ಹಿರಿಯ ನಾಗರಿಕರ ಜೀವನ ಶೈಲಿ ಯುವಜನತೆಗೆ ಮಾದರಿ : ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಯುವಜನತೆಗೆ ಮಾದರಿಯಾಗುವ ರೀತಿಯಲ್ಲಿ ಹಿರಿಯ ನಾಗರಿಕರು ಜೀವನ ನಡೆಸುತ್ತಿದ್ದು, ನಮ್ಮ ಬದುಕಿಗೆ ದಾರಿ ಮಾಡಿಕೊಟ್ಟ ಹಿರಿಯ ನಾಗರಿಕರ ಕೊನೆಗಾಲದ ಬದುಕನ್ನು ಹಸನು ಗೊಳಿಸುವುದು ಪ್ರತಿಯೊಬ್ಬ ಯುವಜನರ ಕರ್ತವ್ಯಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಬುಧವಾರ ನಗರದ ಅಜ್ಜರಕಾಡು ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ […]

ಕುಂದಾಪುರ: ಹಿಜಾಬ್ ನಿರ್ಬಂಧ; ಬಿ.ಜಿ. ರಾಮಕೃಷ್ಣ ಅವರಿಗೆ ನೀಡಿದ್ದ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ತಡೆ.

ಕುಂದಾಪುರ: ಕುಂದಾಪುರದ ಸರ್ಕಾರಿ ಪಿಯು ಕಾಲೇಜಿನ ಪ್ರಾಂಶುಪಾಲ ಬಿ.ಜಿ. ರಾಮಕೃಷ್ಣ ಅವರಿಗೆ ನೀಡಲಾಗಿದ್ದ ರಾಜ್ಯಮಟ್ಟದ ‘ಉತ್ತಮ ಶಿಕ್ಷಕ’ ಪ್ರಶಸ್ತಿಯನ್ನು ಶಾಲಾ ಶಿಕ್ಷಣ ಇಲಾಖೆ ತಡೆಹಿಡಿದಿದೆ. ರಾಮಕೃಷ್ಣ ಸೇರಿದಂತೆ ರಾಜ್ಯದ ಪದವಿಪೂರ್ವ ಕಾಲೇಜುಗಳ ಇಬ್ಬರು ಪ್ರಾಂಶುಪಾಲರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದ ಶಾಲಾ ಶಿಕ್ಷಣ ಇಲಾಖೆ ಮಂಗಳವಾರ ರಾತ್ರಿ ಪಟ್ಟಿ ಬಿಡುಗಡೆ ಮಾಡಿತ್ತು. ರಾಜ್ಯದಲ್ಲಿ ಬಿಜೆಪಿ ಅಧಿಕಾರದಲ್ಲಿದ್ದ ಅವಧಿಯಲ್ಲಿ ನಡೆದಿದ್ದ ಹಿಜಾಬ್‌ ವಿವಾದದಲ್ಲಿ ರಾಮಕೃಷ್ಣ ಹೆಸರು ತಳಕು ಹಾಕಿಕೊಂಡಿತ್ತು. ಹಿಜಾಬ್‌ ಧರಿಸಿ ಬಂದಿದ್ದ ಮುಸ್ಲಿಂ ವಿದ್ಯಾರ್ಥಿನಿಯರನ್ನು ಪ್ರಾಂಶುಪಾಲರಾಗಿದ್ದ ರಾಮಕೃಷ್ಣ ಕಾಲೇಜು […]

ವಾಹನ ಸವಾರರೆ ಎಚ್ಚರ: ಸೆ.15 ರೊಳಗೆ `HSRP’ ನಂಬರ್ ಪ್ಲೇಟ್ ಅಳವಡಿಸದಿದ್ದರೆ ದಂಡ ಫಿಕ್ಸ್..!

