ಭಾರತದ ನೂತನ ಉಪರಾಷ್ಟ್ರಪತಿಯಾಗಿ ಸಿ.ಪಿ ರಾಧಾಕೃಷ್ಣನ್ ಆಯ್ಕೆ

ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಗೆಲುವು ಸಾಧಿಸಿದ್ದಾರೆ. ಉಪರಾಷ್ಟ್ರಪತಿ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆದಿತ್ತು. ಉಪರಾಷ್ಟ್ರಪತಿ ಚುನಾವಣೆಗೆ 14 ಸಂಸದರು ಗೈರು ಹಾಜರಾಗಿದ್ದು 767 ಸಂಸದರು ಮತ ಚಲಾಯಿಸಿದ್ದರು. ರಾಧಾಕೃಷ್ಣನ್ 452 ಮತಗಳನ್ನು ಪಡೆದರೆ, ವಿರೋಧ ಪಕ್ಷದ ಅಭ್ಯರ್ಥಿ ಬಿ. ಸುದರ್ಶನ್ ರೆಡ್ಡಿ 300 ಮತಗಳನ್ನು ಪಡೆದರು. 15 ಮತಗಳನ್ನು […]

ಉಡುಪಿ:ಹಿರಿಯ ನಾಗರಿಕರ ದಿನಾಚರಣೆಗೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಿ : ಶ್ಯಾಮಲಾ ಸಿ.ಕೆ

ಉಡುಪಿ: ಜಿಲ್ಲಾ ಮಟ್ಟದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲು ಎಲ್ಲಾ ಅಗತ್ಯ ಪೂರ್ವಸಿದ್ಧತೆಗಳನ್ನು ಮಾಡಿಕೊಳ್ಳುವ ಜೊತೆಗೆ ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಸಭಾಂಗಣದಲ್ಲಿ ನಡೆದ ಹಿರಿಯ ನಾಗರಿಕ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಹಿರಿಯ ನಾಗರಿಕರ ದಿನಾಚರಣೆಯು ಅಕ್ಟೋಬರ್ 4 ರಂದು […]

ಬ್ರಹ್ಮಾವರ: ವ್ಯಕ್ತಿ ನಾಪತ್ತೆ

ಉಡುಪಿ, ಸೆ.09: ಮಂಗಳೂರಿನಲ್ಲಿ ಕೆಲಸ ಮಾಡಿಕೊಂಡಿದ್ದ, ಮೂಲತಃ ಬ್ರಹ್ಮಾವರ ತಾಲೂಕಿನ ಕಾವಡಿ ಗ್ರಾಮದ ಪ್ರಕಾಶ್ ಶೆಟ್ಟಿ (39) ಎಂಬವರು ಕೆಲಸದ ನಿಮಿತ್ತ ಹೊರಜಿಲ್ಲೆಗಳಿಗೆ ತೆರಳುತ್ತಿದ್ದು ಐದಾರು ತಿಂಗಳಿಗೊಮ್ಮೆ ಮನೆಗೆ ಬರುವ ಅಭ್ಯಾಸವಿದ್ದು, ಕಳೆದ ವರ್ಷ ಜೂನ್ ತಿಂಗಳಲ್ಲಿ ಕೊನೆಯ ಬಾರಿಗೆ ಮನೆಗೆ ಬಂದಿದ್ದ ಇವರು ತದನಂತರ ಸುಮಾರು 7 ತಿಂಗಳಿ೦ದೀಚೆಗೆ ಯಾವುದೇ ರೀತಿಯ ಸಂಪರ್ಕಕ್ಕೆ ಸಿಗದೆ, ಮನೆಗೂ ಬಾರದೆ ನಾಪತ್ತೆಯಾಗಿರುತ್ತಾರೆ. 5 ಅಡಿ 5 ಇಂಚು ಎತ್ತರವಿದ್ದು, ಕೋಲು ಮುಖ, ಎಣ್ಣೆಕಪ್ಪು ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, […]

ಕುಂದಾಪುರ:ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜು: ಬಾಲಕಿಯರ ತಂಡಕ್ಕೆ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ದ್ವಿತೀಯ ಸ್ಥಾನ.

ಕುಂದಾಪುರ : ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ ) ಹಾಗೂ ಆರ್. ಎನ್. ಶೆಟ್ಟಿ ಪದವಿ ಪೂರ್ವ ಕಾಲೇಜು ಕುಂದಾಪುರ ಇವರ ಜಂಟಿ ಆಶ್ರಯ ದಲ್ಲಿ ಕುಂದಾಪುರದ ಗಾಂಧಿ ಮೈದಾನ ದಲ್ಲಿ ನಡೆದ ತಾಲೂಕು ಮಟ್ಟದ ಥ್ರೋ ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ದ್ವಿತೀಯ ಸ್ಥಾನ ಪಡೆದಿರುತ್ತಾರೆ.ವಿದ್ಯಾರ್ಥಿನಿಯರಾದ ರಿಷಾ, ಸಂಜನಾ, ಪ್ರೀತಿ, ಅಪೂರ್ವ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳ ಜೊತೆ ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಗಾಣಿಗ, ವಿದ್ಯಾರ್ಥಿಗಳನ್ನು ತರಬೇತಿಗೊಳಿಸಿದ […]

ಉಡುಪಿ:ಸೆ.8 ರಿಂದ 13ರವರೆಗೆ “ಮಹಾ ಉದ್ಯಮ ಸಪ್ತಾಹ”

ಉಡುಪಿ:ಭಾರತೀಯ ಅಂಚೆ ಇಲಾಖೆಯು ತನ್ನ ವ್ಯಾಪಾರ ಅಭಿವೃದ್ಧಿ ಚಟುವಟಿಕೆಗಳನ್ನು ಹೆಚ್ಚಿಸುವ ಉದ್ದೇಶದಿಂದ ದಿನಾಂಕ 8ನೇ ಸೆಪ್ಟೆಂಬರ್ 2025 ರಿಂದ 13ನೇ ಸೆಪ್ಟೆಂಬರ್ 2025 ರವರೆಗೆ “ಮಹಾ ಉದ್ಯಮ ಸಪ್ತಾಹ”ವನ್ನು ಆಯೋಜಿಸಿದೆ. ಈ ಅಭಿಯಾನದ ಮುಖ್ಯ ಗುರಿ ಸಣ್ಣ ಮತ್ತು ದೊಡ್ಡ ಉದ್ಯಮಿಗಳು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರಿಗೆ, ಭಾರತೀಯ ಅಂಚೆಯ ವಿಶ್ವಾಸಾರ್ಹ ಸೇವೆಗಳ ಪ್ರಯೋಜನಗಳ ಬಗ್ಗೆ ಅರಿವು ಮೂಡಿಸುವುದಾಗಿದೆ. ಈ ಸಪ್ತಾಹದಲ್ಲಿ ಅಂಚೆ ಸಿಬ್ಬಂದಿಗಳು ಪ್ರತಿಯೊಬ್ಬರನ್ನು ಭೇಟಿ ಮಾಡಿ ಅಂಚೆ ಇಲಾಖೆಯಲ್ಲಿ ಲಭ್ಯವಿರುವ್ವ ತ್ವರಿತ, ಸುರಕ್ಷಿತ ಮತ್ತು ಮಿತ […]