ಉಡುಪಿ: ಜ್ಯುವೆಲರಿ ವರ್ಕ್ ಶಾಪ್ ಗೆ ನುಗ್ಗಿದ ಕಳ್ಳರು; 6 ಲಕ್ಷ ಮೌಲ್ಯದ ಚಿನ್ನದ ಗಟ್ಟಿ ಕಳವು

ಉಡುಪಿ: ಉಡುಪಿ ಚಿತ್ತರಂಜನ್ ಸರ್ಕಲ್ ಬಳಿಯ ಜ್ಯುವೆಲರಿ ವರ್ಕ್ ಶಾಪ್ ವೊಂದಕ್ಕೆ ಸೋಮವಾರ ರಾತ್ರಿ ತಡರಾತ್ರಿ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿರುವ ಬಗ್ಗೆ ವರದಿಯಾಗಿದೆ. ಚಿನ್ನ ಮತ್ತು ಬೆಳ್ಳಿ ಕರಗಿಸುವ ‘ವೈಭವ್ ರಿಫೈನರ್’ ಎಂಬ ಅಂಗಡಿಯ ನಕಲಿ ಬೀಗ ಬಳಸಿ ಒಳನುಗ್ಗಿದ ಕಳ್ಳರು ಡ್ರಾವರ್‌ನ ನಕಲಿ ಬೀಗದಿಂದ 600 ಗ್ರಾಂ ತೂಕದ ಸುಮಾರು 6 ಲಕ್ಷ ರೂ. ಮೌಲ್ಯದ ಚಿನ್ನದ ಗಟ್ಟಿ ಮತ್ತು ಗೋಲ್ಡ್ ಲಿಕ್ವಿಡ್ ಸೇರಿದಂತೆ ವಿವಿಧ ಸೊತ್ತುಗಳನ್ನು ಕಳವು ಮಾಡಿರುವುದಾಗಿ […]
ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಮೌಲ್ಯಗಳನ್ನು ಬೆಳೆಸುತ್ತವೆ: ಅಜಯ್ ಪುರುಷೋತ್ತಮ ಶೆಟ್ಟಿ

ಮೂಲ್ಕಿ: ಕೃಷ್ಣನ ವೇಷ ಧರಿಸಿದಾಗ ಮಕ್ಕಳು ತೋರಿಸುವ ಸೃಜನಶೀಲತೆ, ಕಲಾತ್ಮಕತೆ ಹಾಗೂ ನೈಜ ಭಾವಪ್ರಕಟನೆಗಳು ನಮ್ಮನ್ನು ಶ್ರೀಕೃಷ್ಣನ ಬಾಲ್ಯ ಲೀಲೆಯ ನೆನಪಿಗೆ ತರುತ್ತವೆ. ಇಂತಹ ಸಾಂಸ್ಕೃತಿಕ ಚಟುವಟಿಕೆಗಳು ಮಕ್ಕಳ ಮನಸ್ಸಿನಲ್ಲಿ ಮೌಲ್ಯಗಳನ್ನು ಬೆಳೆಸುವುದರ ಜೊತೆಗೆ ಬಾಲಗೋಪಾಲರ ನಗುಮುಖ, ಅವರ ಸರಳತೆ ಮತ್ತು ಮಧುರ ನಟನೆ ಇಂದಿನ ಸ್ಪರ್ಧೆಯಲ್ಲಿ ಪ್ರತಿಯೊಬ್ಬ ಮಕ್ಕಳಿಂದ ಜೀವಂತವಾಗಲಿದೆ ಎಂದು ಉಡುಪಿಯ ಉಜ್ವಲ್ ಗ್ರೂಪ್ನ ಆಡಳಿತ ನಿರ್ದೇಶಕರಾದ ಅಜಯ್ ಪುರುಷೋತ್ತಮ ಶೆಟ್ಟಿ ತಿಳಿಸಿದರು. ಇವರು ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶಿಮಂತೂರಿನ ಶ್ರೀ ಶಾರದಾ […]
ಮಣಿಪಾಲ: ಸೆ.12ರಂದು ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರ ಉದ್ಘಾಟನೆ

