೂ ಕಾಲೇಜಿನ ಸಂಚಾಲಕರಾದ ರೆ. ಫಾದರ್ ಎಂ.ಸಿ. ಮಥಾಯಿ ಅವರು ವಹಿಸಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಐವನ್ ದೋನತ್ ಸುವಾರಿಸ್ ಅವರು ಗಣ್ಯರನ್ನು ಹಾಗೂ ಕ್ರೀಡಾಪಟುಗಳನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಸಂತೋಷ್ ನೀಲಾವರ್ ಅವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಉದ್ಯಮಿ ಹಾಗೂ […]