ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ KSRTC ಬಸ್ಗೆ ಬೆಂಕಿ; ಚಾಲಕನ ಸಮಯಪ್ರಜ್ಞೆಯಿಂದ 37 ಪ್ರಯಾಣಿಕರು ಪಾರು!

ಸುಬ್ರಹ್ಮಣ್ಯ: ಕುಕ್ಕೆ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ವೊಂದು ಆಕಸ್ಮಿಕವಾಗಿ ಬೆಂಕಿಗಾಹುತಿಯಾದ ಘಟನೆ ಶನಿವಾರ ರಾತ್ರಿ ಸುಬ್ರಹ್ಮಣ್ಯ–ಗುಂಡ್ಯ ರಾಜ್ಯ ಹೆದ್ದಾರಿಯ ಎರ್ಮಾಯಿಲ್ ಎಂಬಲ್ಲಿ ನಡೆದಿದೆ. ಚಾಲಕನ ಸಮಯಪ್ರಜ್ಞೆಯಿಂದ ಬಸ್ನಲ್ಲಿದ್ದ 37 ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ. ಕುಕ್ಕೆ ಸುಬ್ರಹ್ಮಣ್ಯದಿಂದ ಹಾಸನ ಮಾರ್ಗವಾಗಿ ಬೆಂಗಳೂರಿಗೆ ತೆರಳುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ ಕೆಎಸ್ಸಾರ್ಟಿಸಿ ಬಸ್ ಎರ್ಮಾಯಿಲ್ ಸಮೀಪ ತಲುಪಿದಾಗ ಬಸ್ನಿಂದ ಏಕಾಏಕಿ ಹೊಗೆ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ತಕ್ಷಣವೇ ಬಸ್ನ್ನು ನಿಲ್ಲಿಸಿ ಪ್ರಯಾಣಿಕರಿಗೆ ವಿಷಯ ತಿಳಿಸಿದ್ದಾನೆ. ಬಳಿಕ ಯಾವುದೇ […]
“ನಿರಂತರ ಅಧ್ಯಯನ ಗುರಿ ಸಾಧನೆಯ ಛಲವೊಂದೆ ಬದುಕಿನ ಯಶಸ್ವಿನ ಗುಟ್ಟು.” ರಾಜೇಶ್ ಪ್ರಸಾದ್

ಶಂಕರನಾರಾಯಣ:ವಿದ್ಯಾರ್ಥಿಗಳು ತಮ್ಮ ಕಾಲೇಜು ಶಿಕ್ಷಣದ ಅನಂತರವೂ ನಿರಂತರ ಅಧ್ಯಯನ ಶೀಲರಾಗ ಬೇಕು.ಯಾವುದೇ ಸ್ಪಧಾ೯ತ್ಮಕ ಪರೀಕ್ಷೆಯಲ್ಲಿ ಯಶಸ್ವಿಗಳಿಸ ಬೇಕಾದರೆ ಮನಸ್ಸಿನಲ್ಲಿ ಅವಿರತವಾದ ಛಲ..ಇದರೊಂದಿಗೆ ಸೇೂಲೆ ಗೆಲುವಿನ ಮೊದಲ ಹೆಜ್ಜೆ ಎಂದು ನಿರಂತರ ಪ್ರಯತ್ನ ಶೀಲರಾದಾಗ ಮುಂದಿನ ಯಶಸ್ವು ನಿಮ್ಮದಾಗುತ್ತದೆ.ಸಾಧನೆಗೆ ಯಾವುದೇ ಭಾಷೆ ತೊಡಕಲ್ಲ ಬದಲಾಗಿ ಭಾಷೆಯಲ್ಲಿ ಪ್ರಬುದ್ಧತೆ ಬೆಳೆಸಿಕೊಳ್ಳುವಂತೆ ಚಂಡೀಗಢ ಸರ್ಕಾರದ ಮುಖ್ಯ ಕಾರ್ಯದರ್ಶಿ ಎಚ್.ರಾಜೇಶ್ ಪ್ರಸಾದ್ ಹಿರಿಯ ಐ ಎ ಎಸ್.ಅಧಿಕಾರಿ ಅಭಿಪ್ರಾಯಿಸಿದರು.ಅವರು ಶಂಕರನಾರಾಯಣ ಪ್ರಥಮ ದಜೆ೯ಕಾಲೇಜು ಮತ್ತು ಸ್ನಾತಕೋತ್ತರ ಕೇಂದ್ರದ ವತಿಯಿಂದ ಹಮ್ಮಿಕೊಂಡ ಸ್ಪಧಾ೯ತ್ಮಕ ಪ್ರೇರಣಾ […]
ಹೆಚ್.ಪಿ.ವಿ ಲಸಿಕಾ ಅಭಿಯಾನ ಡಿ. 31 ರ ವರೆಗೆ ವಿಸ್ತರಣೆ