ಬೆಂಗಳೂರು: ರಾಜ್ಯದಲ್ಲಿ HSRP ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. ಎಚ್‌ಎಸ್‌ಆರ್‌ಪಿಗಳನ್ನು ಅಳವಡಿಸಲು ಸಾರಿಗೆ ಇಲಾಖೆ ಗಡುವನ್ನು ವಿಸ್ತರಿಸಿರುವುದು ಇದು ನಾಲ್ಕನೇ ಬಾರಿಯಾಗಿದೆ . ಹಿಂದಿನ ಗಡುವು ನವೆಂಬರ್ 17, 2023, ಫೆಬ್ರವರಿ 17, 2024 ಮತ್ತು ಮೇ 17, 2024 ಆಗಿತ್ತು. HSRP ಗಳನ್ನು ಪಡೆಯದ ವಾಹನ ಮಾಲೀಕರು ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ ಎಚ್ಎಸ್ಆರ್ಪಿ ಕಡ್ಡಾಯಗೊಳಿಸಿ ಸಾರಿಗೆ ಇಲಾಖೆ […]

ಭಿಕ್ಷಾಟನೆಯಲ್ಲಿ ಗಳಿಸಿದ ಹಣವನ್ನು ದೇಗುಲಕ್ಕೆ ದಾನ ಮಾಡಿದ ಕುಂದಾಪುರದ ಮಹಿಳೆ..!

ಕುಂದಾಪುರ: ಮಹಿಳೆ ಒಬ್ಬರು ಭಿಕ್ಷಾಟನೆಯಲ್ಲಿ ತಾನು ಗಳಿಸಿದ ಹಣವನ್ನು ಕೂಡಿಟ್ಟು ಲಕ್ಷ ರೂಪಾಯಿ ದಾಟಿದ ಬಳಿಕ ವಿವಿಧ ದೇವಸ್ಥಾನಗಳ ದಾಸೋಹಕ್ಕೆ ನೀಡುವ ಮೂಲಕ ಗಮನ ಸೆಳೆಯುತ್ತಿದ್ದಾರೆ. ತಾಲ್ಲೂಕಿನ ಕಂಚುಗೋಡು ಗ್ರಾಮದ ವಯೋವೃದ್ಧೆ ಅಶ್ವತ್ಥಮ್ಮ ತನ್ನ ಗಂಡ, ಮಕ್ಕಳೊಂದಿಗೆ ಸಂಸಾರ ಸಾಗಿಸುತ್ತಿದ್ದ ಅವರು, ಪತಿ ಹಾಗೂ ಮಕ್ಕಳನ್ನು ಕಳೆದುಕೊಂಡ ಬಳಿಕ ಜೀವನ ನಿರ್ವಹಣೆಗೆ ಭಿಕ್ಷಾಟನೆಯಲ್ಲಿ ತೊಡಗಿದರು. ಸಾಲಿಗ್ರಾಮದ ಆಂಜನೇಯ ದೇವಸ್ಥಾನ, ಪೊಳಲಿಯ ರಾಜರಾಜೇಶ್ವರಿ ದೇವಸ್ಥಾನ, ಕದ್ರಿಯ ಮಂಜುನಾಥ ಸ್ವಾಮಿ ದೇವಸ್ಥಾನ, ಸಾಸ್ತಾನದ ಟೋಲ್ ಗೇಟ್ ಮುಂತಾದ ಕಡೆಗಳಲ್ಲಿ ಅಶ್ವತ್ಥಮ್ಮ […]

ಉಡುಪಿ: ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ಸಮಸ್ತ ಬಂಟ ಸಮಾಜದ ಅಭಿನಂದನೆ.

ಉಡುಪಿ : ಬಂಟರ ಯಾನೆ ನಾಡವರ ಮಾತೃ ಸಂಘ, ಮಂಗಳೂರು ಇದರ ಉಡುಪಿ ತಾಲೂಕು ಸಮಿತಿ ವತಿಯಿಂದ ಜಾನಪದ, ರಂಗಭೂಮಿ, ಸಾಂಸ್ಕೃತಿ, ಧಾರ್ಮಿಕ ಮೊದಲಾದ ಹತ್ತು ಹಲವಾರು ಕ್ಷೇತ್ರಗಳಲ್ಲಿ ಸಕ್ರೀಯರಾಗಿ ವಿವಿಧ ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಖ್ಯಾತರಾಗಿರುವ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ.ತಲ್ಲೂರು ಶಿವರಾಮ ಶೆಟ್ಟಿ ಅವರಿಗೆ ‘ಬಂಟಕುಲ ರತ್ನ’ ಬಿರುದು ನೀಡಿ ಸನ್ಮಾನಿಸಲಾಯಿತು. ಸಮಿತಿ ವತಿಯಿಂದ ಉಡುಪಿಯ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಭವನದಲ್ಲಿ ಭಾನುವಾರ ನಡೆದ ಕಲಾಧರ ಯಕ್ಷರಂಗ ಬಳಗ ಜಲವಳ್ಳಿ ಇವರಿಂದ ಬಡಗುತಿಟ್ಟು […]