ಉಡುಪಿ: ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಆಶ್ರಯದಲ್ಲಿ ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿ ಆರಂಭಿಸಿರುವ “ಬೌದ್ಧಿಕ ವಿಕಲಚೇತನರ ಕೌಶಲಾಭಿವೃದ್ಧಿ ತರಬೇತಿ ಕೇಂದ್ರದ ಉದ್ಘಾಟನೆ ಇದೇ ಸೆ.12ರಂದು ಬೆಳಿಗ್ಗೆ 9.30ಕ್ಕೆ ನಡೆಯಲಿದೆ ಎಂದು ಉಡುಪಿ ಜಿಲ್ಲಾ ವಿಶೇಷ ಮಕ್ಕಳ ಪೋಷಕರ ಸಂಘದ ಅಧ್ಯಕ್ಷ ಕೆ.ಎಸ್. ಜೈ ವಿಠಲ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೂತನ ತರಬೇತಿ ಕೇಂದ್ರವನ್ನು ಉದ್ಘಾಟಿಸಲಿದ್ದಾರೆ. ಉಡುಪಿ ಶಾಸಕ ಯಶ್ ಪಾಲ್ […]
ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಜನತಾ ಕಾಲೇಜಿನ ಮಡಿಲಿಗೆ ಅವಳಿ ಪ್ರಶಸ್ತಿಗಳು

ಹೆಮ್ಮಾಡಿ: ಪದವಿಪೂರ್ವ ಶಿಕ್ಷಣ ಇಲಾಖೆಯವರು ಕುಂದಾಪುರದ ಆರ್. ಎನ್ ಶೆಟ್ಟಿ ಪಿಯು ಕಾಲೇಜಿನಲ್ಲಿ ಆಯೋಜಿಸಿದ ತಾಲೂಕು ಮಟ್ಟದ ತ್ರೋಬಾಲ್ಸ್ಪರ್ಧೆಯಲ್ಲಿ ಭಾಗವಹಿಸಿದ ಜನತಾ ಪದವಿಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿದ್ಯಾರ್ಥಿಗಳಾದ ಸಾನ್ವಿ, ರಿತಿಷಾ, ಅನಘ, ಗ್ರೀಷ್ಮ, ಧೃತಿ , ಐಶು, ಭೂಮಿಕಾ, ದೀಕ್ಷಾ, ಅನಘ, ಸಿಂಚನ, ನಿಶ್ಮಿತಾ ಇವರುಗಳು ಕ್ರೀಡಾ ಸ್ಫೂರ್ತಿ ಮೆರೆದು ಕಾಲೇಜಿಗೆ ಕೀರ್ತಿ ತಂದಿರುತ್ತಾರೆ. ಹಾಗೆ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ವಿದ್ಯಾರ್ಥಿಗಳಾದ ಮೌನೇಶ್, ಯೋಗೀಶ್, […]
ರೋಚಕ ಕ್ವಾರ್ಟರ್ ಫೈನಲ್ ಪಂದ್ಯ; ಯುವ ಪ್ರತಿಭೆಗಳ ಆಟಕ್ಕೆ ಸಾಕ್ಷಿಯಾದ ಸುಬ್ರೋತೋ ಕಪ್

ಬೆಂಗಳೂರು: ಸೆ.8 ರಂದು ನಡೆದ 64ನೇ ಸುಬ್ರೋತೋ ಕಪ್ ಅಂತಾರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್‌ನ ಸಬ್ ಜೂನಿಯರ್ ಬಾಲಕರ (U-15) ವಿಭಾಗದ ಕ್ವಾರ್ಟರ್ ಫೈನಲ್ ಪಂದ್ಯಗಳು ರೋಚಕ ಕ್ಷಣಕ್ಕೆ ಸಾಕ್ಷಿಯಾಗಿವೆ. ಕ್ವಾರ್ಟರ್ ಫೈನಲ್ 1: ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) VS SFS ಹೈಯರ್ ಸೆಕಂಡರಿ ಸ್ಕೂಲ್ (ನಾಗಾಲ್ಯಾಂಡ್)ಮಿನರ್ವಾ ಪಬ್ಲಿಕ್ ಸ್ಕೂಲ್ (CISCE) SFS ಹೈಯರ್ ಸೆಕೆಂಡರಿ ಸ್ಕೂಲ್ (ನಾಗಾಲ್ಯಾಂಡ್) ವಿರುದ್ಧ 10-0 ಅಂತರದ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಲಗ್ಗೆಯಿಟ್ಟಿತು. ಲುಂಗ್ಡೆಮ್ (4’, 30’), ರಿಮೋಸಾನ್ (25’), […]