ಗಂಗೂಬಾಯಿ ಹಾನಗಲ್ ವಿವಿಯ ಜೂನಿಯರ್ ವಿಭಾಗದ ಪರೀಕ್ಷೆ: ಶ್ರೀನಿಧಿ ಭಟ್ ಆರೂರು ಡಿಸ್ಟಿಂಕ್ಷನ್ನಲ್ಲಿ ತೇರ್ಗಡೆ

ಉಡುಪಿ: ಕರ್ನಾಟಕ ರಾಜ್ಯ ಡಾ. ಗಂಗೂಬಾಯಿ ಹಾನಗಲ್ ಸಂಗೀತ ಮತ್ತು ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ನಡೆಸಿದ ಜೂನಿಯರ್ ವಿಭಾಗದ ಪರೀಕ್ಷೆಯಲ್ಲಿ ಶ್ರೀನಿಧಿ ಭಟ್ ಆರೂರು ಅವರು ಡಿಸ್ಟಿಂಕ್ಷನ್ನಲ್ಲಿ ಪಾಸಾಗಿದ್ದಾರೆ. ಅವರು ಆರೂರು ಲಕ್ಷ್ಮೀನಾರಾಯಣ ಭಟ್ ಹಾಗೂ ಸುನಿತಾ ಭಟ್ ಅವರ ಸುಪುತ್ರಿ. ಲಿಟಲ್ ರಾಕ್ ಇಂಡಿಯನ್ ಸ್ಕೂಲಿನ 9ನೇ ತರಗತಿ ವಿದ್ಯಾರ್ಥಿನಿಯಾಗಿದ್ದಾರೆ. ವಿದ್ವಾನ್ ಅಶ್ವಿನಿ ರಾವ್ ಅವರ ಶಿಷ್ಯ.
ಕುಂದಾಪುರ: ವೃದ್ಧಾಶ್ರಮ ಆರಂಭಿಸಲು ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಡಿ ಜಿಲ್ಲೆಯ ಕುಂದಾಪುರ ಕಂದಾಯ ಉಪವಿಭಾಗಕ್ಕೆ ಒಂದರಂತೆ ವೃದ್ಧಾಶ್ರಮವನ್ನು ಪ್ರಾರಂಭಿಸಲು, ಕನಿಷ್ಠ ಎರಡು ವರ್ಷಗಳಿಂದ ಅಸ್ಥಿತ್ವದಲ್ಲಿರುವ ಹಾಗೂ ಮೂಲಭೂತ ಸೌಕರ್ಯ ಹೊಂದಿರುವ ಅರ್ಹ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಅಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 30 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖಾ ಕಚೇರಿ, ಸಿ ಬ್ಲಾಕ್, ತಳಮಹಡಿ, ಕೆನರಾ ಬ್ಯಾಂಕ್ ಹತ್ತಿರ, ಜಿಲ್ಲಾ ಪಂಚಾಯತ್ […]
ಉಡುಪಿ:ನವೋದ್ಯಮ ಪ್ರಾರಂಭಿಸಲು ಉತ್ತೇಜನ : ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಯುವಕ ಹಾಗೂ ಯುವತಿಯರಿಗೆ ನವೋದ್ಯಮಗಳನ್ನು ಪ್ರಾರಂಭಿಸಲು ಉತ್ತೇಜನ ನೀಡುವ ಯೋಜನೆಯನ್ನು ವಿದ್ಯುನ್ಮಾನ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಇಲಾಖೆ ಸಹಯೋಗದೊಂದಿಗೆ Elevate (Minorities) -2025 ರಲ್ಲಿನ ಮಾರ್ಗಸೂಚಿಗಳೊಂದಿಗೆ ಜಾರಿಗೊಳಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ವೆಬ್‌ಸೈಟ್ https://eitbt.karnataka.gov.in/en ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಸೆಪ್ಟಂಬರ್ 15 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 080-2223100 ಅಥವಾ ಇ-ಮೇಲ್ [email protected] ಅನ್ನು ಸಂಪರ್ಕಿಸಬಹುದಾಗಿದೆ ಎಂದು ನಿಗಮದ ಜಿಲ್ಲಾ […]
ಕಾರ್ಕಳ: ಅಂಗನವಾಡಿಯಲ್ಲಿ ವಿವಿಧ ಹುದ್ದೆ: ಅರ್ಜಿ ಆಹ್ವಾನ