ಉಡುಪಿ: ಹೆಚ್.ಪಿ.ವಿ ಲಸಿಕಾ ಅಭಿಯಾನವನ್ನು ಫೆಬ್ರವರಿ 28 ರಂದು ಪ್ರಾರಂಭಿಸಲಾಗಿದ್ದು, ಸುಮಾರು 1.2 ಕೋಟಿ 14 ವರ್ಷ ವಯಸ್ಸಿನ ಬಾಲಕಿಯರಿಗೆ (14ನೇ ಹುಟ್ಟುಹಬ್ಬ ಆಚರಿಸಿ 15ನೇ ಹುಟ್ಟುಹಬ್ಬ ಆಚರಿಸದ ಬಾಲಕಿಯರು) ಲಸಿಕೆ ನೀಡುವುದು ಇದರ ಉದ್ದೇಶವಾಗಿದೆ. ಈಗಾಗಲೇ ಸುಮಾರು 159 ದೇಶಗಳಲ್ಲಿ ಈ ಲಸಿಕೆಯನ್ನು ನೀಡಲಾಗುತ್ತಿದೆ. ಗರ್ಭಕಂಠದ ಕ್ಯಾನ್ಸರ್ (Cervical Cancer) ಎಂದರೆ ಗರ್ಭಾಶಯದ ಕೆಳಭಾಗದಲ್ಲಿರುವ ಗರ್ಭಕಂಠದಲ್ಲಿ ಉಂಟಾಗುವ ಕ್ಯಾನ್ಸರ್. ಗರ್ಭಕಂಠದ ಕ್ಯಾನ್ಸರ್ನ ಸುಮಾರು 99.7% ಪ್ರಕರಣಗಳು ಹ್ಯೂಮನ್ ಪ್ಯಾಪಿಲೋಮಾ ವೈರಸ್ ಸೋಂಕಿಗೆ ಸಂಬoಧಿಸಿವೆ. ಭಾರತದಲ್ಲಿ ಮಹಿಳೆಯರಲ್ಲಿ […]
ಅರಿವು (ರಿನ್ಯೂವಲ್) ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ, ಡಿ-ಸಿ.ಇ.ಟಿ, ಪಿಜಿ-ಸಿ.ಇ.ಟಿ ಹಾಗೂ ನೀಟ್ ಸ್ನಾತಕೋತ್ತರ ಕೋರ್ಸುಗಳಾದ ವೈದ್ಯಕೀಯ (ಎಂ.ಬಿ.ಬಿ.ಎಸ್, ಎಂ.ಡಿ, ಎಂ.ಎಸ್), ದಂತ ವೈದ್ಯಕೀಯ (ಬಿ.ಡಿ.ಎಸ್, ಎಂ.ಡಿ.ಎಸ್), ಆಯುಷ್ (ಬಿ.ಆಯುಷ್, ಎಂ.ಆಯುಷ್), ಇಂಜಿನಿಯರಿoಗ್ & ಟೆಕ್ನಾಲಜಿ (ಬಿ.ಇ, ಬಿ.ಟೆಕ್, ಎಂ.ಇ., ಎಂ.ಟೆಕ್), ಬ್ಯಾಚುಲರ್ ಆಫ್ ಆರ್ಕಿಟೆಕ್ಚರ್ (ಬಿ.ಆರ್ಕ್, ಎಂ.ಆರ್ಕ್), ಎಂ.ಬಿ.ಎ, ಎಂ.ಸಿ.ಎ, ಎಲ್.ಎಲ್.ಬಿ, ಬಿ.ಎಸ್ಸಿ ಅಗ್ರಿಕಲ್ಚರ್, ಅಗ್ರಿ ಕಲ್ಚರ್ ಎಂಜಿನಿಯರಿoಗ್, ಹಾರ್ಟಿಕಲ್ಚರ್, ಡೈರಿ ಟೆಕ್ನಾಲಜಿ, ಫಾರೆಸ್ಟಿ, ವೆಟರ್ನರಿ & ಅನಿಮಲ್ ಸೈನ್ಸ್, ಫುಡ್ ಟೆಕ್ನಾಲಜಿ, ಬಯೋಟೆಕ್ನಾಲಜಿ, ಫಿಶರೀಸ್, ಸೆರಿಕಲ್ಚರ್, […]
ಸೆ. 9 ರಂದು ನೇರ ಸಂದರ್ಶನ

ಉಡುಪಿ: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ್ಸ್ನಲ್ಲಿ ಸೆಪ್ಟೆಂಬರ್ 09 ರಂದು ಬೆಳಗ್ಗೆ 10 ಗಂಟೆಗೆ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ ನಡೆಯಲಿದೆ. ಪಿ.ಯು.ಸಿ ಐ.ಟಿ.ಐ ಮತ್ತು ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ ದೂರವಾಣಿ ಸಂಖ್ಯೆ: 8105618291 ಮತ್ತು 9945856670, 9901472710 ಹಾಗೂ 8150961875 ಅನ್ನು […]