ಉಡುಪಿ: ಕಾರ್ಕಳ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 3 ಅಂಗನವಾಡಿ ಕಾರ್ಯಕರ್ತೆ ಹಾಗೂ 23 ಅಂಗನವಾಡಿ ಸಹಾಯಕಿಯರ ಗೌರವಸೇವೆಯ ಹುದ್ದೆಗಳ ನೇಮಕಾತಿಗಾಗಿ ಆಸಕ್ತ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ವೆಬ್‌ಸೈಟ್ https://karnemakaone.kar.nic.in/abcd/ ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವಾಗ ಮೊದಲನೇ ಹಂತದಲ್ಲಿ ಆನ್‌ಲೈನ್‌ನಲ್ಲಿ ನೀಡಲಾದ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ಭರ್ತಿ ಮಾಡಿ, ಎರಡನೇ ಹಂತದಲ್ಲಿ ಅರ್ಜಿದಾರರ ಸಹಿ ಹಾಗೂ ಭಾವಚಿತ್ರವನ್ನು ಅಪ್‌ಲೋಡ್ ಮಾಡಿ, ನಂತರ ಇ-ಸೈನ್ […]
ಉಡುಪಿ:ಮೋಜು ಮಸ್ತಿಗೆಂದು ತೆರಳಿ ನದಿಯಲ್ಲಿ ಮುಳುಗಿದ ಇಬ್ಬರ ರಕ್ಷಣೆ

ಉಡುಪಿ: ಮರವಂತೆಯ ಕೊಲ್ಲೂರು ನದಿಯಲ್ಲಿ ಮೋಜು ಮಸ್ತಿಗೆ ತೆರಳಿದ್ದು, ಪ್ರವಾಸಿಗರ ಬೋಟ್ ಮಗುಚಿ, ನೀರು ಪಾಲಾದ ಇಬ್ಬರನ್ನು ಎನ್.ಡಿ.ಆರ್.ಎಫ್ ತಂಡವು ರಕ್ಷಣೆ ಮಾಡಿ ಪ್ರಾಣಾಪಾಯದಿಂದ ಪಾರು ಮಾಡಿದೆ. ಜಿಲ್ಲೆಯಲ್ಲಿ ಪ್ರವಾಸಕ್ಕೆ ಆಗಮಿಸಿದ್ದ ಯುವಕರ ತಂಡವು ವಿವಿಧ ಸ್ಥಳಗಳನ್ನು ವೀಕ್ಷಿಸಿ, ಮರವಂತೆ ಗ್ರಾಮದ ವರಾಹಸ್ವಾಮಿ ದೇವಸ್ಥಾನದ ಮುಂಭಾಗ ಹರಿಯುವ ಕೊಲ್ಲೂರು ನದಿಯಲ್ಲಿ ದೋಣಿ ವಿಹಾರಕ್ಕೆ ಹೋದಂತಹ ಸಂದರ್ಭದಲ್ಲಿ ಅಲ್ಲಿದ್ದ ಪೊಲೀಸರು ದೋಣಿ ವಿಹಾರಕ್ಕೆ ನಿರ್ಬಂಧವಿರುವುದಾಗಿ ತಿಳಿಸಿದರೂ ಅದನ್ನು ಲೆಕ್ಕಿಸದೇ ಪ್ರಕ್ಷುಬ್ಧ ವಾತಾವರಣವಿದ್ದರೂ ನದಿಗೆ ತೆರಳಿದಾಗ ಭಾರೀ ಗಾಳಿಗೆ ಅವರುಗಳು […]